ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ.
ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿ ವಾಸವಿರುವ ಚಂಗಡಿ ಗ್ರಾಮದ ಮಧುಸೂದನ್, ಸ್ನೇಹಿತರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲು ತೀರ್ಮಾನಿಸಿ ಗ್ರಾಮಕ್ಕೆ ಆಗಮಿಸಿದ್ದರು. ಶನಿವಾರ ಸಂಜೆ ಐವರು ಸ್ನೇಹಿತರು ಚಂಗಡಿ ಗ್ರಾಮದ ಕರಿ ಕಲ್ಲು ಕೋರೆಯ ಸಮೀಪ ಬಹಿರ್ದೆಸೆಗೆ ತೆರಳಿದ್ದರು.ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು
ತೀವ್ರ ಗಾಯಗೊಂಡಿದ್ದ ತಕ್ಷಣ ಸ್ನೇಹಿತರು ಕಾರಿನಲ್ಲಿ ಸಮೀಪದ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯಲ್ಲಿ ತಿಳಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.