ಚನ್ನಪಟ್ಟಣ : ಸೋತ ಬಳಿಕ ಮತ್ತೆ ಮುಸ್ಲಿಮರ ಮೇಲೆ ಗೂಬೆ ಕೂರಿಸಿದ ನಿಖಿಲ್ ಕುಮಾರಸ್ವಾಮಿ

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿ, ಮಾಜಿ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ 25,413 ಮತಗಳ ಅಂತರದಿಂದ ಸೋತಿದ್ದಾರೆ. ಆ ಮೂಲಕ ಮಂಡ್ಯ ಲೋಕಸಭೆಯ ಸೋಲು, ರಾಮನಗರ ವಿಧಾನಸಭಾ ಕ್ಷೇತ್ರದ ಸೋಲಿನೊಂದಿಗೆ ಮೂರನೇ ಬಾರಿಗೆ ಚುನಾವಣೆಯಲ್ಲಿ ಸೋತಿದ್ದಾರೆ.

- Advertisement -

ತಮ್ಮ ಸೋಲಿನ ಬಳಿಕ ಬಿಡದಿ ತೋಟದ ಮನೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ತನ್ನ ಸೋಲಿನ ಹೊಣೆಯನ್ನು ಮತ್ತೆ ‘ಒಂದು ಸಮುದಾಯ’ ಎಂದು ಮತ್ತೊಮ್ಮೆ ಉಚ್ಛರಿಸುವ ಮೂಲಕ ಮುಸ್ಲಿಮರ ಮೇಲೆ ಗೂಬೆ ಕೂರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜೆಡಿಎಸ್‌ ಮುಖಂಡರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿಯವರ ಪುತ್ರ, “ಚನ್ನಪಟ್ಟಣ ಚುನಾವಣೆಯ ಫಲಿತಾಂಶ ನನಗೆ ಆಘಾತ ತಂದುಕೊಟ್ಟಿರುವುದರಲ್ಲಿ ಯಾವುದೇ ಸಂಶಯವಿಲ್ಲ. ನನ್ನ ಸೋಲಿಗೆ ಆ ಒಂದು ಸಮುದಾಯದ ಮತ ಒಂದೆಡೆ ಕ್ರೋಢೀಕರಣವಾದದ್ದು ಕೂಡ ಕಾರಣ. ಆ ಸಮುದಾಯಕ್ಕೆ ಎಷ್ಟೇ ಉಪಕಾರ ಮಾಡಿದ್ರೂ, ಆ ಸಮುದಾಯ ನನಗೆ ಮತ ಹಾಕಿಲ್ಲ” ಎಂದು ಹೇಳಿಕೆ ನೀಡುವ ಮೂಲಕ ಮತ್ತೆ ಮುಸ್ಲಿಮರ ಮೇಲೆ ಗೂಬೆ ಕೂರಿಸಿದ್ದಾರೆ. ರಾಮನಗರದ ಸೋಲಿನ ಸಂದರ್ಭದಲ್ಲೂ ನಿಖಿಲ್ ಕುಮಾರಸ್ವಾಮಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು.

ನಿಖಿಲ್

“ಬಹುಷಃ ಒಂದು ಸಮುದಾಯದ ಮತಗಳು ಕಾಂಗ್ರೆಸ್‌ನ ಪರ ದೊಡ್ಡಮಟ್ಟದಲ್ಲಿ ಕ್ರೋಢೀಕರಿಸಿದ್ದರು. ಇಂದಿನ ಸೋಲಿನ ಅಂತರವನ್ನು ನೋಡುವಾಗ ಅದು ಗೊತ್ತಾಗುತ್ತದೆ. ಜೆಡಿಎಸ್ ಪಕ್ಷ ಸ್ಥಾಪನೆಯಾದಾಗಿನಿಂದ ಆ ಒಂದು ಸಮುದಾಯದ ಪರವಾಗಿ ನಾವು ಅನೇಕ ಸಂದರ್ಭದಲ್ಲಿ ಜೊತೆ ನಿಂತಿದ್ದೇವೆ. ಮೀಸಲಾತಿ ಕೊಟ್ಟಿರುವಂತಹ ಸಾಕಷ್ಟು ಉದಾಹರಣೆಗಳಿವೆ. ಎಲ್ಲವನ್ನೂ ಈಗ ಬದಿಗಿಟ್ಟು ಈ ಉಪಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಸ್ಪಂದನೆಯನ್ನು ನೀಡಿಲ್ಲ. ಹಳ್ಳಿಯ ಕಡೆ ಇರುವ ಜನ ನನ್ನನ್ನು ಕೈ ಬಿಟ್ಟಿಲ್ಲ. ಅವರು ನನಗೆ ಮತ ಹಾಕಿದ್ದರಿಂದಲೇ 87 ಸಾವಿರದಷ್ಟು ಮತ ನನಗೆ ದೊರಕಿದೆ” ಎಂದು ತಿಳಿಸಿದರು.

“ಜನರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ. ನಾನು ಈ ಜಿಲ್ಲೆಯ ಮಗ ಅಂತ ಭಾವಿಸುತ್ತೇನೆ. ಚನ್ನಪಟ್ಟಣ ಫಲಿತಾಂಶ ಆಘಾತ ತಂದಿದೆ. ಒಬ್ಬ ಯುವಕನಿಗೆ 87 ಸಾವಿರ ಮತ ಬಂದಿದೆ. ಇದು ಬಯಸದೇ ಬಂದ ಚುನಾವಣೆ. ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲರಿಗೂ ಧ್ವನಿಯಾಗಿ ಇರುತ್ತೇನೆ. ಎಲ್ಲಿ ನಾವು ಎಡವಿದ್ದೇವೆ. ಎಲ್ಲಿ ಸರಿಪಡಿಸಿಕೊಳ್ಳವಬೇಕು ಅಂತ ಕೂತು ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿಯಿಂದ ಪಕ್ಷ ಅಲ್ಲ. ಈ ಸೋಲಿನಿಂದ ನಾನು ಎದೆಗುಂದಲ್ಲ. ಯುವ ಸಮುದಾಯಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತೇನೆ” ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

“ಇಲ್ಲಿಯವರೆಗೂ ನಾನು ಗೆಲುವು ನೋಡಿಲ್ಲ. ಇದು ನನ್ನ ಮೂರನೇ ಸೋಲು. ಸೋಲನ್ನು ಒಪ್ಪಿಕೊಳ್ಳುತ್ತೇನೆ. ಸೋತ್ವಿ ಅಂತ ಮೂಲೆಯಲ್ಲಿ ಕುಳಿತುಕೊಳ್ಳಲ್ಲ. ಸಾಮಾನ್ಯ ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಅವರಿಗೆ ನಾನು ಋಣಿಯಾಗಿರುತ್ತೇನೆ. ಮತದಾರರು ಯಾವುದೇ ರೀತಿಯ ನಿರ್ಣಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಅವರಿಗಿದೆ” ಎಂದು ನಿಖಿಲ್‌ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆಲುವು: ನಿಂದನೆಗಳಿಂದ ಬಚಾವಾದ ಸಚಿವ ಜಮೀರ್

2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ಭದ್ರಕೋಟೆ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ಜನ್ಮ ನೀಡಿದ್ದ ಕ್ಷೇತ್ರವಾಗಿದ್ದ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅನಿತಾ ಕುಮಾರಸ್ವಾಮಿ ಅವರು ಮಗನಿಗಾಗಿ ಪಕ್ಷ ಬಿಟ್ಟುಕೊಟ್ಟರೆ, ಮೊಮ್ಮಗನನ್ನು ಗೆಲ್ಲಿಸಲು ಸ್ವತಃ ಹೆಚ್​ಡಿ ದೇವೇಗೌಡರೇ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಕ್ಷೇತ್ರ ಸಂಚಾರ ನಡೆಸಿ ಮತ ಯಾಚಿಸಿದ್ದರು. ಆದರೆ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್‌ ಅವರ ವಿರುದ್ಧ ಸೋಲು ಕಂಡಿದ್ದರು. ಆ ವೇಳೆಯಲ್ಲಿ ಕೂಡ ನನ್ನ ಸೋಲಿಗೆ ಮುಸ್ಲಿಮರು ಕಾರಣ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದರು. ಅದನ್ನೇ, ಚನ್ನಪಟ್ಟಣ ಸೋಲಿನ ನಂತರ ಉಲ್ಲೇಖ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...