ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

Date:

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಕರೆಗೆ ಅಂದಾಜು 80 ಟನ್ ಕಬ್ಬು ಬೆಳೆದು ಚಾಮರಾಜನಗರ ಜಿಲ್ಲೆಯ ಜ್ಯೋತಿಗೌಡನಪುರ ಗ್ರಾಮದ ರೈತ ಮಹೇಶ್ ಗಮನ ಸೆಳೆದಿದ್ದಾರೆ.

- Advertisement -

ಹೊಂಡರಬಾಳು-ಜ್ಯೋತಿಗೌಡನಪುರ ಪಂಚಾಯಿತಿ ವ್ಯಾಪ್ತಿಯ ಅಮೃತಭೂಮಿ ಅಂತರರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕಲಿಕಾ ಕೇಂದ್ರದ ಮಾರ್ಗದರ್ಶನ ಹಾಗೂ ನಟರಾಜು ಅವರ ಸಹಕಾರದೊಂದಿಗೆ ಮಹೇಶ್ ಅವರು CO 6175 ತಳಿಯ ಮಂಡ್ಯ ಬಿಳಿ ಕಬ್ಬನ್ನು ವಿಷಮುಕ್ತ ಹಾಗೂ ಸುಸ್ಥಿರ ಕೃಷಿಯ ಗುಳಿ ಪದ್ಧತಿಯಲ್ಲಿ ಬೆಳೆದಿದ್ದಾರೆ. ಈ ಕಬ್ಬನ್ನು ಚಾಮರಾಜನಗರದಲ್ಲಿ ನಡೆದ ರೈತ ದಸರಾದಲ್ಲಿ ಪ್ರದರ್ಶಿಸಲಾಗಿದ್ದು, ರೈತರು ಮತ್ತು ಸಾರ್ವಜನಿಕರ ಗಮನ ಸೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಸಾಂಪ್ರದಾಯಿಕ ಕೃಷಿ ಪದ್ಧತಿಗಳಿಗೆ ಪರ್ಯಾಯವಾಗಿ ಅನುಸರಿಸಲಾದ ಗುಳಿ ಪದ್ಧತಿಯಲ್ಲಿ ಕಬ್ಬು ಬೆಳೆಯಲಾಗಿದೆ. ಈ ಪದ್ಧತಿಯಲ್ಲಿ ಸಾಲಿನಿಂದ ಸಾಲಿಗೆ 6 ಅಡಿ ಹಾಗೂ ಗುಳಿಯಿಂದ ಗುಳಿಗೆ 4 ಅಡಿ ಅಂತರವನ್ನು ಕಾಯ್ದುಕೊಳ್ಳಲಾಗಿದೆ. 8×6 ಅಥವಾ 6×6 ಅಡಿ ಅಂತರದಂತಹ ವಿನ್ಯಾಸಗಳನ್ನೂ ಸೂಕ್ತ ಪರಿಸ್ಥಿತಿಯಲ್ಲಿ ಪರಿಗಣಿಸಬಹುದು ಎಂದು ಕೃಷಿ ಪದ್ಧತಿಯ ಕುರಿತು ತಿಳಿಸಲಾಗಿದೆ.

ಬೆಳೆ ನಿರ್ವಹಣೆಗೆ ಹೊರಗಿನಿಂದ ಖರೀದಿಸುವ ಕೃಷಿ ಒಳಸುರಿಗಳನ್ನು ಅವಲಂಬಿಸದೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳಲಾಗಿದೆ. ಗೋನಂದಾಜಲ, ದ್ರವ ಜೀವಾಮೃತ, ಕಾಂಪೋಸ್ಟ್ ಹಾಗೂ ಘನ ಜೀವಾಮೃತದಂತಹ ನೈಸರ್ಗಿಕ ಸಂಪನ್ಮೂಲಗಳ ನೆರವಿನಿಂದ ಮಣ್ಣಿನ ಫಲವತ್ತತೆ ಮತ್ತು ಬೆಳೆ ಬೆಳವಣಿಗೆಗೆ ಆದ್ಯತೆ ನೀಡಲಾಗಿದೆ. ತೀವ್ರ ಬರದ ಪರಿಸ್ಥಿತಿಯ ನಡುವೆಯೂ ಕಡಿಮೆ ನೀರಿನ ಅವಲಂಬನೆಯೊಂದಿಗೆ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗಿದೆ ಎಂದು ರೈತರು ತಿಳಿಸಿದ್ದಾರೆ. ಈ ಪದ್ಧತಿಯಲ್ಲಿ ಎಕರೆಗೆ ಅಂದಾಜು 80 ಟನ್ ಕಬ್ಬು ಬೆಳೆದಿರುವುದು ಕೃಷಿ ವಲಯದ ಗಮನ ಸೆಳೆದಿದೆ.

ಚಾಮರಾಜನಗರದಲ್ಲಿ ನಡೆದ ರೈತ ದಸರಾ ಸಂದರ್ಭದಲ್ಲಿ ನದ್ದು ರೈತ ಉತ್ಪಾದಕ ಕಂಪನಿಯ ಮಳಿಗೆಯಲ್ಲಿ ಈ ಕಬ್ಬನ್ನು ಪ್ರದರ್ಶಿಸಲಾಗಿತ್ತು. ಉತ್ತಮ ಬೆಳವಣಿಗೆ ಹೊಂದಿದ್ದ ಕಬ್ಬು ಪ್ರದರ್ಶನಕ್ಕೆ ಬಂದಿದ್ದ ರೈತರಲ್ಲಿ ಕುತೂಹಲ ಮೂಡಿಸಿತು. ರಾಸಾಯನಿಕ ಗೊಬ್ಬರಗಳು ಮತ್ತು ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆಯೂ ಕಬ್ಬು ಬೆಳೆಯುವ ಸಾಧ್ಯತೆಯನ್ನು ಈ ಪ್ರಯತ್ನವು ಪರಿಚಯಿಸಿತು.

ಮಣ್ಣಿನ ಫಲವತ್ತತೆಯನ್ನು ಕಾಪಾಡುವುದು, ಸ್ಥಳೀಯ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು, ಜಲಸಂಪನ್ಮೂಲದ ಸಮರ್ಪಕ ನಿರ್ವಹಣೆ ಹಾಗೂ ಕೃಷಿ ವೆಚ್ಚವನ್ನು ಕಡಿಮೆ ಮಾಡುವುದು ಈ ಮಾದರಿಯ ಪ್ರಮುಖ ಉದ್ದೇಶಗಳಾಗಿವೆ. ಕೃಷಿಯಲ್ಲಿ ರಾಸಾಯನಿಕಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವುದರ ಜೊತೆಗೆ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ರೈತರನ್ನು ಪ್ರೇರೇಪಿಸುವ ಪ್ರಯತ್ನವೂ ಇದಾಗಿದೆ.

ರಾಸಾಯನಿಕ ಗೊಬ್ಬರಗಳು ಮತ್ತು ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳಿಲ್ಲದೆ ಕಬ್ಬು ಬೆಳೆಯಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ಪರ್ಯಾಯವಾಗಿ ಈ ಕೃಷಿ ಪ್ರಯೋಗವನ್ನು ಮುಂದಿಡಲಾಗಿದೆ. ಸ್ಥಳೀಯ ಸಂಪನ್ಮೂಲಗಳು, ವೈಜ್ಞಾನಿಕ ತಿಳಿವಳಿಕೆ, ರೈತರ ಅನುಭವ ಮತ್ತು ಸೂಕ್ತ ಮಾರ್ಗದರ್ಶನವನ್ನು ಸಮನ್ವಯಗೊಳಿಸುವ ಮೂಲಕ ಸುಸ್ಥಿರ ಕೃಷಿಯತ್ತ ಸಾಗಬಹುದು ಎಂಬುದನ್ನು ಈ ಪ್ರಯತ್ನ ತೋರಿಸಿದೆ. “ಇಡೀ ಭೂಮಿಯನ್ನು ಅಮೃತಭೂಮಿಯನ್ನಾಗಿಸಬಹುದು” ಎಂಬ ಆಶಯವನ್ನು ವ್ಯಕ್ತಪಡಿಸಿರುವ ರೈತ ಮಹೇಶ್, ಅಮೃತಭೂಮಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಹಕಾರದಿಂದ ಇಂತಹ ಕೃಷಿ ಪ್ರಯತ್ನಗಳನ್ನು ಮುಂದುವರಿಸಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

ರಾಸಾಯನಿಕ ಕೃಷಿಯಿಂದ ಸುಸ್ಥಿರ ಹಾಗೂ ವಿಷಮುಕ್ತ ಕೃಷಿಯತ್ತ ಹೆಜ್ಜೆ ಇಡಲು ರೈತರಿಗೆ ಪ್ರಾಯೋಗಿಕ ತರಬೇತಿ, ಸ್ಥಳೀಯ ಸಂಪನ್ಮೂಲಗಳ ಬಳಕೆಯ ಕುರಿತು ಅರಿವು ಮತ್ತು ಅನುಭವ ಹಂಚಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಮೃತಭೂಮಿ ಅಂತರರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕಲಿಕಾ ಕೇಂದ್ರವು ರೈತರಿಗೆ ತರಬೇತಿ, ಮಾರ್ಗದರ್ಶನ ಹಾಗೂ ಪ್ರಾಯೋಗಿಕ ಕಲಿಕೆಯ ಅವಕಾಶಗಳನ್ನು ಒದಗಿಸುತ್ತಿದೆ. ಕೃಷಿ ವೆಚ್ಚವನ್ನು ತಗ್ಗಿಸುವುದು, ಮಣ್ಣಿನ ಆರೋಗ್ಯವನ್ನು ಕಾಪಾಡುವುದು ಮತ್ತು ನೀರಿನ ಸಮರ್ಪಕ ಬಳಕೆಗೆ ಆದ್ಯತೆ ನೀಡುವ ಇಂತಹ ಪ್ರಯತ್ನಗಳು ಸುಸ್ಥಿರ ಕೃಷಿಯ ಸಾಧ್ಯತೆಗಳ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...