ಚಾಮರಾಜನಗರ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ: ಕೆ ವೆಂಕಟೇಶ್

Date:

ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಎಲ್ಲಾ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ ನೀಡಿದರು.

- Advertisement -

ನಗರದ ಜಿಲ್ಲಾಾಡಳಿತ ಭವನದ ಆವರಣದಲ್ಲಿರುವ ನೂತನ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು. ಬಾಕಿ ಉಳಿದಿರುವ ಪೈಪ್‌ಲೈನ್ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದರೆ ರೀಬೋರ್ ಮಾಡಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನಿರಂತರವಾಗಿ ನೀರು ಪೂರೈಸಬೇಕು ಎಂದು ನಿರ್ದೇಶಿಸಿದರು.

ಹನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಉಲ್ಲೇಖಿಸಿದ ಸಚಿವರು, ಸಮಸ್ಯೆ ಪರಿಹಾರಗೊಂಡಿರುವ ಕುರಿತು ಜಿ.ಪಿ.ಎಸ್ ಛಾಯಾಚಿತ್ರ ಹಾಗೂ ವಿಡಿಯೋ ದಾಖಲೆಗಳೊಂದಿಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ವಾರ ಸಮಸ್ಯೆ ಇರುವ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿದರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು. ಜೆ.ಜೆ.ಎಂ ಪೈಪ್‌ಲೈನ್ ಕಾಮಗಾರಿಗೆ ಪ್ರತಿವರ್ಷ ಅನುದಾನ ಬಿಡುಗಡೆಯಾದರೂ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿಲ್ಲ. ಅಪೂರ್ಣ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಲ್ಲಿ ಕಾಲುವೆಯ ಬದಲಿಗೆ ಪೈಪ್‌ಲೈನ್ ಮೂಲಕ ನೀರು ಹರಿಸುವ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಲಿದೆ ಎಂದು ಅವರು ತಿಳಿಸಿದರು.

ಹನೂರು ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ, ಶಿಕ್ಷಕರ ಕೊರತೆಯ ನಡುವೆಯೂ ಕೆಂಪಯ್ಯನಹಟ್ಟಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 618 ಅಂಕ ಗಳಿಸಿರುವುದನ್ನು ಉಲ್ಲೇಖಿಸಿ, ಶಾಲೆಯ ಶಿಕ್ಷಕರ ಕೊರತೆಯನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನೆ, ಅಬಕಾರಿ, ಸಾರಿಗೆ, ಗಣಿ, ಗ್ರಂಥಾಲಯ, ಕಾರ್ಮಿಕ ಹಾಗೂ ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಮೈಸೂರು | ಕನ್ನಡ ಶಾಲೆಗಳ ಉಳಿವಿಗೆ ಉದ್ಯೋಗ ಮೀಸಲಾತಿ ಅಗತ್ಯ: ಕೊಟ್ರೇಶ್ ಎಸ್. ಉಪ್ಪಾರ್

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಜನಗಣತಿ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ?ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...