ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ಮಗ್ನರಾಗಿ, ನಿರಂತರ ಸಭೆ, ಪ್ರಗತಿ ಪರಿಶೀಲನೆ, ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕಿನ ಪರಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಗಮನ ಸೆಳೆದರು.
ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಪರಗೋಡು ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಖುದ್ದು ಭೇಟಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಸಮಾಲೋಚನೆ ನಡೆಸಿದರು. ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳ ನಿರ್ವಹಣೆ ಮತ್ತು ತರಗತಿ ಕೊಠಡಿಗಳ ಭೌತಿಕ ಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡದರೇ ಸಾಲದು, ಪಾಠ್ಯ ಸಂಬಂಧಿಸಿದಂತೆ ಭೌತಿಕವಾಗಿ ಹತ್ತಿರದಲ್ಲಿ ಇರುವ ಕೃಷಿ, ಹೈನುಗಾರಿಕೆ,ಡೈರಿ, ನೀರಾವರಿ, ಗುಡಿ ಕೈಗಾರಿಕೆಗಳು,ಸ್ಥಳೀಯ ಗ್ರಾಮ ಪಂಚಾಯತಿ ಆಡಳಿತ, ಪೋಲಿಸ್ ಠಾಣೆ,ತೋಟಗಾರಿಕೆ,ಅರಣ್ಯ ಸ್ಥಳೀಯ ಪ್ರದೇಶಗಳಿಗೆ ಭೇಟಿ
ಮಕ್ಕಳ ಭೌತಿಕ ಶಿಕ್ಷಣ ನೀಡಬೇಕು, ಎಂದು ಹೇಳಿದರು.
ಸರ್ಕಾರಿ ಶಾಲೆಯಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಅಂಕಗಳೊಂದಿಗೆ ಸಾಧನೆ ಮಾಡುವ ಮೂಲಕ ತಮ್ಮ ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕಿವಿಮಾತು ಹೇಳಿದರು.
ಶಾಲಾ ಶಿಕ್ಷಕರ ಜೊತೆ ಸಂವಾದ ಮಾಡಿ ಶಾಲೆಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದ್ದಲ್ಲಿ ವರದಿ ನೀಡಿದರೆ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
ಇದನ್ನು ಓದಿದ್ದೀರಾ..?ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್‌ಗೆ ವಾಲ್ಮೀಕಿ ಸಮನ್ವಯ ಸಮಿತಿಯಿಂದ ಸನ್ಮಾನ
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಮುಲ್ ಅಧ್ಯಕ್ಷ ಮಂಜುನಾಥ ರೆಡ್ಡಿ, ತಹಶಿಲ್ದಾರ್ ಮನೀಷಾ ಎನ್ ಪತ್ರಿ,ಇ.ಓ.ನಾಗಮಣಿ,ಮುಖ್ಯ ಶಿಕ್ಷಕ ಸಿ.ವೆಂಕಟರಾಯಪ್ಪ, ಶಿಕ್ಷಕರಾದ ಕೆ.ರಮಾದೇವಿ,ಎಂ.ಗೋವಿಂದರಾಜು,ಸುಸ್ಮಿತ,ಎಸ್.ಡಿ.ಎಂ.ಸಿ.ಅದ್ಯಕ್ಷ ಶಿವಕುಮಾರ್, ಸದಸ್ಯರಾದ ಪಿ.ಎಂ.ಗಂಗರಾಜು ಹಾಜರಿದ್ದರು.




