ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

Date:

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದ್ದು, ಬಹುತೇಕ ಶಾಂತಿಯುತ ಹಾಗೂ ಬಿರುಸಿನ ಮತದಾನ ವಾಯಿತು.

- Advertisement -

ಮೋಡ ಕವಿದ ವಾತಾವರಣದ ನಡುವೆ ಆಗ್ನೇಯ ಪದವೀಧರ ಮತದಾರರು ಬೆಳಿಗ್ಗೆಯಿಂದ ಮತಗಟ್ಟೆಗಳಿಗೆ ಬಂದು ಸರದಿ ಸಾಲಿನಲ್ಲಿ ನಿಂತು ತಮ ತಮ ಮತ ಚಲಾಯಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 10 ಮಂದಿ ಕಣದಲ್ಲಿದ್ದಾರೆ. ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್‌ , ಕಾಂಗ್ರೆಸ್‌ ಅಭ್ಯರ್ಥಿ ಶಶಿ ಹುಲಿಕುಂಟೇಮಠ ನಡುವೆ ನೇರ ಹಣಾಹಣಿ ಇದೆ. ಉಳಿದಂತೆ ಸರ್ವ ಜನತಾ ಪಾರ್ಟಿಯ ಜಿ.ಸಿ.ಪಟೇಲ್ ಹಾಗೂ ಸ್ವತಂತ್ರ ಅಭ್ಯರ್ಥಿಗಳಾಗಿ ಕಪನಿಗೌಡ, ಚಿಕ್ಕರಾಜು ಯಾದವ್, ಲಕ್ಷ್ಮಯ್ಯ ಆರ್., ಲಕ್ಷ್ಮಿಕಾಂತ ಎಸ್.ಯಾದವ್, ಶಶಿ ಹುಲೀಕಟ್ಟೆ, ಸೈಯದ್ ಅಫಾಖ್ ಅಹಮದ್, ಅಡ್ವೊಕೇಟ್ ಬರೀದ್ ಅಖಾಡಲ್ಲಿದ್ದಾರೆ.

ಜಿಲ್ಲಾಧಿಕಾರಿ ಜಿ. ಪ್ರಭು ಭೇಟಿ ನೀಡಿ, ಮತದಾನ ಪ್ರಕ್ರಿಯೆ ವೀಕ್ಷಿಸಿದರು. ಬಳಿಕ ತಹಶಿಲ್ದಾರ್ ಕಚೇರಿ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ವ್ಯವಸ್ಥೆ ಹಾಗೂ ಪ್ರಕ್ರಿಯೆಯನ್ನು ಪರಿಶೀಲಿಸಿದರು.ಶಾಂತಿಯುತ ಹಾಗೂ ಸುಸೂತ್ರ ಮತದಾನಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 26,262 ಮತದಾರರು ನೋಂದಣಿಯಾಗಿದ್ದು, ಮತದಾನಕ್ಕಾಗಿ 36 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ 6-8 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತದಾನಕ್ಕೆ ಅಗತ್ಯವಾದ ಮೂಲಸೌಕರ್ಯ ಹಾಗೂ ಚುನಾವಣಾ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ತಹಶಿಲ್ದಾರ್ ಕಚೇರಿ ಮತಗಟ್ಟಿಯ ಅನತಿ ದೂರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಟೆಂಟ್ ಕಾಕಿ ಮತದಾರರು ಮತದಾನ ಕೇಂದ್ರದ ಬರುತ್ತಿದ್ದಂತೆ ಅವರನ್ನು ಓಲೈಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.ಜೊತೆಗೆ ಮತದಾರರಿಗೆ ಮತಗಟ್ಟಿ ಸಂಖ್ಯೆ ಹಾಗೂ ಮತದಾರರ ನೊಂದಣಿ ಸಂಖ್ಯೆಯನ್ನು ಬರೆದುಕೊಟ್ಟರು.

ಮತಗಟ್ಟಿಯಲ್ಲಿ ಸಿಬ್ಬಂದಿ ಮತದಾರರ ಗುರ್ತಿನ ಚೀಟಿ ,ಮತದಾರರ ನೊಂದಣಿ ಸಂಖ್ಯೆಯನ್ನು ಪರಿಶೀಲಿಸಿ, ಮೊಬೈಲ್ ಒಳಗೆ ಒಯ್ಯದಂತೆ ತಡೆದು ಮತ ಹಾಕಲು ಅನುವು ಮಾಡಿಕೊಟ್ಟಿರು.

ಇದನ್ನು ಓದಿದ್ದೀರಾ..?ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ಒಟ್ಟಾರೆ ಶಾಂತಿಯುತ ಮತದಾನಕ್ಕೆ ಬಾಗೇಪಲ್ಲಿ ಪಟ್ಟಣದಲ್ಲಿ ಸಬ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...