ಚಾಮರಾಜನಗರದಲ್ಲಿ ಅ.24ರಿಂದ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ

Date:

ಬುದ್ಧನ ಕರುಣೆ, ಸಮಾನತೆ, ಸಹಬಾಳ್ವೆ ಹಾಗೂ ಬಹುತ್ವದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಎರಡು ದಿನಗಳ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ಆಯೋಜಿಸಲಾಗಿದೆ.

- Advertisement -

ಕಳೆದ ವರ್ಷ ಮೈಸೂರಿನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ಯಶಸ್ವಿಯಾಗಿದ್ದು, ಈ ಬಾರಿ ಚಾಮರಾಜನಗರದಲ್ಲಿ ಎರಡನೇ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ವಿಚಾರಗೋಷ್ಠಿಗಳು, ಸಂವಾದಗಳು, ಧಮ್ಮ ಕವಿಗೋಷ್ಠಿ, ಮಕ್ಕಳ ಮೈತ್ರಿ ಕಾರ್ಯಕ್ರಮ, ಮಹಿಳಾ ದುಂಡುಮೇಜಿನ ಸಭೆ, ಯುವ ದುಂಡುಮೇಜಿನ ಸಭೆ ಹಾಗೂ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಅ.24ರಂದು ಧಮ್ಮ ನಡಿಗೆ, ಸಮ್ಮೇಳನ ಉದ್ಘಾಟನೆ

ಅಕ್ಟೋಬರ್ 24ರಂದು ಬೆಳಿಗ್ಗೆ 7 ಗಂಟೆಗೆ ನಗರದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂಭಾಗದಿಂದ ಧಮ್ಮ ನಡಿಗೆ ಮೆರವಣಿಗೆ ಆರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಕೊಲಂಬೊ ವಿಶ್ವವಿದ್ಯಾಲಯದ ಶೀಲವಂತ ಮಹಾಥೇರೋ ಬಂತೇಜಿ ಹಾಗೂ ಟಿ.ನರಸೀಪುರದ ನಳಂದ ಬೌದ್ಧ ವಿಹಾರದ ಬೋಧಿರತ್ನ ಬಂತೇಜಿ ದೀಪ ಬೆಳಗಿಸಲಿದ್ದಾರೆ. ಮನೋರಖ್ಖಿತ ಬಂತೇಜಿ ಧಮ್ಮ ಧ್ವಜಾರೋಹಣ ನೆರವೇರಿಸಲಿದ್ದಾರೆ.

ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಸಮ್ಮೇಳನವನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

‘ಬುದ್ಧ ಮತ್ತು ಬಹುತ್ವ’ ಕುರಿತು ವಿಚಾರಗೋಷ್ಠಿ

ಅಂದು ಸಂಜೆ 4 ಗಂಟೆಗೆ ‘ಬುದ್ಧ ಮತ್ತು ಬಹುತ್ವ’ ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನದ ಗೌರವಾಧ್ಯಕ್ಷ ಮನೋರಖ್ಖಿತ ಬಂತೇಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಕುಂದೂರು ಮಠದ ಶರತ್‌ಚಂದ್ರ ಸ್ವಾಮೀಜಿ ಹಾಗೂ ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಬೌದ್ಧ ಧಮ್ಮದ ತತ್ವಗಳು, ಸಮಾನತೆ, ಕರುಣೆ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ವಿವಿಧ ಸಮುದಾಯಗಳ ನಡುವಿನ ಸಹಬಾಳ್ವೆಯ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಅ.25ರಂದು ಸಮ್ಮೇಳನದ ಎರಡನೇ ದಿನ

ಅಕ್ಟೋಬರ್ 25ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ಎರಡನೇ ದಿನದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಚಿವರು, ಶಾಸಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಬುದ್ಧಪ್ರಜ್ಞ ವೇದಿಕೆಯಲ್ಲಿ ಯುವ ದುಂಡುಮೇಜಿನ ಸಭೆ ನಡೆಯಲಿದೆ. ಯುವಜನರಲ್ಲಿ ಬುದ್ಧನ ಚಿಂತನೆ, ಸಾಮಾಜಿಕ ಜವಾಬ್ದಾರಿ, ಸಮಾನತೆ ಮತ್ತು ಮೈತ್ರಿಭಾವ ಬೆಳೆಸುವ ನಿಟ್ಟಿನಲ್ಲಿ ಸಂವಾದಗಳು ನಡೆಯಲಿವೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಕಲಾತಂಡಗಳು ಸಮ್ಮೇಳನದಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿವೆ. ಧಮ್ಮ ಕವಿಗೋಷ್ಠಿ, ಮಕ್ಕಳ ಮೈತ್ರಿ ಕಾರ್ಯಕ್ರಮ ಹಾಗೂ ಮಹಿಳಾ ದುಂಡುಮೇಜಿನ ಸಭೆಗಳೂ ಸಮ್ಮೇಳನದ ಪ್ರಮುಖ ಆಕರ್ಷಣೆಗಳಾಗಿವೆ.

ಸಮಾರೋಪ ಭಾಷಣ ಮಾಡಲಿರುವ ಸಿದ್ದರಾಮಯ್ಯ

ಅಕ್ಟೋಬರ್ 25ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಬುದ್ಧನ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು, ಸಾಮಾಜಿಕ ಅಸಮಾನತೆಗಳ ವಿರುದ್ಧ ಜಾಗೃತಿ ಮೂಡಿಸುವುದು, ಮಾನವೀಯ ಮೌಲ್ಯಗಳನ್ನು ಬಲಪಡಿಸುವುದು ಹಾಗೂ ಬಹುತ್ವದ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಸಮ್ಮೇಳನದ ಪ್ರಮುಖ ಆಶಯಗಳಾಗಿವೆ.

ಈ ವಿಶೇಷ ವರದಿ ಓದಿದ್ದೀರಾ? ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಚಾಮರಾಜನಗರದಲ್ಲಿ ನಡೆಯಲಿರುವ ಈ ಮಹಾ ಸಮ್ಮೇಳನಕ್ಕೆ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಬೌದ್ಧ ಭಿಕ್ಕುಗಳು, ಚಿಂತಕರು, ಸಾಹಿತಿಗಳು, ಕಲಾವಿದರು, ಯುವಜನರು ಮತ್ತು ಬುದ್ಧನ ಅನುಯಾಯಿಗಳು ಆಗಮಿಸುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...