ಬಿಜೆಪಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ: ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Date:

ಬಿಜೆಪಿ ಸೈದ್ಧಾಂತಿಕವಾಗಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಬಲರಾಗುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಯಾಗುತ್ತದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಆದರೆ ರಾಜ್ಯ ಈಗ ಸುಭಿಕ್ಷವಾಗಿದೆ. ಇಡೀ ದೇಶದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ ಏಕೈಕ ರಾಜ್ಯ ಕರ್ನಾಟಕ. ಬಿಜೆಪಿಯ ಬುರುಡೆ ದಾಸರು ಬುರುಡೆ ಬುಡುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅನ್ನಭಾಗ್ಯ ಯೋಜನೆ ಮೋದಿಯವರದ್ದು ಎಂದು ಬಿಜೆಪಿಯವರು ಬುರುಡೆ ಬಿಡುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ಉತ್ತರಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಏಕೆ ಜಾರಿಗೆ ತಂದಿಲ್ಲ? ಅಲ್ಲೆಲ್ಲಾ ಉಚಿತ ಅಕ್ಕಿ ಕೊಡುವ ಕಾರ್ಯಕ್ರಮಗಳು ಏಕೆ ಇಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಕುಂಟೆ ಮೂರ್ತಿ ಪ್ರಕರಣ : ಟ್ರೋಲರ್‌ಗಳ ವಿರುದ್ಧ ಕ್ರಮ ಅಗತ್ಯ

ಗೃಹಲಕ್ಷ್ಮಿ ಯೋಜನೆಗೆ 35 ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇವೆ. ಇಡಿ ದೇಶದಲ್ಲಿ 30 ಸಾವಿರ ಕೋಟಿಯ ಒಂದೇ ಯೋಜನೆ ಜಾರಿಗೆ ತಂದ ಏಕೈಕ ರಾಜ್ಯ ನಮ್ಮ ಕರ್ನಾಟಕ. ಒಂದು ಕೋಟಿ 28 ಲಕ್ಷ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. ಇದನ್ನು ಸಹಿಸಲಾರದೆ ಅತ್ತೆ-ಸೊಸೆ, ಅತ್ತಿಗೆ- ನಾದಿನಿ ಜಗಳ ಹುಟ್ಟು ಹಾಕ್ತಾ ಬಿಜೆಪಿಯವರು ಕಿರಿಕ್ ಮಾಡ್ತಾ ಇದಾರೆ. ಇವರಿಗೆ ಮನುಷ್ಯತ್ವ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ, ರಾಜಕೀಯ , ಆರ್ಥಿಕ ಅಸಮಾನತೆ ,ಲಿಂಗ ತಾರತಮ್ಯಕ್ಕೆ ಐತಿಹಾಸಿಕ ಕಾರಣಗಳಿವೆ. ಇದನ್ನು ಸರಿಪಡಿಸಿದರೆ ಮಾತ್ರ ಸಂವಿಧಾನ, ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ. ಅಕ್ಷರ ವಂಚಿತ ಶೂದ್ರರ ರೀತಿಯಲ್ಲಿಯೇ ಮಹಿಳೆಯರೂ ಕೂಡ ಶೋಷಿತರಾಗಿದ್ದರು. ಸಮಾಜದಲ್ಲಿ ಶೇಕಡಾ ಅರ್ಧದಷ್ಟಿರುವ ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು. ಮಹಿಳೆಯರು ಸಬಲರಾಗಿರದ ದೇಶ,ರಾಜ್ಯ ಕೂಡ ಸಬಲವಾಗಿರುವುದಿಲ್ಲ.ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ,ಮೀಸಲಾತಿ ನೀಡಿದ ಹೆಮ್ಮೆ ನಮ್ಮದಾಗಿದೆ.ದೇಶದ ಲೋಕಸಭೆ,ಎಲ್ಲಾ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸುವ ಅವಕಾಶ ಕೇಂದ್ರ ಸರ್ಕಾರಕ್ಕೆ ಇದೆ.ಕೇಂದ್ರ ಈ ದಿಟ್ಟ ಹೆಜ್ಜೆ ಇರಿಸಿದರೆ ನಾವು ಬೆಂಬಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗ ಚಾಲನೆ ನೀಡಲಾಗಿದೆ. ಆಗಸ್ಟ್ 16 ರಿಂದ ಯೋಜನೆ ಜಾರಿಗೊಳ್ಳಲಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಹಣಕಾಸಿನ ಸಂಕಷ್ಟಕ್ಕೆ ಸಿಲುಕಲಿದೆ ಎಂಬ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ ಅಂತಹ ಮಾತುಗಳಿಗೆ ಯಾವುದೇ ಬೆಲೆ ಇಲ್ಲ.ಕೊಟ್ಟ ಮಾತಿನಂತೆ ನಡೆದಿದ್ದೇವೆ.ಇಂದಿನ ದಿನ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನವಾಗಿದೆ ಎಂದು ಸಿಎಂ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ,ಈ ರಾಜ್ಯ,ರಾಷ್ಟ್ರದಲ್ಲಿ ಏನಾದರೂ ಬದಲಾವಣೆ ಆಗಬೇಕಿದ್ದರೆ ಅದು ಯುವಕರು ಹಾಗೂ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡ ಅವರು,ನಾಡಿನ ತಾಯಂದಿರಿಗೆ ಗೃಹಲಕ್ಷ್ಮಿ ಯೋಜನೆಯಡಿ ನೆರವು ನೀಡುತ್ತಿರುವದು ಅವರಿಗೆ ಸೇವೆ ಸಲ್ಲಿಸುವ ಭಾಗ್ಯವಾಗಿದೆ ಎಂದರು.

ಮುಖ್ಯಮಂತ್ರಿಗಳು ಇಂದು ಬೆಳಗಿದ ಗೃಹಲಕ್ಷ್ಮಿಯ ಜ್ಯೋತಿಯು ರಾಜ್ಯದ ಕೋಟ್ಯಂತರ ಕುಟುಂಬಗಳನ್ನು ಬೆಳಗಿಸುವ ಹಣತೆಯಾಗಿದೆ. ಆರ್ಥಿಕವಾಗಿ ಹೆಣ್ಣು ಕುಟುಂಬದ ಕಣ್ಣು ಎಂಬ ಸಬಲತೆಯನ್ನು ಸಾಕಾರಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ. ಕೊಟ್ಟ ಮಾತನ್ನು ಉಳಿಸಿಕೊಂಡು ನುಡಿದಂತೆ ನಡೆದಿದ್ದೇವೆ. ಮಹಿಳೆಯರ ಕೈಯಲ್ಲಿನ ದುಡ್ಡು ಸಮಾಜದ ಆರ್ಥಿಕತೆಗೆ ಚಲನಶೀಲತೆ ತರಲಿದೆ. ಮೈಸೂರಿನಲ್ಲಿ ಅನ್ನಭಾಗ್ಯ, ಕಲಬುರ್ಗಿಯಲ್ಲಿ ಗೃಹಜ್ಯೋತಿ ಹಾಗೂ ಬೆಳಗಾವಿಯಲ್ಲಿ ಗೃಹಲಕ್ಷಿ ಯೋಜನೆಗಳನ್ನು ಉದ್ಘಾಟಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಮಾತನಾಡಿ, ಬಸವಣ್ಣ, ಡಾ ಬಿ ಆರ್‌ ಅಂಬೇಡ್ಕರ್, ಶಿವಾಜಿ ಮಹಾರಾಜರಂತಹ ಮಹಾನ್ ಚೇತನಗಳು ತೋರಿದ ಹಾದಿಯಲ್ಲಿ ವಿಶೇಷವಾಗಿ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಸ್ತ್ರೀಶಕ್ತಿಕರಣಗೊಳಿಸುವಂತಹ ಅರ್ಥಪೂರ್ಣ ಕಾರ್ಯಕ್ರಮ ಇದಾಗಿದೆ. ಪ್ರಿಯದರ್ಶಿನಿ ಇಂದಿರಾಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ದಿನದಂದೇ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಿರುವುದು ಸಂತಸ ತಂದಿದೆ. ಹಳ್ಳಿಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ನನಗೆ ಗ್ರಾಮೀಣ ಬದುಕಿನ ಸಂಕಷ್ಟಗಳು ಗೊತ್ತಿವೆ. ಸರ್ಕಾರದಿಂದ ಸಿಗುವ ಗೃಹಲಕ್ಷ್ಮಿಯ ಮಾಸಿಕ 2 ಸಾವಿರ ರೂ.ನೆರವು, ರಾಜ್ಯದ 1.28 ಕೋಟಿ ಕುಟುಂಬಗಳಲ್ಲಿ ನೆಮ್ಮದಿ ಮೂಡಿಸಲಿದೆ. ಆ ಕುಟುಂಬಗಳ ಹಾರೈಕೆ, ಸಮಾಧಾನ ಸರ್ಕಾರಕ್ಕೆ ಸಿಗುವ ಆಶೀರ್ವಾದವಾಗಿದೆ ಎಂದರು.

ಕೈ ಎತ್ತಿ ನೋಡೋಣ

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ಉಚಿತ ಬಸ್ ಪ್ರಯಾಣ ಮಾಡಿದವರು ಯಾರಿದ್ದೀರಿ ಕೈ ಎತ್ತಿ” ಎಂದರು. ಸಭೆಯಲ್ಲಿದ್ದ ಎಲ್ಲ ಮಹಿಳೆಯರೂ ಕೈ ಎತ್ತಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಶಕ್ತಿ ಯೋಜನೆ ಒಳ್ಳೇದೋ ಅಲ್ವೋ ಹೇಳಿ” ಎಂದು ಕೇಳಿದರು. ಮಹಿಳೆಯರು, ಒಳ್ಳೆ ಕಾರ್ಯಕ್ರಮ. ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಎಂದು ಕೂಗಿದರು.

ಶಾಸಕರಾದ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್‌ ಹಾಗೂ ಸಚಿವರಾದ ರಾಮಲಿಂಗಾರೆಡ್ಡಿ, ಕೆ ಎಚ್ ಮುನಿಯಪ್ಪ, ಡಾ. ಹೆಚ್ ಸಿ ಮಹದೇವಪ್ಪ, ರಹೀಂ ಖಾನ್‌, ಬೈರತಿ ಸುರೇಶ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈಡೇರಿದ ಮೂರನೇ ಗ್ಯಾರಂಟಿ

ಈಗಾಗಲೇ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ,ಗೃಹ ಜ್ಯೋತಿ, ಅನ್ನಭಾಗ್ಯ ಅನುಷ್ಠಾನಗೊಳಿಸುವ ಮೂಲಕ ಜನರ ಮನಗೆದ್ದಿರುವ ಸರಕಾರ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದೆ.ಈ ಮೂಲಕ ತಾನು ಚುನಾವಣಾ ಪೂರ್ವದಲ್ಲಿ ನೀಡಿದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆ ಪ್ರತಿ ತಿಂಗಳಿಗೆ 2 ಸಾವಿರಗಳಂತೆ ವರ್ಷಕ್ಕೆ 24 ಸಾವಿರ ರೂ.ಗಳನ್ನು ಪಡೆಯಲಿದ್ದಾರೆ. ರಾಜ್ಯದ 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರಕಲಿದೆ.
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ಜು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಸದುದ್ದೇಶದಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ.

ಗೃಹಲಕ್ಷ್ಮೀ ಯೋಜನೆ ಕುಂದು ಕೊರತೆ ನಿವಾರಣೆಗೆ ಉಚಿತ ಸಹಾಯವಾಣಿ 1902

ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಯಾ ತಾಲೂಕಿನಡಿ ಗೃಹಲಕ್ಷ್ಮಿ ಯೋಜನೆಯ ಕುರಿತಂತೆ ಸಾರ್ವಜನಿಕರಿಂದ ಬರುವಂತಹ ಕುಂದುಕೊರತೆಗಳನ್ನು ಪರಿಶೀಲಿಸಿ ಪರಿಹಾರಗಳನ್ನು ಸೂಚಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಯಾ ಜಿಲ್ಲೆಯ ಉಪನಿರ್ದೇಶಕರು ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಪೀಲು ಪ್ರಾಧಿಕಾರಿ. ಗೃಹಲಕ್ಷ್ಮಿ ಯೋಜನೆಗೆ ಕುರಿತ ಯಾವುದೇ ಪ್ರಶ್ನೆಗಳಿಗೆ ಮತ್ತು ಸಮಸ್ಯೆಗಳಿಗೆ ಉಚಿತ ಸಹಾಯವಾಣಿ 1902.
ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 15ರ ನಂತರ ಫಲಾನುಭವಿಗಳು ಮೊದಲ ಹಣಕಾಸಿನ ನೆರವು ಪಡೆಯಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼನಾವೆದ್ದು ನಿಲ್ಲದಿದ್ದರೆ- ಕರ್ನಾಟಕʼ ಸಂಘಟನೆಯಿಂದ ಹಾಸನ ಚಲೋಗೆ ಬೆಂಬಲ

‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ...

ಬೀದರ್‌ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ

ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...