ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

Date:

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ ದಸರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಉತ್ಸವದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚಾಮರಾಜನಗರ ದಸರಾ ಉತ್ಸವ-2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇದ್ದರೂ ದಸರಾ ಆಚರಣೆಗೆ ಸರ್ಕಾರ ಅವಕಾಶ ನೀಡಿದೆ. ಇದರಿಂದ ಜಿಲ್ಲೆಯ ಜನರ ಬಹುದಿನಗಳ ಅಭಿಲಾಷೆ ಈಡೇರಿದಂತಾಗಿದೆ. ಕಡಿಮೆ ಅವಧಿಯಲ್ಲಿ ದಸರಾ ಆಯೋಜಿಸಬೇಕಿರುವುದರಿಂದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೂರು ದಿನಗಳ ದಸರಾ ಮಹೋತ್ಸವದಲ್ಲಿ ರೈತ ದಸರಾ, ಮಹಿಳಾ ದಸರಾ, ಯುವಸಂಭ್ರಮ, ಮ್ಯಾರಥಾನ್, ಪಾರಂಪರಿಕ ನಡಿಗೆ, ದಸರಾ ಓಟ ಹಾಗೂ ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯ ವೇದಿಕೆಯಲ್ಲಿ ರಸಮಂಜರಿ ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಇದರೊಂದಿಗೆ ಆಹಾರ ಮೇಳ, ಪುಸ್ತಕ ಮೇಳ, ವಸ್ತುಪ್ರದರ್ಶನ ಹಾಗೂ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತದೆ. ಈ ಬಾರಿ ಹೆಲಿಕಾಪ್ಟರ್ ಶೋ ಕೂಡ ಉತ್ಸವದ ವಿಶೇಷ ಆಕರ್ಷಣೆಯಾಗಲಿದೆ.

ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರಮುಖ ಪ್ರವೇಶದ್ವಾರಗಳಲ್ಲಿ ಸ್ವಾಗತ ಕಮಾನುಗಳನ್ನು ನಿರ್ಮಿಸಿ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳಿಗೆ ಅವಕಾಶ ಕಲ್ಪಿಸಬೇಕು. ಜಿಲ್ಲೆಯ ಎಲ್ಲಾ ಕಲಾವಿದರಿಗೂ ಸಮಾನ ಅವಕಾಶ ನೀಡುವಂತೆ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ಡಾ. ರಾಜ್‌ಕುಮಾರ್ ರಂಗಮಂದಿರ, ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಯುವಸಂಭ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.

ಈ ವಿಶೇಷ ವೀಡಿಯೊ ವೀಕ್ಷಿಸಿದ್ದೀರಾ? https://youtu.be/LjQ1qNssx5g?si=y5cdupVPajc7Fdi-

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ, ನಗರದ ಪ್ರಮುಖ ಪ್ರವೇಶದ್ವಾರಗಳಲ್ಲಿ ವಿಶೇಷ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸಬೇಕು ಎಂದರು. ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ದಸರಾ ಕಾರ್ಯಕ್ರಮಗಳ ಸುಗಮ ನಿರ್ವಹಣೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ದಸರಾವನ್ನು ಯಶಸ್ವಿಯಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...