ಬೀದರ್‌ | ಸಮಾಜೋಧಾರ್ಮಿಕ ಕ್ಷೇತ್ರಕ್ಕೆ ಚನ್ನಬಸವ ಪಟ್ಟದ್ದೇವರ ಕೊಡುಗೆ ಅನನ್ಯ: ಶರಣಬಸವ ಸ್ವಾಮೀಜಿ

Date:

ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು.

- Advertisement -

ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ ಮಾಸಿಕ ಶರಣ ಸಂಗಮ ಮತ್ತು ಲೇಖಕ ಮಹಾಂತೇಶ ಕುಂಬಾರ ವಿರಚಿತ ಸದ್ಗುರು ಚರಿತಾಮೃತ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಗ್ರಂಥ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

“ಚನ್ನಬಸವ ಪಟ್ಟದ್ದೇವರು ತಮ್ಮ ಜೀವಿತಾವಧಿಯಲ್ಲಿ ಅಧ್ಯಾತ್ಮಿಕ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಅದ್ಭುತ ಕೊಡುಗೆ ನೀಡಿ ಈ ಭಾಗವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾರೆ. ಪಟ್ಟದ್ದೇವರು ತಮ್ಮ ಬಾಲ್ಯ ಜೀವನವನ್ನು ಕಷ್ಟದಲ್ಲಿ ಅನುಭವಿಸಿ ನಿಜಾಂನ ಆಳ್ವಿಕೆಯಲ್ಲಿ ದಿಟ್ಟತನ ಪ್ರದರ್ಶಿಸಿ ಗಡಿ ಭಾಗವನ್ನು ಕನ್ನಡ ನೆಲದಲ್ಲಿ ಉಳಿಸಿ ಕನ್ನಡವನ್ನು ಗಟ್ಟಿಯಾಗಿ ಕಟ್ಟಿದ್ದಾರೆ. ಅಪ್ಪಟ ಬಸವತತ್ವ ಅನುಯಾಯಿ ಆಗಿ ಜಾತೀಯತೆ, ಮೌಢ್ಯತೆಯನ್ನು ವಿರೋಧಿಸಿ ಬಸವಣ್ಣನವರ‌ ಆಶಯದ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು” ಎಂದು ನುಡಿದರು.

“ಮಹಿಳೆಯರ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲಾ-ಕಾಲೇಜು ತೆರೆದು ಬಸವಣ್ಣನವರ ಕನಸಿನ ಮಹಿಳಾ ಸಬಲೀಕರಣಕ್ಕೆ ಪಟ್ಟದ್ದೇವರು ಒತ್ತು ನೀಡಿದರು. ಪಟ್ಟದ್ದೇವರ ಆದರ್ಶಮಯ ಬದುಕು ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರ ಬದುಕಿನ ಮೌಲ್ಯತೆ ಕುರಿತು ಅನೇಕ ಗ್ರಂಥಗಳು ಹೊರ ಬಂದಿವೆ. ಮಹಾಂತೇಶ ಕುಂಬಾರ ಅವರು ರಚಿಸಿದ ಸದ್ಗುರು ಚರಿತಾಮೃತ ಗ್ರಂಥದಲ್ಲಿ ಪಟ್ಟದ್ದೇವರ ಜೀವನ ಮತ್ತು ಸಾಧನೆ ಚಿತ್ರಣ ಅಡಗಿದೆ. ಪ್ರತಿಯೊಬ್ಬರೂ ಕೊಂಡು ಓದಬೇಕು” ಎಂದು ತಿಳಿಸಿದರು.

ಶಿಕ್ಷಕ, ಲೇಖಕ ಮಹಾಂತೇಶ ಕುಂಬಾರ ಅವರು ಗ್ರಂಥ ಕುರಿತು ಮಾತನಾಡಿ, “ಪಟ್ಟದ್ದೇವರ ಜೀವನ ಮತ್ತು ಸಾಧನೆ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ. ಅವರ ಕಾರ್ಯಗಳ ಬಗ್ಗೆ ಎಷ್ಟೇ ಬರೆದರೂ ಕೂಡ ಕಡಿಮೆ ಆಗುತ್ತದೆ. ಅಂತಹ ಪೂಜ್ಯರ ಬಗ್ಗೆ ಗ್ರಂಥ ಹೊರತರಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಡಾ.ಚನ್ನಬಸವ ಪಟ್ಟದ್ದೇವರ ಆಶೀರ್ವಾದ ಶಕ್ತಿಯಿಂದ ಶ್ರೀಮಠವನ್ನು ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ. ಪೂಜ್ಯರು ಸಂಪ್ರದಾಯವನ್ನು ಮೀರಿ ಬಸವಣ್ಣನವರು ಧರ್ಮಗುರು ಎಂದು ಸಾರಿದರು. ಬಸವತತ್ವ-ಶಿಕ್ಷಣ-ಸಮಾಜ ಸೇವೆಗೆ ಒತ್ತು ನೀಡಿದರು ಅದನ್ನು ಮುಂದುವರೆಸಿ ಕೊಂಡು ಹೋಗಲಾಗುತ್ತಿದೆ” ಎಂದು ತಿಳಿಸಿದರು.

ನೇತೃತ್ವ ವಹಿಸಿದ ಗುರುಬಸವ ಪಟ್ಟದ್ದೇವರು ಮಾತನಾಡಿ, “ಪಟ್ಟದ್ದೇವರು ಈ ಭಾಗವನ್ನು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕವಾಗಿ ಸಮೃದ್ಧವಾಗಿ ಕಟ್ಟುವ ಪ್ರಯತ್ನ ಮಾಡಿದ್ದರು. ಬಸವತತ್ವ-ಕನ್ನಡ ಪಟ್ಟದ್ದೇವರ ಉಸಿರಾಗಿತ್ತು. ಅಂತಹ ಪೂಜ್ಯರ ನೆರಳಿನಲ್ಲಿ ಬೆಳೆಯುವ ಅವಕಾಶ ಸಿಕ್ಕಿರುವುದು ನನ್ನ
ಸೌಭಾಗ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶರಣರ ಕಲ್ಯಾಣ ಸಜ್ಜನರ ತವರು ಕ್ಷೇತ್ರವಾಗಲಿ : ಬಸವರಾಜ ಪಾಟೀಲ್‌ ಸೇಡಂ

ಕಾರ್ಯಕ್ರಮದಲ್ಲಿ ಶ್ವೇತಾ ಶರಣೆ ಸತ್ಯಕ್ಕ ಕುರಿತು ಅನುಭಾವ ನೀಡಿದರು.  ಹಿರಿಯ ಪತ್ರಕರ್ತ ಸದಾನಂದ ಜೋಶಿ ಅಧ್ಯಕ್ಷತೆ ವಹಿಸಿದರು. ಸೇವಾ ಸಮಿತಿ ಅಧ್ಯಕ್ಷೆ ಸುವರ್ಣಾ ಬಲ್ಲೂರೆ, ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ, ಗುರುನಾಥ ಗಡ್ಡೆ, ವೀರೇಶ ಕುಂಬಾರ ಸೇರಿದಂತೆ ಹಲವರು ಇದ್ದರು. ಪುಷ್ಪಾ ಶಿವರಾಜ ಗಂದಗೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...