ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

Date:

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ‘ದೇಶದಲ್ಲಿ ಕೋಟ್ಯಂತರ ಮಂದಿ ಯುವ ಸಮೂಹವು ನಿರುದ್ಯೋಗಿಗಳಾಗಿದ್ದಾರೆ.

ದುಡಿಯುವ ಶಕ್ತಿ ಇದ್ದರೂ, ಅವರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವ ಜನಾಂಗಕ್ಕೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ಕೆ ಮುಂದಾಗಬೇಕು. ಖಾಸಗಿಕರಣದಿಂದ ಕೋಟ್ಯಂತರ ಮಂದಿ ಕೆಲಸ ಕಳೆದುಕೊಂಡು, ನಿರುದ್ಯೋಗಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದುಡಿಯುವ ಕೃಷಿ ಕೂಲಿ ಕಾರ್ಮಿಕರು, ಮಹಿಳೆಯರು, ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ’ ಎಂದು ಹೇಳಿದರು.

- Advertisement -

‘ದಲಿತ, ಹಿಂದುಳಿದ, ಅಲ್ಪಸಂಖ್ಯಾತರು, ಶೋಷಿತರು ಸೇರಿದಂತೆ ಎಲ್ಲ ವರ್ಗದವರ ಪರ ಯುವಶಕ್ತಿ ಗಟ್ಟಿಯಾಗಿ ಧ್ವನಿ ಎತ್ತಬೇಕು. ಆರ್ಥಿಕ, ಸಾಮಾಜಿಕ ಅಸಮಾನತೆ ತೊಲಗಿಸಬೇಕು. ಶಿಕ್ಷಣದ ಕೇಸರೀಕರಣ, ಖಾಸಗೀಕರಣದ ವಿರುದ್ಧ ಹೋರಾಟ ಮಾಡಬೇಕು. ಡಿವೈಎಫ್‍ಐ ಸ್ಥಳೀಯ ಸಮಸ್ಯೆಗಳ ಪರ ಮತ್ತು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಯುವಶಕ್ತಿಯ ಮನಸ್ಸುಗಳನ್ನು ಸಂಘಟಿಸಲು ಸಮ್ಮೇಳನದ ನೂತನ ಪದಾಧಿಕಾರಿಗಳು, ಯುವ ಕಾರ್ಯಕರ್ತರು ಮುಂದಾಗಬೇಕು. ನವ ಸಮಾಜ ನಿರ್ಮಾಣ ಮಾಡಬೇಕು’ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಸುನೀಲ್ ಕುಮಾರ್ ಜಜಾಲ್, ಡಿವೈಎಫ್‌ಐ ಸಂಘಟನೆ ನಡೆದು ಬಂದ ಹಾದಿ ಹಾಗೂ ಸ್ಥಳೀಯ ಸಮಸ್ಯೆಗಳ ವಿರುದ್ಧ ತಾವು ನಡೆಸಿದ ಹೋರಾಟಗಳನ್ನು ನೆನಪಿಸಿಕೊಂಡರು.

ದೇಶದಲ್ಲಿನ ಕೋಮುವಾದ, ಅನಕ್ಷರತೆ, ಅಸ್ಪಶ್ಯತೆ, ನಿರುದ್ಯೋಗ, ಶೋಷಣೆ, ಆಳುವ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಡಿವೈಎಫ್‍ಐ ಸಂಘಟನೆ ರಾಜ್ಯದಾದ್ಯಂತ ಹೋರಾಟ ಮಾಡಬೇಕು. ಕೃಷಿಕೂಲಿ ಕಾರ್ಮಿಕರು, ಯುವಜನರು, ಮಹಿಳೆಯರು, ವಿದ್ಯಾರ್ಥಿಗಳ ಸಮಸ್ಯೆಗಳು ಬಗೆಹರಿಯುವವರೆಗೆ ಸಂಘಟನಾತ್ಮಕ ಹೋರಾಟ ರೂಪಿಸಬೇಕು. ಕರಾವಳಿ, ಉತ್ತರ ಕರ್ನಾಟಕ, ಬಯಲುಸೀಮೆ ಪ್ರದೇಶಗಳ ಸ್ಥಳೀಯ ಸಮಸ್ಯೆಗಳನ್ನು ಇಟ್ಟುಕೊಂಡು, ಯುವಜನರು, ಕೃಷಿಕೂಲಿಕಾರ್ಮಿಕರ ಜೊತೆ ಸೇರಿ ಬೀದಿಗಿಳಿದು ಹೋರಾಟ ಮಾಡಬೇಕಿದೆ ಎಂದು ಹೇಳಿದರು.

Advertisements

ಜಂತರ್‌ಮಂತರ್‌ನಲ್ಲಿ ನಡೆದ ಯುವಶಕ್ತಿ ಹೋರಾಟದ ಪರಿಣಾಮ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಯಿತು. ಇದೇ ಮಾದರಿಯಲ್ಲಿ ಯುವಕರು ಸಂಘಟಿತರಾಗಬೇಕು. ರಾಜ್ಯದ ಉದ್ದಗಲಕ್ಕೂ ಡಿವೈಎಫ್‌ಐ ಸಂಘಟನೆಯ ಸದಸ್ಯತ್ವ ಹೆಚ್ಚಿಸಬೇಕು. ಜನವಿರೋಧಿ ಹೋರಾಟಗಳಲ್ಲಿ ಭಾಗವಹಿಸಬೇಕು’ ಎಂದು ಮುಖಂಡರು ತಿಳಿಸಿದರು.

ಡಿವೈಎಫ್‍ಐ ಸಂಘಟನೆಯ ಜನಪರ ಹೋರಾಟಗಳಲ್ಲಿ ಭಾಗಿಯಾದ ಮತ್ತು ಸಂಘಟನೆ ಬೆಳೆಸಿದವರನ್ನು ಕೆಂಪು ವಂದನೆಗಳ ಘೋಷಣೆಗಳೊಂದಿಗೆ ಶಾಲು ಹೊದಿಸಿ ಗೌರವಿಸಲಾಯಿತು.

ಮುಂದಿನ ದಿನಗಳಲ್ಲಿ ಡಿವೈಎಫ್‍ಐ ಸಂಘಟನೆಯಿಂದ ಜನಪರ ಹಕ್ಕುಗಳಿಗಾಗಿ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಮತ್ತು’ ರಾಜ್ಯ ಸರ್ಕಾರಗಳ ವಿರುದ್ಧ ಡಿವೈಎಫ್‍ಐ ಸಂಘಟನೆ ಧ್ವನಿ ಎತ್ತಲಿದೆ. ಜಿಲ್ಲೆಯಲ್ಲೂ ಡಿವೈಎಫ್‍ಐ ಸಂಘಟನೆಯು ಬಲಿಷ್ಠ ಚಳವಳಿಗಳು ನಡೆಯಲಿವೆ’ ಎಂದರು.

ಇದನ್ನು ಓದಿದ್ದೀರಾ..?ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಅಖಿಲ ಭಾರತ ಡಿವೈಎಫ್‌ಐ ಸಮಿತಿಯ ಥಾಮಸ್ ಹಿಮಂಗ್‍ನಾರಾಜ್ ಭಟ್ಟಾಚಾರ್ಯ, ರಾಜ್ಯ ಸಮಿತಿ ಅಧ್ಯಕ್ಷ ಲವಿತ್ರ ವಸ್ತ್ರದ್, ಕಾರ್ಯದರ್ಶಿ ಬಸವರಾಜ್‍ ಪೂಜಾರ್, ಸಂತೋಷ್ ಬಜಾಲ್, ದಿಲೀಪ್, ಜಿಲ್ಲಾ ಸಮಿತಿ ಕಾರ್ಯದರ್ಶಿ ವೈ.ಎನ್.ಹರೀಶ್, ಖಜಾಂಚಿ ಸುರೇಶ್, ಸಿದ್ದಗಂಗಪ್ಪ, ಎಂ.ಪಿ.ಮುನಿವೆಂಕಟಪ್ಪ, ಎಂ.ಎನ್.ರಘುರಾಮರೆಡ್ಡಿ, ಚನ್ನರಾಯಪ್ಪ, ದೇವಿಕುಂಟೆಶ್ರೀನಿವಾಸ್, ಡಿ.ಟಿ.ಮುನಿಸ್ವಾಮಿ, ಬೈರೆಡ್ಡಿ ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...