ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

Date:

  • ಆಗಮ ಪಂಡಿತರ ವರದಿ ಅನ್ವಯ ಧಾರ್ಮಿಕ ದತ್ತಿ ಇಲಾಖೆ ಆದೇಶ
  • ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು

ವಿಶ್ವವಿಖ್ಯಾತ ಬೇಲೂರು ಚನ್ನಕೇಶಸ್ವಾಮಿ ರಥೋತ್ಸವ ಮಂಗಳವಾರ ಜರುಗಿದೆ. ಈ ವೇಳೆ ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ಮುಖಂಡರು ಮೆಟ್ಟಿಲುಗಳ ಬಳಿ ಕುರಾನ್‌ ಪಠಿಸಿ, ವಂದನೆ ಸಲ್ಲಿಸಿದ್ದಾರೆ. ಹಿಂದುತ್ವವಾದಿಗಳ ವಿರೋಧದ ನಡುವೆಯೂ ಬೇಲೂರು ಸೌಹಾರ್ದೆಯನ್ನು ಎತ್ತಿ ಹಿಡಿದಿದೆ.

ರಥೋತ್ಸವದಲ್ಲಿ ರಥ ಎಳೆಯುವ ಮುನ್ನ ಮುಸ್ಲಿಂ ಮುಖಂಡರು ಕುರಾನ್‌ ಪಠಣ ಮಾಡಬಾರದು ಎಂದು ಆಗ್ರಹಿಸಿ ಹಿಂದುತ್ವ ಕೋಮುವಾದಿ ಸಂಘಟನೆಗಳ ನೇತೃತ್ವದಲ್ಲಿ ಕೆಲವು ದಿನಗಗಳ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಮುಸ್ಲಿಂ ಯುವಕನೊಬ್ಬ ‘ಕುರಾನ್‌ ಜಿಂದಾಬಾದ್‌’ ಎಂದು ಕೂಗಿದ್ದರಿಂದ ಸ್ಥಳದಲ್ಲಿ ಅಶಾಂತಿಯ ವಾತಾವರಣ ಉಂಟಾಗಿತ್ತು. ಬಳಿಕ, ಕುರಾನ್ ಪಠಣ ಕುರಿತು ಉಂಟಾದ ಗೊಂದಲಗಳನ್ನು ಪರಿಶೀಲಿಸಲು ಧಾರ್ಮಿಕ ದತ್ತಿ ಇಲಾಖೆ ಕಚೇರಿಯ ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್ ಮಾರ್ಚ್‌ 30ರಂದು ಬೇಲೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದರು.

ವರದಿಯನ್ನು ಆಧರಿಸಿ, ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ರಥದ ಮುಂದೆ ಕುರಾನ್ ಪಠಣ ಮಾಡದೇ, ಸಂಪ್ರದಾಯದಂತೆ ದೇವಾಲಯದ ಮೆಟ್ಟಿಲುಗಳ ಬಳಿ ನಿಂತು ವಂದನೆ ಸಲ್ಲಿಸಲು ಧಾರ್ಮಿಕ ದತ್ತಿ ಇಲಾಖೆ ಸೋಮವಾರ ಆದೇಶ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ ? ರಾಮನಗರ | ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

ಅದರಂತೆಯೇ, ರಥೋತ್ಸವದ ಸಂದರ್ಭದಲ್ಲಿ ಬೇಲೂರಿನ ದೊಡ್ಡ ಮೇದೂರಿನ ಸೈಯಾದ್‌ ಸಜ್ಜಾದ್‌ ಖಾಝಿ ಮತ್ತು ಅವರ ಕುಟುಂಬ ಸದಸ್ಯರು ಚನ್ನಕೇಶವಸ್ವಾಮಿ ದೇವಾಲಯದ ಗೌರವಗಳನ್ನು ಸ್ವೀಕರಿಸಿ, ಸಂಪ್ರದಾಯ ಪದ್ಧತಿಗಳಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ದೇವರಿಗೆ ವಂದನೆ ಸಲ್ಲಿಸಿದರು.

ಸ್ವಾತಂತ್ರ್ಯಾ ಪೂರ್ವದಿಂದಲೂ ರಥೋತ್ಸವದ ಸಂದರ್ಭದಲ್ಲಿ ರಥದ ಮುಂದೆ ಕುರಾನ್‌ ಪಠಣ ಮಾಡುವುದು ಸಂಪ್ರದಾಯವಾಗಿ ಬೆಳೆದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...