ಚಾಮರಾಜನಗರ | ಸೋನಂ ವಾಂಗ್ಚುಕ್ ಬೆಂಬಲಿಸಿ ಜುಲೈ.16ರಂದು ಸಾಂಕೇತಿಕ ಧರಣಿ: ಸಾಹಿತಿ ಕೆ. ವೆಂಕಟರಾಜು

Date:

ನೀಟ್ (NEET) ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ, ಪಾರದರ್ಶಕತೆಯ ಕೊರತೆ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಮಾಜಸೇವಕ ಹಾಗೂ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ ಎಂದು ಸಾಹಿತಿ ಕೆ. ವೆಂಕಟರಾಜು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಚಾಮರಾಜನಗರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೇಶದ ಯುವಜನತೆ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತ ಗಂಭೀರ ಪ್ರಶ್ನೆಗಳನ್ನು ಎತ್ತಿ ಉಪವಾಸ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರ ಮನವಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಅವರ ಆರೋಗ್ಯ ಹದಗೆಡುತ್ತಿದ್ದರೂ ಕೇಂದ್ರ ಸರ್ಕಾರ ಈ ವಿಷಯದ ಬಗ್ಗೆ ಕನಿಷ್ಠ ಮಾನವೀಯ ಕಾಳಜಿಯನ್ನೂ ತೋರಿಸದಿರುವುದು ಅತ್ಯಂತ ವಿಷಾದನೀಯ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಹೋರಾಟಗಳಿಗೆ ಗೌರವ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶಿಕ್ಷಣ ಕ್ಷೇತ್ರದ ಪಾರದರ್ಶಕತೆಗಾಗಿ ನಡೆಯುತ್ತಿರುವ ಈ ಹೋರಾಟವನ್ನು ನಿರ್ಲಕ್ಷಿಸುವುದು ಸೂಕ್ತವಲ್ಲ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ, ಸೋನಂ ವಾಂಗ್ಚುಕ್ ಅವರ ಆರೋಗ್ಯದ ಹಿತದೃಷ್ಟಿಯಿಂದ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ದೇಶದ ನಾಗರಿಕರ ಪರವಾಗಿ ಮನವಿ ಮಾಡಿಕೊಳ್ಳುವುದರ ಜೊತೆಗೆ, ಅವರ ನ್ಯಾಯಯುತ ಬೇಡಿಕೆಗಳಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುವುದು ಅಗತ್ಯವಾಗಿದೆ ಎಂದು ಕೆ. ವೆಂಕಟರಾಜು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ದಲಿತ ರೈತನ ಭೂಮಿ ಕಬಳಿಕೆ ಆರೋಪ: ಕಂದಾಯ ದಾಖಲೆ ತಿದ್ದುಪಡಿ ಕುರಿತು ತನಿಖೆಗೆ ಆಗ್ರಹ

ಈ ಹಿನ್ನೆಲೆಯಲ್ಲಿ ಜುಲೈ 16, 2026 (ಗುರುವಾರ) ಬೆಳಿಗ್ಗೆ 11.00 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಂಕೇತಿಕ ಧರಣಿ ನಡೆಸಲಾಗುವುದು. ಈ ಧರಣಿಯಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು, ಶಿಕ್ಷಣ ಕ್ಷೇತ್ರದ ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಬೆಂಬಲಿಸುವ ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ?“ಮಳೆಯಿದೆ… ಆದರೆ ಅದು ಕೊಡಗಿನ ಮಳೆಯಲ್ಲ!”

ಪತ್ರಿಕಾ ಪ್ರಕಟಣೆ ವೇಳೆ ಪಿ. ಸಂಘಸೇನಾ, ಎ.ಡಿ. ಸಿಲ್ವಾ ಹಾಗೂ ಡಿ.ಎಸ್. ದೊರೆಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...