ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

Date:

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ ಯಾವುದೇ ಹಣದ ಕೊರತೆಯಿಲ್ಲ. ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

- Advertisement -

ಹನೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿ,
ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ಪರಿಹಾರ ಒದಗಿಸಲು ಪ್ರಕೃತಿ ವಿಕೋಪ ನಿಧಿಯಡಿ ಹಣ ಲಭ್ಯವಿದೆ. ಅಗತ್ಯವಿರುವ ಪ್ರದೇಶಗಳಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಪಶುಪಾಲನಾ ಇಲಾಖೆ ವತಿಯಿಂದ ₹25 ಕೋಟಿ ವೆಚ್ಚದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ನೀರಿನ ಲಭ್ಯತೆ ಇರುವ ಪ್ರದೇಶಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಮೇವಿನ ಬೀಜಗಳನ್ನು ಸಹ ಒದಗಿಸಲಾಗುವುದು. ಪ್ರಕೃತಿ ವಿಕೋಪದಿಂದ ಮನೆ ಹಾನಿ ಸೇರಿದಂತೆ ಸಂಕಷ್ಟಕ್ಕೊಳಗಾದವರಿಗೆ ತುರ್ತಾಗಿ ಪರಿಹಾರ ನೀಡಲಾಗುತ್ತಿದೆ. ಅನಾವೃಷ್ಟಿಯಿಂದ ಬೆಳೆ ಹಾನಿಯಾಗಿರುವುದರ ಜೊತೆಗೆ ಅತಿವೃಷ್ಟಿಯಿಂದಲೂ ಕೆಲವು ಕಡೆ ಬೆಳೆ ಹಾನಿಯಾಗಿರುವುದು ಕಂಡುಬಂದಿದೆ. ಕೇಂದ್ರ ಬರ ಅಧ್ಯಯನ ತಂಡ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಬರದ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಲಿದೆ ಎಂದರು.

ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಗಮನ ನೀಡಲಾಗುವುದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಸಭೆಯಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಹನೂರು ಪಟ್ಟಣದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಕುರಿತು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಪಟ್ಟಣದಲ್ಲಿ ನೀರು ಪೋಲಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಅಗತ್ಯವಿರುವ ಕಡೆ ಕೊಳವೆಬಾವಿಗಳನ್ನು ಮರುಕೊರೆದು ಸಮಸ್ಯೆ ನಿವಾರಿಸಬೇಕು ಎಂದು ನಿರ್ದೇಶನ ನೀಡಿದರು.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದಕ್ಕಾಗಿ ₹6 ಕೋಟಿ ವೆಚ್ಚವಾಗುತ್ತಿದೆ. ಇನ್ನೂ ಅಗತ್ಯವಿರುವ ₹3.5 ಕೋಟಿ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು. ರೈತರಿಗೆ ವಿತರಿಸಲಾಗುತ್ತಿರುವ ಮೇವಿನ ಕಿಟ್‌ಗಳು ಉಪಯುಕ್ತವಾಗುತ್ತಿದ್ದು, ಇಂತಹ ಜನಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಪಡಿತರ ಚೀಟಿ, ಕುಡಿಯುವ ನೀರು, ಪಿಂಚಣಿ, ವಿಧವಾ ವೇತನ, ಸ್ಮಶಾನಕ್ಕೆ ಜಾಗ, ಕಾಡುಪ್ರಾಣಿಗಳ ಹಾವಳಿ, ನಿವೇಶನ, ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆ, ಇ-ಸ್ವತ್ತು, ಖಾತೆ ಬದಲಾವಣೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ ಸಲ್ಲಿಸಿದರು. ವೈಯಕ್ತಿಕ ಸಮಸ್ಯೆಗಳ ಜೊತೆಗೆ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಇದೇ ವೇಳೆ ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಚಿವರು ಪರಿಹಾರ ವಿತರಿಸಿದರು. ರೈತರಿಗೆ ಸಾಂಕೇತಿಕವಾಗಿ ಮೇವಿನ ಕಿಟ್‌ಗಳನ್ನು ವಿತರಿಸಿದರು.

ಈ ವಿಶೇಷ ವರದಿ ಓದಿದ್ದೀರಾ? SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ರಾಚಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಸಿದ್ದರಾಜು, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪ್ರಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್, ತಹಶೀಲ್ದಾರ್ ಚೈತ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...