ಗುಂಡ್ಲುಪೇಟೆ | ಕೆರೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

Date:

ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಜಾನುವಾರುಗಳು ಹಾಗೂ ಅಂತರ್ಜಲದ ಹಿತದೃಷ್ಟಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಕೆರೆಗಳಿಗೆ ತಕ್ಷಣ ನೀರು ತುಂಬಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ಅವರ ನೇತೃತ್ವದಲ್ಲಿ ತೆರಕಣಾಂಬಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ತೆಂಗಿನಕೆರೆ, ಒಡೆಯನಕೆರೆ, ಸ್ಯಾಂಡಳ್ಳಿ ಕೆರೆ, ಬಲಚವಾಡಿ ಕೆರೆ, ಬರಟ್ಟಳ್ಳಿ ಕೆರೆ ಹಾಗೂ ನರಸಮಂಗಲ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ರೈತರು ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ನೀರಿನ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಬಾರದು. ತೀವ್ರ ಬರದಿಂದ ನಲುಗುತ್ತಿರುವ ರೈತರಿಗೆ ನೀರು ದೊರೆಯದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸುವ ಯೋಜನೆಯನ್ನು ರೂಪಿಸಿ ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಅದನ್ನು ಬಿಟ್ಟು ರಾಜಕೀಯ ಗುಲಾಮಗಿರಿಗೆ ಕೆಲಸ ಮಾಡುವ ಪ್ರಯತ್ನ ಮಾಡಿದರೆ ರೈತರು ರಸ್ತೆಗೆ ಬಂದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ಶಾಸಕರು, ಸಂಸದರು, ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ವಿಧಾನಸೌಧದಲ್ಲಿ ನಿರಂತರವಾಗಿ ನೀರು ಪೂರೈಕೆಯಾಗುತ್ತದೆ. ಆದರೆ ದೇಶಕ್ಕೆ ಅನ್ನ ನೀಡುವ ರೈತರ ಕೃಷಿ ಹಾಗೂ ಜಾನುವಾರುಗಳಿಗಾಗಿ ನೀರು ಒದಗಿಸುವ ಸಂದರ್ಭದಲ್ಲಿ ಮಾತ್ರ ಚೌಕಾಸಿ ಮಾಡಲಾಗುತ್ತಿದೆ. ಸರ್ಕಾರಗಳ ಈ ಧೋರಣೆ ಖಂಡನೀಯ ಎಂದು ಅವರು ಹೇಳಿದರು.

ಕೆರೆಗಳಿಗೆ ತಕ್ಷಣ ನೀರು ಹರಿಸದಿದ್ದರೆ ರೈತರು ಸ್ವಯಂಪ್ರೇರಿತವಾಗಿ ಕೆರೆಗಳಿಗೆ ನೀರು ಹರಿಸಿಕೊಳ್ಳಲು ಮುಂದಾಗಬೇಕಾಗುತ್ತದೆ. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಅಂತರ್ಜಲ ಸಂರಕ್ಷಣೆಗಾಗಿ ರೈತರು ಈ ಕ್ರಮ ಕೈಗೊಂಡರೆ ಅಧಿಕಾರಿಗಳು ವಿರೋಧಿಸಬಾರದು. ವಿರೋಧಿಸಿದರೆ ಹೋರಾಟದ ಮೂಲಕವೇ ಉತ್ತರ ನೀಡಬೇಕಾಗುತ್ತದೆ. ಕೆರೆಗೆ ನೀರು ಹರಿಸಿಕೊಳ್ಳುವ ರೈತರ ವಿರುದ್ಧ ಕ್ರಮ ಕೈಗೊಳ್ಳುವುದಾದರೆ, ಮೊದಲು ಎಲ್ಲ ರೈತರನ್ನೂ ಜೈಲಿಗೆ ಹಾಕಿ, ನಂತರ ಕೆರೆಗೆ ನೀರು ಬಿಡಿ ಎಂದು ಸರ್ಕಾರ ಮತ್ತು ಅಧಿಕಾರಿಗಳಿಗೆ ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಕೆರೆಹುಂಡಿ ರಾಜಣ್ಣ, ಪ್ರಕಾಶ್ ಗಾಂಧಿ, ತೆರಕಣಾಂಬಿ ಶಶಿ, ಒಳಗೆರೆ ಗಣೇಶ್, ಮಲಿಯೂರು ಮಹೇಂದ್ರ, ಅಂಗಡಿ ಸತೀಶ್, ಅರಳಿಕಟ್ಟೆ ಪ್ರಭಣ್ಣ, ಸ್ಯಾಂಡಳ್ಳಿ ಮಲ್ಲು, ಬಸವರಾಜ್, ಮುಕುಡಳ್ಳಿ ರಾಜು, ನರಸಮಂಗಲ ನಾಗು, ರಾಮಣ್ಣ, ಹೊನ್ನೇಗೌಡಹಳ್ಳಿ ಮಹೇಶ್, ಶ್ರೀಕಂಠ, ವೆಂಕಟರಾಮು ಬಲಚವಾಡಿ ಸೇರಿದಂತೆ ಸ್ಯಾಂಡಳ್ಳಿ, ತೆರಕಣಾಂಬಿ ಹಾಗೂ ಬರಟ್ಟಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...

ರಾಯಚೂರು | ಉದ್ರಿ ಕೊಡಲಿಲ್ಲವೆಂದು ಅಂಗಡಿ ಮಾಲೀಕನ ಬರ್ಬರ ಕೊಲೆ

ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ...