ಬೀದರ್ | ಚುಮು ಚುಮು ಚಳಿಯಲ್ಲಿ ಗಮನ ಸೆಳೆದ ಚನ್ನಬಸವ ಮ್ಯಾರಥಾನ್ ಓಟ : ನೂರಾರು ಜನ ಭಾಗಿ

Date:

Advertisements

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು.

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಬಲೂನ್ ಹಾರಿಸಿ ಚಾಲನೆ ನೀಡಿ ಮಾತನಾಡಿದರು.

1002232510

‘ಗಡಿ ಭಾಗದಲ್ಲಿ ಡಾ.ಚನ್ನಬಸವ ಪಟ್ಟದ್ದೇವರು ತಮ್ಮ ಜೀವಿತಾವಧಿಯಲ್ಲಿ ಸಮಾಜದ ಹಿತಕ್ಕಾಗಿ ಅದ್ಭುತ ಕಾರ್ಯಗಳು ಮಾಡಿದ್ದಾರೆ. ಅವರ ಸವಿನೆನಪು ಮತ್ತು ಸುಂದರ ಸ್ವಾಸ್ತ್ಯ ಸಮಾಜ ನಿರ್ಮಾಣಕ್ಕಾಗಿ ಮ್ಯಾರಥಾನ್ ಸೇರಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿರುವುದು ಹೆಮ್ಮೆ ತರಿಸಿದೆ’ ಎಂದು ತಿಳಿಸಿದರು. 

Advertisements

ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಜೀವನದುದ್ದಕ್ಕೂ ಬಸವಣ್ಣನವರ ತತ್ವ ಮತ್ತು ಕನ್ನಡದ ಪ್ರೇಮ ಎತ್ತಿ  ಹಿಡಿದವರು, ಅವರ ಆದರ್ಶ ನಮಗೆ ಪ್ರೇರಣೆಯಾಗಬೇಕು’ ಎಂದು ತಿಳಿಸಿದರು. 

ಬೆಳಕು ಹರಿಯುವ ಹೊತ್ತಿಗೆ ಚನ್ನಬಸವಾಶ್ರಮ ರಸ್ತೆಯಿಂದ ಆರಂಭಗೊಂಡಿದ್ದ 5.40 ಕಿ.ಮೀ. ಉದ್ದದ ಮ್ಯಾರಥಾನ್ ಓಟ ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅಷ್ಟೂರೆ ಕಲ್ಯಾಣ ಮಂಟಪ ಮಾರ್ಗವಾಗಿ ಚನ್ನಬಸವೇಶ್ವರ ಪದವಿ ಕಾಲೇಜು ಸಮೀಪದಿಂದ ಮುಖ್ಯ ರಸ್ತೆ ಪ್ರವೇಶಗೊಂಡು ಬೊಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿಬಂದು ಚನ್ನಬಸವಾಶ್ರಮದ ಮುಖ್ಯ ರಸ್ತೆ ತಲುಪಿತು.

1002232509

ಚನ್ನಬಸವ ಮ್ಯಾರಥಾನ್ ಓಟದಲ್ಲಿ ತಾಲೂಕಿನ ಗಡಿಭಾಗದ ಅಟ್ಟರಗಾ ಗ್ರಾಮದ ನಿವಾಸಿ ಮತ್ತು ಬೀದರ್ ಗುರುನಾನಕ್ ಕಾಲೇಜಿನ ವಿದ್ಯಾರ್ಥಿ ಬಜರಂಗ ಉತ್ತಮರಾವ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕದೀರಾಬಾದ ವಾಡಿಯ ಮನೋಜ ತುಕಾರಾಮ ದ್ವಿತೀಯ ಮತ್ತು ಬೀದರ್‌ನ ಆದಿತ್ಯ ಅವಿನಾಶ ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ. ವಿಜೇತರಿಗೆ ಡಿ.22ರಂದು ಬಹುಮಾನ ವಿತರಿಸಲಾಗುವುದು ಎಂದು ಪೂಜ್ಯರು ತಿಳಿಸಿದರು.

ಓಟದಲ್ಲಿ ಜಿಲ್ಲೆಯ ಬೀದರ್‌ನ ವಿವಿಧ ಕಡೆಗಳಿಂದ ಬಂದಿದ್ದ ಓಟಗಾರರು ಸ್ಥಳೀಯರೊಂದಿಗೆ ಸೇರಿ ಮಿಂಚಿನ ಸಂಚಾರ ಮೂಡಿಸಿದರು. ಮಹಾಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಬಸವಲಿಂಗ ದೇವರು, ಪ್ರಭುಲಿಂಗ ಸ್ವಾಮೀಜಿ, ಶಿವಬಸವ ಸ್ವಾಮೀಜಿ ನೇತೃತ್ವ ವಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ವ್ಯಾಪಕ ಆಗ್ರಹ

ಕಾರ್ಯಕ್ರಮದಲ್ಲಿ ಭಾಲ್ಕಿ ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಚನ್ನಬಸವ ಮ್ಯಾರಥಾನ್ ಸೇವಾ ಸಮಿತಿ ಅಧ್ಯಕ್ಷ ರವೀಂದ್ರ ಚಿಡಗುಪ್ಪೆ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಆಡಳಿತಾಧಿಕಾರಿ ಮೋಹನ ರೆಡ್ಡಿ, ದೈಹಿಕ ನಿರ್ದೇಶಕರಾದ ಹಣಮಂತ ಕಾರಾಮುಂಗೆ, ಅನಿಲಕುಮಾರ ಪಾಟೀಲ್ ಸೇರಿದಂತೆ ಹಲವರು ಇದ್ದರು. ಈಶ್ವರ ರುಮ್ಮಾ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X