‘ಪ್ರಜಾಸೇವೆ’ ಆಂದೋಲನ ಜನಪರ ಕಾರ್ಯಕ್ರಮ- ಸಿ. ಪುಟ್ಟರಂಗಶೆಟ್ಟಿ

Date:

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿನಲ್ಲಿಯೇ ಕುಂದುಕೊರತೆಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಇದು ಜನರಿಗೆ ನೇರವಾಗಿ ಸ್ಪಂದಿಸುವ ಉತ್ತಮ ಕಾರ್ಯಕ್ರಮವಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

- Advertisement -

ಯಳಂದೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಂದ ಕಚೇರಿಗಳಿಗೆ ಅಲೆದಾಡುವ ಬದಲು, ಅವರು ಇರುವ ಸ್ಥಳದಲ್ಲಿಯೇ ಅಹವಾಲುಗಳನ್ನು ಆಲಿಸಿ ಅಗತ್ಯ ಪರಿಹಾರ ಮತ್ತು ನೆರವು ಒದಗಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಸಭೆ ನಡೆಸಲಾಗುತ್ತಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಿ ಜನರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈಗಾಗಲೇ ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಹನೂರು ತಾಲೂಕುಗಳಲ್ಲಿ ಪ್ರಜಾಸೇವೆ ಸಭೆ ನಡೆಸಲಾಗಿದೆ. ಇಂದಿನ ಸಭೆಯಲ್ಲಿಯೂ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗುತ್ತಿದೆ. ತಕ್ಷಣ ಪರಿಹರಿಸಲು ಸಾಧ್ಯವಾಗದ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ಮುಂದಿನ ಸಭೆಯ ವೇಳೆಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ನಿಗದಿತ ನಮೂನೆಯ ವ್ಯವಸ್ಥೆ ಮಾಡಲಾಗಿದೆ. ಯಾವ ಇಲಾಖೆಯಿಂದ ಯಾವ ಸೌಲಭ್ಯ ಪಡೆಯಬೇಕು ಅಥವಾ ಯಾವ ಸಮಸ್ಯೆಗೆ ಪರಿಹಾರ ದೊರೆಯಬೇಕು ಎಂಬುದನ್ನು ಅರ್ಜಿಯಲ್ಲಿ ನಮೂದಿಸಬೇಕು. ಅರ್ಜಿದಾರರೊಂದಿಗೆ ನೇರವಾಗಿ ಮಾತನಾಡಿ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಸ್ವೀಕೃತ ಅರ್ಜಿಗಳನ್ನು ನೋಂದಾಯಿಸುವುದರಿಂದ ಎಷ್ಟು ಅರ್ಜಿಗಳು ವಿಲೇವಾರಿಯಾಗಿವೆ ಮತ್ತು ಎಷ್ಟು ಬಾಕಿ ಉಳಿದಿವೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ವೃದ್ಧಾಪ್ಯ ವೇತನ, ಪಿಂಚಣಿ ಸೇರಿದಂತೆ ವಿವಿಧ ಮಾಸಾಶನ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಸರ್ಕಾರಿ ಭೂಮಿ ಒತ್ತುವರಿ ತೆರವು, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ, ಖಾತೆ ಬದಲಾವಣೆ, ಇ-ಸ್ವತ್ತು, ರಸ್ತೆ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ನಿವೇಶನ ಮಂಜೂರಾತಿ, ಜಾನುವಾರುಗಳ ಸಾವಿಗೆ ಪರಿಹಾರ, ಅಕ್ರಮ ಖಾತೆ, ಬಸ್ ಸೌಲಭ್ಯ, ಚರಂಡಿ ಸ್ವಚ್ಛತೆ, ಜಲಜೀವನ್ ಮಿಷನ್ ಕಾಮಗಾರಿಗಳ ಅಪೂರ್ಣತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು.

ಇದಲ್ಲದೆ, ಸರ್ಕಾರಿ ಶಾಲೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ, ಯಳಂದೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಎದುರಿನ ಬಾರ್ ಸ್ಥಳಾಂತರ, ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆ, ಸ್ಮಶಾನಗಳಿಗೆ ಸುತ್ತುಗೋಡೆ ನಿರ್ಮಾಣ, ಕೊಳವೆಬಾವಿ ವ್ಯವಸ್ಥೆ, ಕನ್ನಡ ಭವನಕ್ಕೆ ನಿವೇಶನದ ತ್ವರಿತ ಹಸ್ತಾಂತರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಕಬ್ಬು ಬೆಳೆಗಾರರಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್

ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಪ್ರಭುಪ್ರಸಾದ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಡಿವೈಎಸ್ಪಿ ಮೋಹನ್, ತಹಶೀಲ್ದಾರ್ ನಯನ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,...

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...