ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಪುರಸಭೆ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ ”ರಾಜ್ಯ ಪ್ರಧಾನ ಕಾರ್ಯದರ್ಶಿ” ಯನ್ನಾಗಿ ಕೂಡಲೇ ಜಾರಿಗೆ ಬರುವಂತೆ ಬಿ.ಆರ್.ನರಸಿಂಹ ನಾಯ್ಡು ಅವರನ್ನು ನೇಮಕ ಮಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರ್ ಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.
ಸೋಮವಾರ 12/10/2026 ರಂದು ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಬಿ.ಆರ್.ನರಸಿಂಹ ನಾಯ್ಡು ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಂದ ನೇಮಕಾತಿ ಪತ್ರ ಸ್ವೀಕರಿಸಿದ ಅವರು, ರೈತ ಮತ್ತು ಜನಪರ ಹೋರಾಟಗಳನ್ನು ಮುಂದುವರಿಸುವ ಸಂಕಲ್ಪ ಮಾಡಿದ್ದಾರೆ
ಬಿ.ಅರ್.ನರಸಿಂಹ ನಾಯ್ಡು ತದನಂತರ ಮಾತನಾಡಿ ಇದೊಂದು ನನ್ನ ಪಾಲಿಗೆ ಹೊಸ ತಿರುವು ಹಾಗೂ ಸಂತಸದ ಕ್ಷಣ. ನನ್ನ ಮೇಲೆ ನಂಬಿಕೆ ಇಟ್ಟು ಈ ದೊಡ್ಡ ಹುದ್ದೆ ನೀಡಿದ ಮಾಜಿ ಪ್ರಧಾನಿ ದೇವೇಗೌಡರಿಗೆ ಹಾಗೂ ಎಚ್.ಡಿ. ಕುಮಾರಸ್ವಾಮಿ ಅಣ್ಣನವರಿಗೆ ಶಿರಸಾಷ್ಟಾಂಗ ಪ್ರಣಾಮಗಳು. ಹಾಗೆಯೇ ಪಕ್ಷದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮತ್ತು ಗ್ರೇಟರ್ ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದಿದ್ದಾರೆ.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ
ರೈತ, ಹಾಗೂ ಮಹಿಳಾ ಹಾಗೂ ಜನಪರ ಹೋರಾಟಕ್ಕೆ ಸಂಕಲ್ಪ ಹುದ್ದೆಯನ್ನು ಹೊಂದುವುದು ಮಾತ್ರ ನಮ್ಮ ಗುರಿಯಾಗಬಾರದು, ಬದಲಿಗೆ ಆ ಹುದ್ದೆಗೆ ಸೂಕ್ತ ನ್ಯಾಯ ಒದಗಿಸುವುದು ನಮ್ಮ ಆದ್ಯತೆಯಾಗಬೇಕು ಎಂಬುದನ್ನು ನಾನು ಬಲವಾಗಿ ನಂಬಿದ್ದೇನೆ. ನನ್ನನ್ನು ಗುರುತಿಸಿ ಈ ಸ್ಥಾನ ನೀಡಿದ ಪಕ್ಷಕ್ಕಾಗಿ ಮನಸಾರೆ ಹಾಗೂ ಪ್ರಾಮಾಣಿಕವಾಗಿ ದುಡಿಯುತ್ತೇನೆ. ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಮಾಧ್ಯಮ ಕ್ಷೇತ್ರಕ್ಕೂ ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು, ನಿರಂತರವಾಗಿ ರೈತಪರ, ಮಹಿಳಾಪರ ಹಾಗೂ ಜನಪರ ಕೆಲಸಗಳನ್ನು ಮಾಡಲು ನಾನು ಬದ್ದನಾಗಿದ್ದೇನೆ ಎಂದು ಹೇಳಿದರು.





