ಚನ್ನಗಿರಿ | 8 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಬಸ್ ಘಟಕ ನಿರ್ಮಾಣ

Date:

ನಾಲ್ಕು ಎಕರೆ ಜಮೀನಿನಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ‌‌ ಮತ್ತು ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು‌ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

- Advertisement -

ದಾವಣಗೆರೆ ವ್ಯಾಪ್ತಿಯ ಚನ್ನಗಿರಿ(ಅಜ್ಜಿಹಳ್ಳಿ) ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಉದ್ಘಾಟನೆ ಮಾಡಿ, ಹೊಳಲ್ಕೆರೆ ತರಬೇತಿ ಕೇಂದ್ರ‌ಕ್ಕೆ ಭೇಟಿ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ‌‌ ಬೇಡಿಕೆ ಈಡೇರಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.

ಶಾಸಕ ಬಸವರಾಜ ವಿ ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ‌ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ” ಎಂದು ತಿಳಿಸಿದರು. ಇದೇ ವೇಳೆ ಶಾಸಕರು, ಸಾರಿಗೆ ಸಚಿವರು ಶೀಘ್ರದಲ್ಲಿಯೇ ಅನುಮತಿ‌ ನೀಡುವುದಾಗಿ ತಿಳಿಸಿದರು.

ಅದೇ ರೀತಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಎಸ್ ಬಸವಂತಪ್ಪನವರೂ ಕೂಡ ಬಸ್ ನಿಲ್ದಾಣಕ್ಕೆ ಬೇಡಿಕೆ ಇಟ್ಟರು. ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ‌ನಿರ್ಮಿಸಲು ಸಾರಿಗೆ ಸಚಿವರು ಒಪ್ಪಿಗೆ ಸೂಚಿಸಿದರು.

ಇದೇ ಸಂಧರ್ಭದಲ್ಲಿ ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ‌ ನೀಡಿ, ತರಬೇತಿ‌‌ ಕೇಂದ್ರವನ್ನು ಸರ್ಕಾರದ ‌ಕೌಶಲ್ಯಾಭಿವೃದ್ಧಿ ಇಲಾಖೆಯೊಡನೆ ಮಾತುಕತೆ ನಡೆಸಿ ಮತ್ತಷ್ಟು ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಮುಂದಿನ‌ ದಿನಗಳಲ್ಲಿ ಸಭೆ ನಡೆಸುವ ಬಗ್ಗೆ ಮಾತುತೆ ನಡೆಸಲು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಬಸ್‌ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಜೀವ ವೈವಿಧ್ಯ ನಿಗಮ ಮಂಡಳಿ ಅಧ್ಯಕ್ಷ ಶ್ರೀವಡ್ನಾಳ್ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಅಜ್ಜಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಗೋವಿಂದರಾಜ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶ, ಜಿಲ್ಲಾಧಿಕಾರಿ ಜಿ ಎಂ ಗಂಗಾಧರ ಸ್ವಾಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...