ಬಾಗೇಪಲ್ಲಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿಗೆ ಸುಪ್ರೀಂ ಬಿಗ್ ರಿಲೀಫ್: ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ

Date:

ಬಾಗೇಪಲ್ಲಿ: ಚುನಾವಣಾ ಅಕ್ರಮದ ಆರೋಪದಡಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಸಿಕ್ಕಿದೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ತಡೆಯಾಜ್ಞೆ ನೀಡಿದೆ.

- Advertisement -

ಬಾಗೇಪಲ್ಲಿಯ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣಾ ತರಕಾರು ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಫೆಬ್ರವರಿ 16ರಂದು ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಅನರ್ಹಗೊಳಿಸಿ ಆದೇಶ ನೀಡಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು ಇಂದು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಡೆಯಾಜ್ಞೆ : ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲಾಗಿದೆ.​

ನೋಟಿಸ್ ಜಾರಿ: ಅರ್ಜಿದಾರ ಮುನಿರಾಜು ಹಾಗೂ ಇತರ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು ವಿವರಣೆ ಕೋರಿದೆ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ನಿಗದಿಪಡಿಸಲಾಗಿದೆ.​

ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

​ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಸುಬ್ಬಾರೆಡ್ಡಿ ಅವರು ಕನಿಷ್ಠ ಸೆಪ್ಟೆಂಬರ್ 7ರವರೆಗೂ ಶಾಸಕರಾಗಿ ಮುಂದುವರಿಯಲಿದ್ದಾರೆ. ಕ್ಷೇತ್ರದಲ್ಲೂ ಅವರ ಬೆಂಬಲಿಗರು ಈ ಆದೇಶವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಸುಪ್ರೀಂ ಕೋರ್ಟ್ ಬಂದ ಆದೇಶ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಪಟ್ಟಣದ ಡಿ.ವಿಜಿ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...