ಚನ್ನಪಟ್ಟಣ | ಕೆಪಿಎಸ್‌ ‘ಮ್ಯಾಗ್ನೆಟ್’ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ

Date:

ಎಸ್‌ಐಓ(ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ) ಕರ್ನಾಟಕದ ಪ್ರತಿನಿಧಿಗಳ ತಂಡವು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆಪಿಎಸ್ ಶಾಲೆ ಹಾಗೂ ಇತರೆ ಹಲವು ಶಾಲೆಗಳಿಗೆ ಭೇಟಿ ನೀಡಿ, ಕೆಪಿಎಸ್ “ಮ್ಯಾಗ್ನೆಟ್” ಶಾಲಾ ವಿಲೀನ ನೀತಿಯ ಸ್ಥಳೀಯ ಸತ್ಯಾಂಶಗಳನ್ನು ಅಧ್ಯಯನ ಮಾಡಿದ್ದು, ಅಲ್ಲಿನ ಪರಿಸ್ಥಿತಿಗಳನ್ನು ಗಮನಿಸಿದ ಬಳಿಕ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ಸ್ಥಳೀಯ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ನಂತರ, ಸಮೀಪದ ನೆರೆಹೊರೆಯ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎಂದು ಎಸ್‌ಐಓ ತಂಡ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಎಸ್‌ಐಓ ಪ್ರತಿನಿಧಿಗಳ ತಂಡವು, ಮಕ್ಕಳ ಹಕ್ಕುಗಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ (RTE Act, 2009)ಯಡಿಯಲ್ಲಿ “ನೆರೆಹೊರೆಯ ಶಾಲೆ” ನಿಯಮ (ಕಲಂ 6) ಪ್ರಕಾರ, ಪ್ರತಿ ಮಗುವಿನ ನಿವಾಸದಿಂದ ನಡೆದು ಹೋಗಬಹುದಾದ ದೂರದಲ್ಲಿ ಸರ್ಕಾರವು ಶಾಲೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

ಸಮೀಪದ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸುವ ಆದೇಶವು ಈ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಭೇಟಿಯ ಸಂದರ್ಭದಲ್ಲಿ, ತಂಡವು ಶಾಲಾ ಆಡಳಿತ ಮಂಡಳಿಗೆ ಎಸ್‌ಐಓ ನಡೆಸಿದ ಇತ್ತೀಚಿನ ಸಮೀಕ್ಷೆಯ ವಿವರಗಳನ್ನು ನೀಡಿತು.

WhatsApp Image 2025 12 16 at 11.31.30 AM

ಈ ಸಮೀಕ್ಷೆಯು ಸರ್ಕಾರಿ ಶಾಲೆಗಳ ಸುತ್ತಲಿನ ವಿವಿಧ ಕಳವಳಕಾರಿ ಸಮಸ್ಯೆಗಳನ್ನು ಎತ್ತಿ ತೋರಿಸಿದೆ ಎಸ್‌ಐಓ ಇದಕ್ಕೂ ಮೊದಲು ನೆರೆಹೊರೆಯ ಶಾಲೆಗಳ ಮುಚ್ಚುವಿಕೆಯನ್ನು ಖಂಡಿಸಿತ್ತಲ್ಲದೇ, ಸರ್ಕಾರವು ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಎಸ್‌ಐಓ ನಿಯೋಗದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (SIO) ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್, ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್, ರಾಜ್ಯ ಸಲಹಾ ಸಮಿತಿಯ ಸದಸ್ಯ ಮೊಹಮ್ಮದ್ ಪೀರ್ ಲಟಗೇರಿ ಉಪಸ್ಥಿತರಿದ್ದರು.

WhatsApp Image 2025 12 16 at 11.31.29 AM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...