ಚಾಮರಾಜನಗರ | ಹೆಣ್ಣಾನೆ ಸಾವು; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯಾಧಿಕಾರಿಗಳು

Date:

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ‌ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದ ಚಿಕ್ಕತೋಟದ ಶನೇಶ್ವರ ತೋಪಿನ ಬಳಿ ಅಂದಾಜು 65 ವರ್ಷದ ಹೆಣ್ಣಾನೆ ಮೃತಪಟ್ಟಿದೆ.

- Advertisement -

ಬಿಆರ್​ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿ ದಾಟಿ ಬಂಡೀಪುರ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಬಂದಿದ್ದ ಹೆಣ್ಣಾನೆಯೊಂದು ವಯೋ ಸಹಜವಾಗಿ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಳೆದ ಮೂರ್ನಾಲ್ಕು ದಿನಗಳ‌ ಹಿಂದೆ ಬಂಡೀಪುರ ಅರಣ್ಯಕ್ಕೆ ಬಂದಿದ್ದ ಆನೆ ಕುಂದಕೆರೆ ವಲಯದ ಕಡಬೂರು ಗ್ರಾಮದ ಸುತ್ತಮುತ್ತ ಸಂಚರಿಸುತ್ತಿರುವ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ದಿಕ್ಕು ತಪ್ಪಿ ಬಂದಿದ್ದ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆಯನ್ನು ಅಧಿಕಾರಿಗಳು ಕೈಗೊಂಡಿದ್ದರು.

ಆದರೆ ಕಾಡಿಗೆ ಹಿಂದಿರುಗದೆ ಪೋತರಾಜು ಎಂಬವರ ಜಮೀನಿನಲ್ಲಿ ಬೀಡು ಬಿಟ್ಟಿತ್ತು. ಆ ಬಳಿಕ ಕೂಡ ರಾತ್ರಿ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಚುರುಕುಗೊಳಿಸಿದ್ದರು. ಆದರೂ ಸಫಲವಾಗಲಿಲ್ಲ. ಮರುದಿನ ಮಧ್ಯಾಹ್ನದ ವೇಳೆ ಚಿರಕನಹಳ್ಳಿ ಗ್ರಾಮದ ಸಮೀಪ ಆನೆ ಸಾವನ್ನಪ್ಪಿರುವುದಾಗಿ ಬಂಡೀಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರಕರಣ; ಎಬಿವಿಪಿ ಅಧ್ಯಕ್ಷ ಪ್ರತೀಕ್‌ ಗೌಡ ಬಂಧನ

ಆನೆ ಮೃತಪಟ್ಟಿರುವ ಸ್ಥಳಕ್ಕೆ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ, ಪಶು ವೈದ್ಯಾಧಿಕಾರಿ ಡಾ. ಮಿರ್ಜಾ ವಾಸೀಂ, ಕುಂದಕೆರೆ ಆರ್​ಎಫ್​​ಓ ಶ್ರೀನಿವಾಸ್ ತೆರಳಿ, ಮರಣೋತ್ತರ ಪರೀಕ್ಷೆ ನಡೆಸಿದರು. ಅಂಗಾಂಗ ಮಾದರಿ ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ವರದಿ ಬಂದ ಬಳಿಕ ಸಾವಿಗೆ ನೈಜ ಕಾರಣ ತಿಳಿದು ಬರಲಿದೆ‌. ಮೇಲ್ನೋಟಕ್ಕೆ ಸಹಜ ಸಾವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...