ಹನೂರು | ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರ ಬಲಿ ಪ್ರಕರಣ: ಮನವೊಲಿಕೆ ಸಫಲ, ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Date:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಶುಕ್ರವಾರ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ ನಡೆಸಿ ಮೂವರನ್ನು ಬಲಿ ಪಡೆದ ಘಟನೆ ಖಂಡಿಸಿ, ಮೃತರ ಕುಟುಂಬಸ್ಥರು ಮತ್ತು ತೋಮಿಯಾರ್ ಪಾಳ್ಯ ಸುತ್ತಮುತ್ತಲಿನ ಗ್ರಾಮಸ್ಥರು ನಡೆಸುತ್ತಿದ್ದ ಹೋರಾಟವನ್ನು ಕೈಬಿಟ್ಟಿದ್ದಾರೆ. ಹನೂರು ಶಾಸಕ ಎಂ ಆರ್ ಮಂಜುನಾಥ್ ಅವರು ಪ್ರತಿಭಟನಾನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಹನೂರು ಪಟ್ಟಣದಲ್ಲಿ ಭಾನುವಾರ ನಡೆಯುತ್ತಿದ್ದ ಕುಟುಂಬಸ್ಥರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ ಆರ್ ಮಂಜುನಾಥ್ ಅವರು, ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ದು, “ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಒಟ್ಟು 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯ ಹೊಣೆಯನ್ನು ಮ್ಯಾಜಿಸ್ಟ್ರೇಟ್‌ಗೆ ವಹಿಸಿದೆ. ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಮನವರಿಕೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಸರ್ಕಾರದಿಂದ ತಾತ್ಕಾಲಿಕವಾಗಿ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಜತೆಗೆ ವೈಯಕ್ತಿಕವಾಗಿ ತಾನು 10 ರೂ. ಲಕ್ಷ ಪರಿಹಾರ ನೀಡಲಿದ್ದು, ಒಟ್ಟು 15 ಲಕ್ಷ ರೂ. ಪರಿಹಾರ ನೀಡಲಾಗುವುದು” ಎಂದು ತಿಳಿಸಿದರು.

“ಗುಂಡು ಹಾರಿಸಿದ ಪ್ರಕರಣ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ತನಿಖಾ ತಂಡವನ್ನೂ ರಚಿಸಲಾಗಿದ್ದು, ವರದಿ ಸಲ್ಲಿಕೆಯಾದ ಬಳಿಕ ಸತ್ಯಾಂಶ ತಿಳಿಯಲಿದೆ” ಎಂದು ಹೇಳಿದರು.

“ಶಾಸಕರು ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ನಮ್ಮ ಹೋರಾಟವನ್ನು ವಾಪಸ್ ಪಡೆಯುತ್ತಿದ್ದೇವೆ” ಎಂದು ರೈತ ಮುಖಂಡರು ಘೋಷಣೆ ಮಾಡಿದರು.

ಧರಣಿನಿರತರು ಶಾಂತರಾದ ಹಿನ್ನೆಲೆಯಲ್ಲಿ ನಿನ್ನೆಯಿಂದಲೂ ಬಂದ್​ ಆಗಿದ್ದ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ. ಪಟ್ಟಣದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಮೂರು ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಸಂಜೆ ವೇಳೆಗೆ ವಾರಸುದಾರರು ಶವಗಳನ್ನು ಸ್ವಗ್ರಾಮಕ್ಕೆ ಕೊಂಡೊಯ್ಯಲಿದ್ದಾರೆ

ಇದಕ್ಕೂ ಮುನ್ನ ಪ್ರಕರಣದ ಬಗ್ಗೆ ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಕೊಳ್ಳೇಗಾಲ ಉಪವಿಭಾಗಾಧಿಕಾರಿ(ಎಸಿ) ದಿನೇಶ್ ಕುಮಾರ್ ಮೀನಾ, “ಅರಣ್ಯ ಸಿಬ್ಬಂದಿಯ ಗುಂಡಿನ ದಾಳಿಗೆ ಮೂವರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ತನಿಖಾ ವರದಿ ಸಲ್ಲಿಸಲು 7 ದಿನ ಕಾಲಾವಕಾಶ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ.‌ ಈಗಾಗಲೇ ತನಿಖೆ ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ.‌ ಗುಂಡೇಟಿಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಏನಿದು ಘಟನೆ?

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಅಂಥೋಣಿ ಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂಬ ಮೂವರು ಬಲಿಯಾಗಿದ್ದರು.

ಇದನ್ನೂ ಓದಿದ್ದೀರಾ? ಬೆಳಗಾವಿ | 80 ವರ್ಷಗಳ ಸ್ವಾತಂತ್ರ್ಯದ ಬಳಿಕವೂ ಅಲೆಮಾರಿಗಳ ಬದುಕಿಗೆ ಮೂಲಸೌಕರ್ಯ ಮರೀಚಿಕೆ

ಶುಕ್ರವಾರ ರಾತ್ರಿ ಅರಣ್ಯ ಪ್ರದೇಶದಲ್ಲಿ ಆರು ಮಂದಿ ಬೇಟೆಗಾರರ ತಂಡ ಜಿಂಕೆಯನ್ನು ಬೇಟೆಯಾಡಿತ್ತು. ಗಸ್ತಿನಲ್ಲಿದ್ದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಬೇಟೆಗಾರರು ಗುಂಡು ಹಾರಿಸಿದ್ದರು. ಇದಕ್ಕೆ ಪ್ರತಿಯಾಗಿ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ ವೇಳೆ ಇಬ್ಬರು ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಮೃತರ ಸಂಬಂಧಿಕರು ಅರಣ್ಯ ಇಲಾಖೆಯ ಕಚೇರಿಯನ್ನು ಧ್ವಂಸಗೊಳಿಸಿದ್ದು, ಪ್ರತಿಭಟನೆ ಕೈಗೊಂಡಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಮುಂಜಾಗರೂಕವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...