ಹಾಸನ | ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ

Date:

  • ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠವೇರಿದ್ದ ಶ್ರೀಗಳು

ಹಾಸನ ಜಿಲ್ಲೆಯ ಐತಿಹಾಸಿಕ ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ತಿಂಗಳಿಂದ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಗುರುವಾರ ಮುಂಜಾನೆ ಆರೋಗ್ಯ ಸ್ಥಿತಿಯಲ್ಲಿ ದಿಢೀರ್ ಏರು ಪೇರು ಆಗಿದ್ದು, ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು. 1970ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.

ಸ್ವಸ್ಥಿಶ್ರೀ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ. ಮೂಲತಃ ಶ್ರವಣಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ 13ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು “ಚಾರುಕೀರ್ತಿ” ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರೀಚಾರುಕೀರ್ತಿ ಎಂದೆ ಕರೆಯಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಲಮೇಲ | ಸಾಮಾನ್ಯರಿಗೆ ಅರ್ಥವಾಗುವ ಭಾಷೆಯ ಸಾಹಿತ್ಯ ಕನಕದಾಸರದ್ದು: ಹಾವಣ್ಣ

'ತಮ್ಮದೇ ಆದಂತ ಸಾಹಿತ್ಯದ ವಚನಗಳ ಮೂಲಕ ಜಾತಿ, ಮತ, ಕುಲಗಳ ಭೇದಭಾವವನ್ನು...

ದಾವಣಗೆರೆ | ಸಾಮಾಜಿಕ ಕಾರ್ಯಕರ್ತರ ಹೆಸರಲ್ಲಿ ಬೆದರಿಕೆ ಹಾಕಿದವರ ಬಂಧಿಸುವಂತೆ ಒತ್ತಾಯ

ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರೆಂದು ಹೇಳಿಕೊಂಡು ನಮ್ಮ ಶಾಲೆಯ ವಿರುದ್ಧ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...