ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

Date:

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಸುದರ್ಶನ್ ಯಾದವ್ ತಿಳಿಸಿದರು.

- Advertisement -

ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಲ್ಲಗುಟ್ಟಹಳ್ಳಿ ಬಳಿ ಈಗಲೇ ಕನ್ನಡ ಭವನ ನಿರ್ಮಾಣಕ್ಕೆ ಒಂದು ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.ನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲಾ ಕನ್ನಡಪರ ಸಂಘಟನೆಗಳು,ವಿವಿಧ ಸಂಘ ಸಂಸ್ಥೆಗಳು ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಆದರೆ ಇದೇ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದರು.ನಗರಸಭೆಯಲ್ಲಿ ಕನ್ನಡಪರ ಸಂಘಟನೆಗಳಿಗೆ ಯಾವುದೇ ಮರ್ಯಾದೆ ಕೊಡುವುದಿಲ್ಲ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಕೊಡಲು ಹೋದರೆ ಗೌರವಯುತವಾಗಿ ನಡೆಸಿಕೊಳ್ಳುವುದಿಲ್ಲವೆಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಕನ್ನಡ ಭವನಕ್ಕೆ ನಲ್ಲಗುಟ್ಟಹಳ್ಳಿ ಬಳಿ ಜಾಗ ಕೊಟ್ಟಿದ್ದೀರಿ, ಆದರೆ ಅದು ನಗರದಿಂದ ತುಂಬಾ ದೂರದಲ್ಲಿದೆ.ಅಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾಗಲು ಇನ್ನೂ 50 ವರ್ಷ ಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕುಂಟಿಗಡ್ಡೆ ಲಕ್ಷ್ಮಣ್ ಅವರು ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನೂ ಸರ್ಕಾರಿ ಕಚೇರಿಯ ಬಹುತೇಕ ಉದ್ಯೋಗಿಗಳೇ ಕನ್ನಡ ಮಾತನಾಡುವುದಿಲ್ಲ ಹೀಗೆಯೇ ಮುಂದುವರಿದರೆ ಇನ್ನೊಂದು 10 ವರ್ಷಗಳಲ್ಲಿ ಕನ್ನಡವನ್ನು ನಾವೆಲ್ಲಾ
ಮರೆತುಹೋಗಬೇಕಾಗುತ್ತದೆ.ಎಂಬ ಆತಂಕವನ್ನು ಹೋರಾಟಗಾರರು ವ್ಯಕ್ತಪಡಿಸಿದರು.

ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಂಪೂರ್ಣವಾಗಿ ಹಾಕಿರುವ ಎಲ್ಲಾ ಜಾಹೀರಾತುಗಳು ಆಂಗ್ಲ ಎಂಬ ಭಾಷೆಯಲ್ಲಿ ಇರುತ್ತದೆ, ಎಲ್ಲಿಯೂ ಕನ್ನಡವೇ ಕಾಣುತ್ತಿಲ್ಲವೆಂದು ಕನ್ನಡಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಅಳಲು ತೋಡಿಕೊಂಡರು.

ಕನ್ನಡಪರ ಸಂಘಟನೆಗಳು ಬ್ಯಾನರ್ ಕಟ್ಟಲು ನಗರಸಭೆ ಹಣ ಕೇಳುತ್ತದೆ ಎಂದು ಆರೋಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಹೆಸರಿನಲ್ಲಿ ಮಾತ್ರ ಬ್ಯಾನರ್‌ಗಳಿಗೆ ಅವಕಾಶ ನೀಡಲಾಗುವುದು.ವೈಯಕ್ತಿಕವಾಗಿ ಯಾವುದೇ ಬ್ಯಾನರ್‌ಗಳಿಗೆ ಅನುಮತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಭಾನುವಾರ ರಾಜ್ಯೋತ್ಸವ ಬಂದಿರುವುದರಿಂದ ಮತ್ತು ಸರ್ಕಾರಿ ಶಾಲೆಗಳ ಮಕ್ಕಳು ಮತ್ತು ಶಿಕ್ಷಕರನ್ನು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಕರೆಯಿಸಬೇಕೆಂದು ಶೀರಾಮ್ ನಗರ ಶಂಕರ್ ನಾರಾಯಣಸ್ವಾಮಿ ಸೇರಿದಂತೆ ಹಲವರು ಸಭೆಯಲ್ಲಿ ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ಪೂರ್ವಭಾವಿ ಸಭೆಯಲ್ಲಿ ಬಿ ಇ ಓ ನಾರಾಯಣಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಅಮರನಾರಾಯಣರೆಡ್ಡಿ, ತಾ.ಪಂ.ಕಚೇರಿ ವ್ಯವಸ್ಥಾಪಕ ರವಿ,ಕಸಾಪ ಅಧ್ಯಕ್ಷ ಶ್ರೀನಿವಾಸನ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...