ಗುಂಡ್ಲುಪೇಟೆ | ಕಾಡು ಪ್ರಾಣಿಗಳ ಬೇಟೆಗೆ ಅಕ್ರಮ ಶಸ್ತ್ರ ಸಾಗಣೆ: ನಾಲ್ವರು ಬಂಧನ

Date:

ಕಾಡು ಪ್ರಾಣಿಗಳ ಬೇಟೆಗೆ ಬಳಸಲು ಅಕ್ರಮವಾಗಿ ನಾಡ ಬಂದೂಕುಗಳು ಹಾಗೂ ಜೀವಂತ ಕಾರ್ಟ್ರಿಜ್‌ಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ಬಂದೂಕುಗಳು, 18 ಕಾರ್ಟ್ರಿಜ್‌ಗಳು, ಎರಡು ಚಾಕುಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಬಂಧಿತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಗೂರು ಗ್ರಾಮದ ಕುಮಾರಪ್ಪ, ಸುನೀಲ್‌, ದಿನೇಶ್ ಹಾಗೂ ಕಾಂತ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತೆರಕಣಾಂಬಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಜವರೇಗೌಡ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿ ಠಾಣೆ ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಕೆಎ-12-ಪಿ-7106 ಸಂಖ್ಯೆಯ ಮಾರುತಿ ಓಮ್ನಿ ಕಾರನ್ನು ತಡೆದು ಪರಿಶೀಲಿಸಿದರು.

ತಪಾಸಣೆ ವೇಳೆ ಕಾರಿನಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಳಸಲಾಗುತ್ತಿದ್ದ ಎರಡು ಒಂಟಿ ನಳಿಕೆಯ ಬಂದೂಕುಗಳು, ಒಂದು ನಾಡ ಬಂದೂಕು, ಪ್ಲಾಸ್ಟಿಕ್ ಕವರ್‌ನಲ್ಲಿ ಇರಿಸಲಾಗಿದ್ದ 18 ಜೀವಂತ ಕಾರ್ಟ್ರಿಜ್‌ಗಳು ಹಾಗೂ ಎರಡು ಕಬ್ಬಿಣದ ಚಾಕುಗಳು ಪತ್ತೆಯಾಗಿವೆ.

ಶಸ್ತ್ರಾಸ್ತ್ರಗಳನ್ನು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನದ ಮೇರೆಗೆ ಪೊಲೀಸರು ನಾಲ್ವರನ್ನು ಸ್ಥಳದಲ್ಲೇ ಬಂಧಿಸಿ, ಶಸ್ತ್ರಾಸ್ತ್ರಗಳು ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? SIR ಪರಿಷ್ಕೃತ ವೇಳಾಪಟ್ಟಿ: ರಾಜ್ಯದಲ್ಲಿ ಶೇ.95.69ರಷ್ಟು ಎಣಿಕೆ ನಮೂನೆ ವಿತರಣೆ; ಜಿಲ್ಲಾವಾರು ಪ್ರಗತಿ ಹೇಗಿದೆ?

ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳು ಕಾಡು ಪ್ರಾಣಿಗಳ ಬೇಟೆ ಉದ್ದೇಶದಿಂದಲೇ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದರೇ ಎಂಬುದು ಸೇರಿದಂತೆ ಇತರ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...