ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.
ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ ಖಾತೆ ಮರು ಹಂಚಿಕೆ ಮಾಡಿರುವ ಬಗ್ಗೆ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಬಳಿಯಿದ್ದ ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.
ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮುಖ್ಯಮಂತ್ರಿ ಬಳಿಯಿದ್ದ ಐಟಿ-ಬಿಟಿ ಖಾತೆಯನ್ನು ಮರುಹಂಚಿಕೆ ಮಾಡಲಾಗಿದೆ.
ಸದ್ಯ ಹಣಕಾಸು, ಸಂಸದೀಯ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗುಪ್ತಚರ ಹಾಗೂ ವಾರ್ತಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಇವೆ.

