ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ಸಚಿವ ಸ್ಥಾನ: ಎರಡನೇ ಬಾರಿಗೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಯಾದ ಚಾಮರಾಜನಗರಕ್ಕೆ ಸಚಿವ ಸ್ಥಾನ ದೊರೆತಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಉಪ್ಪಾರ ಸಮುದಾಯದ ಪ್ರಮುಖ ನಾಯಕರಾಗಿರುವ ಸಿ. ಪುಟ್ಟರಂಗಶೆಟ್ಟಿ ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪ್ರತಿನಿಧಿಸುವ ಏಕೈಕ ಶಾಸಕರಾಗಿದ್ದು, ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಿ. ಪುಟ್ಟರಂಗಶೆಟ್ಟಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 2018ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

ಪ್ರಸ್ತುತ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ ಇದೀಗ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?SIR: ಕೊಡಗಿನ ಆದಿವಾಸಿಗಳ ಅಸ್ತಿತ್ವದ ಪ್ರಶ್ನೆಯ ಮುಂದೆ ಆಡಳಿತದ ಅಂಕಿ-ಅಂಶಗಳು ಸಾಕೇ?

ಅಭಿವೃದ್ಧಿಯ ಹಲವು ಮಾನದಂಡಗಳಲ್ಲಿ ಇನ್ನೂ ಹಿಂದುಳಿದ ಜಿಲ್ಲೆಯೆಂದು ಪರಿಗಣಿಸಲ್ಪಡುವ ಚಾಮರಾಜನಗರದಲ್ಲಿ ಮೂಲಸೌಕರ್ಯ, ಉದ್ಯೋಗ, ಕೈಗಾರಿಕೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ವ್ಯಕ್ತವಾಗಿದೆ. ಎರಡನೇ ಬಾರಿಗೆ ಸಚಿವರಾಗಿರುವ ಸಿ. ಪುಟ್ಟರಂಗಶೆಟ್ಟಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯಾವ ರೀತಿಯ ಆದ್ಯತೆ ನೀಡಲಿದ್ದಾರೆ ಎಂಬುದು ಈಗ ಜಿಲ್ಲೆಯ ಜನರ ಕುತೂಹಲದ ವಿಷಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...