ಹುಲಿ ದಾಳಿಗೆ ರೈತ ಬಲಿ; ಅಧಿಕಾರಿಗಳ ನಿರ್ಲಕ್ಷ್ಯದ ಫಲ: ರೈತ ಸಂಘದ ಆಕ್ರೋಶ

Date:

ಚಾಮರಾಜನಗರ ಜಿಲ್ಲೆಯ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಸವಣ್ಣ ಮೃತಪಟ್ಟ ಹಿನ್ನೆಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘ ಆಗ್ರಹಿಸಿದೆ.

- Advertisement -

ಹುಲಿ ದಾಳಿಯಿಂದ ಮೃತಪಟ್ಟ ಬಸವಣ್ಣ ಅವರ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿತ್ತು. ಮೃತರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅವರನ್ನು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, “ಮೃತ ಬಸವಣ್ಣ ಅವರು ಅರಣ್ಯದೊಳಗೆ ಪ್ರವೇಶಿಸಿ ಕಾಡುಪ್ರಾಣಿಗಳ ದಾಳಿಗೆ ಬಲಿಯಾಗಿಲ್ಲ. ನಾಡಿಗೆ ಆಗಮಿಸಿದ ಹುಲಿಯಿಂದ ಈ ದುರ್ಘಟನೆ ಸಂಭವಿಸಿದೆ. ಹೀಗಾಗಿ ಇದು ಕೇವಲ ವನ್ಯಜೀವಿ ದಾಳಿ ಎಂದು ಪರಿಗಣಿಸದೆ, ಮಾನವ–ಪ್ರಾಣಿ ಸಂಘರ್ಷವನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಭವಿಸಿರುವ ಘಟನೆ ಎಂದು ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

ನಾಡಿನ ಜನರ ಸುರಕ್ಷತೆಗೆ ಅರಣ್ಯ ಇಲಾಖೆ ಹೆಚ್ಚಿನ ಆದ್ಯತೆ ನೀಡಬೇಕು. ಹುಲಿ ಸೇರಿದಂತೆ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಶಾಶ್ವತ ಹಾಗೂ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಪಾಯಕಾರಿ ಪ್ರದೇಶಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದಲೇ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಆರೋಪಿಸಿದ ಸಂಘದ ಮುಖಂಡರು, ಮಾನವ ಜೀವ ರಕ್ಷಣೆಗೆ ಸರ್ಕಾರ ತಕ್ಷಣವೇ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಮೈಸೂರು ಚಲೋ’: ಪ್ರಜಾರಾಜ್ಯಕ್ಕಾಗಿ ಹೋರಾಡಿ ಬಲಿಯಾದ ಧೀರ ಬಾಲಕ ಬಾಣಾವರದ ರಾಮಸ್ವಾಮಿ

ನಿಯೋಗದಲ್ಲಿ ಮಲಿಯೂರು ಮಹೇಂದ್ರ, ಗುರುವಿನಪುರ ಚಂದ್ರು, ಸ್ಯಾನೆಂಡ್ರಳ್ಳಿ ಬಸವರಾಜು, ನಾಗರಾಜಪ್ಪ, ಹೊನ್ನೇಗೌಡನಹಳ್ಳಿ ಮಹೇಶ್ ಸೇರಿದಂತೆ ರೈತ ಸಂಘದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...