ಗುಂಡ್ಲುಪೇಟೆ | ರೈತರಿಗೆ ಅವಮಾನ ಖಂಡನೀಯ; ಶಾಸಕ ಗಣೇಶ್ ಪ್ರಸಾದ್ ಕ್ಷಮೆಯಾಚಿಸಲಿ: ನಿರಂಜನ್ ಕುಮಾರ್

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ನಡೆದ ರೈತ ಸಂಘದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ರೈತ ಮುಖಂಡರಿಗೆ ಅವಮಾನ ಮಾಡಿರುವ ಘಟನೆ ಖಂಡನೀಯವಾಗಿದ್ದು, ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರು ಸಾರ್ವಜನಿಕವಾಗಿ ರೈತರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆಗ್ರಹಿಸಿದರು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಾಲ್ಲೂಕು ಕಚೇರಿ ಎದುರು ನಡೆದ ರೈತ ಸಂಘದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳು ಹಾಗೂ ತಾಲೂಕಿನ ರೈತ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಗಣೇಶ್ ಪ್ರಸಾದ್ ಅವರನ್ನು ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಹಂಗಳ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಹಾಗೂ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳ ಕುರಿತು ರೈತರು ಪ್ರಶ್ನಿಸಿದಾಗ, ಸಮರ್ಪಕ ಉತ್ತರ ನೀಡುವ ಬದಲು ಅಸಮಾಧಾನ ವ್ಯಕ್ತಪಡಿಸಿ ಸ್ಥಳದಿಂದ ತೆರಳಿದರು ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನಂತರ ಶಾಸಕರ ಬೆಂಬಲಿಗರು ರೈತ ಮುಖಂಡರೊಂದಿಗೆ ವಾಗ್ವಾದ ನಡೆಸಿ ತಳ್ಳಾಟ-ನೂಕಾಟ ನಡೆಸಿರುವುದು ಖಂಡನೀಯ. ಅನ್ನದಾತ ರೈತರನ್ನು ಅವಮಾನಿಸುವುದು ಇಡೀ ರೈತ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ. ಘಟನೆಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಹಂಗಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬಸ್ ನಿಲ್ದಾಣ ನಿರ್ಮಾಣ, ಹದಗೆಟ್ಟ ರಸ್ತೆಗಳ ಅಭಿವೃದ್ಧಿ, ರೈತರಿಗೆ ಪರಿಹಾರ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತಹ ಹಲವು ಪ್ರಮುಖ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವುದು ಜನಪ್ರತಿನಿಧಿಗೆ ಶೋಭೆಯಲ್ಲ ಎಂದು ಟೀಕಿಸಿದರು.

ಕೇರಳಕ್ಕೆ ಜಾನುವಾರುಗಳ ಅಕ್ರಮ ಸಾಗಣೆ, ಅಕ್ರಮ ಪಡಿತರ ಅಕ್ಕಿ ಸಾಗಣೆ, ಗಾಂಜಾ, ಲಾಟರಿ ಹಾಗೂ ಖನಿಜ ಸಂಪತ್ತಿನ ಅಕ್ರಮ ಲೂಟಿ ಪ್ರಕರಣಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಪಕ್ಕದ ತಾಲೂಕುಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆಯುತ್ತಿದ್ದರೂ ಗುಂಡ್ಲುಪೇಟೆ ತಾಲೂಕಿನ ರೈತರು ಮಾತ್ರ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆ ಕೈಕೊಟ್ಟರೂ ತಂಬಾಕು ಕೈಬಿಡಲಿಲ್ಲ: ಮೈಸೂರು ಜಿಲ್ಲೆಯಲ್ಲಿ ಬರದ ನಡುವೆಯೂ ಮುಂದುವರಿದ ತಂಬಾಕು ಕೃಷಿ

ರೈತರನ್ನು ಗೌರವದಿಂದ ಕಾಣಬೇಕು ಹಾಗೂ ರೈತ ಮುಖಂಡರಿಗೆ ನಡೆದಿರುವ ಅವಮಾನಕ್ಕೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ನಿರಂಜನ್ ಕುಮಾರ್ ಒತ್ತಾಯಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಮಾಜಿ ಪುರಸಭೆ ಅಧ್ಯಕ್ಷ ಜಿಡಿಎಲ್ ಸುರೇಶ್, ಮಾಜಿ ತಾಪಂ ಅಧ್ಯಕ್ಷ ಡಿ. ಮಾದಪ್ಪ (ಸ್ವಾಮಿ), ಅಗತಗೌಡನಹಳ್ಳಿ ಬಸವರಾಜು, ಮಾಜಿ ಪುರಸಭೆ ಸದಸ್ಯ ನಾಗೇಶ್, ಪ್ರಧಾನ ಕಾರ್ಯದರ್ಶಿ ಮಹೇಂದ್ರ ಗರಗನಹಳ್ಳಿ, ಮಾಡ್ರಹಳ್ಳಿ ನಾಗೇಂದ್ರ, ಹನುಮಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...