ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

Date:

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ ತಾಲ್ಲೂಕು ಮಾಡಲು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಹಿರಿಯ ವಕೀಲ, ತಾಲ್ಲೂಕು ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಎ.ಜಿ.ಸುಧಾಕರ್ ಮನವಿ ಮಾಡಿದರು.

- Advertisement -

ತಾಲ್ಲೂಕಿನ ಕೊಂಡಂವಾರಿಪಲ್ಲಿ ಗ್ರಾಮದ ಎಸ್‌ಎಲ್‌ಎನ್ ಕನ್ವೆಂಷನ್ ಹಾಲ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ‘ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಬಾಲ್ಯವಿವಾಹಗಳು, ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಆಗಿದೆ. ಹೆಣ್ಣುಮಕ್ಕಳ ಮೇಲೆ ಸ್ವತಃ ಕುಟುಂಬದ ಪುರುಷರು ಲೈಂಗಿಕ ಬಳಕೆ ಮಾಡಿಕೊಂಡಿದ್ದು, ಇದೀಗ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಹೆಣ್ಣುಮಕ್ಕಳ ಮತ್ತು ಮಹಿಳೆಯರ ಸಾಗಾಣಿಕೆ, ಪೋಕ್ಸೋ, ಬಾಲ್ಯವಿವಾಹಗಳು ಜಿಲ್ಲೆಯ ಪೈಕಿ ಬಾಗೇಪಲ್ಲಿ ತಾಲ್ಲೂಕು ನಂಬರ್ 1 ರಲ್ಲಿ ಇದೆ ಎಂದು ಅಂಕಿ ಅಂಶಗಳಿಂದ ತಿಳಿದಿದೆ. ಕೆಲ ಪೋಷಕರು ತಮ್ಮ ಜವಾಬ್ದಾರಿಯಿಂದ ಕಳೆದುಕೊಳ್ಳಲು ಕದ್ದುಮುಚ್ಚಿ ಮಾಡಲು ಆಂಧ್ರಪ್ರದೇಶಕ್ಕೆ ಹೋಗಿ 18 ವರ್ಷದ ಒಳಗೆ ಹೆಣ್ಣುಮಕ್ಕಳಿಗೆ ಬಾಲ್ಯವಿವಾಹಗಳು ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿದಿದೆ. ಬಾಲ್ಯವಿವಾಹ ಮಾಡುವುದರಿಂದ, ಮಕ್ಕಳ ಆರೋಗ್ಯ ಮತ್ತು ದೈಹಿಕ ಮೇಲೆ ತೀವ್ರ ಪರಿಣಾಮ ಆಗಲಿದೆ. ಡ್ರಗ್ಸ್, ಗಾಂಜಾ, ಆಫೀಮು ಸೇವನೆಗಳಿಂದ ಯುವಕರು ಬಲಿಯಾಗುತ್ತಿದ್ದಾರೆ. ಹೆಣ್ಣುಮಕ್ಕಳ ಮತ್ತು ಗಂಡುಮಕ್ಕಳ ಮೇಲೆ ಪೋಷಕರು ಸದಾ ಗಮನ ಹರಿಸಬೇಕು. ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳ ಮುಕ್ತ ತಾಲ್ಲೂಕು ಮಾಡಲು ಜನರ ಸಹಕಾರ ಅಗತ್ಯ ಇದೆ ಎಂದು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆರ್‌ಬಿಎಸ್‌ಕೆ ವೈದ್ಯೆಯರಾದ ಡಾ.ಟಿ.ಸರೂಪ ಮತ್ತು ಡಾ.ಶ್ರೀವಾಣಿರವರು ‘ಮಧ್ಯ ವಯಸ್ಕ ಮಹಿಳೆಯರಲ್ಲಿ ಆರೋಗ್ಯ ಮತ್ತು ಕಾನೂನು ಅರಿವು’ ಬಗ್ಗೆ ನೆರೆದ ಮಹಿಳೆಯರಿಗೆ ವಿಶೇಷ ಉಪನ್ಯಾಸ ನೀಡಿದರು. ಸಾಧಕಿಯರಿಗೆ ಗಣ್ಯರು ಶಾಲು ಹೊದಿಸಿ ಗೌರವಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಸಮಾಜ ಸೇವಕ ಸಿ.ಮುನಿರಾಜು, ಯೋಜನೆಯ ಜಿಲ್ಲಾ ನಿರ್ದೇಶಕ ಕೆ.ಚಿದಾನಂದ, ಜ್ಞಾನವಿಕಾಸ ವಿಭಾಗ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಸಂಗೀತ, ತಾಲ್ಲೂಕು ಯೋಜನಾಧಿಕಾರಿ ಎಂ.ಎಸ್.ಪ್ರವೀಣ್, ಜಿಲ್ಲಾ ಜನಜಾಗೃತಿ ವೇದಿಕೆಯ ತಾಲ್ಲೂಕು ಸದಸ್ಯ ಕೆ.ಎಂ.ನಾಗರಾಜು, ಸದಸ್ಯೆ ಪಾತಪಾಳ್ಯರಾಮ, ಮಹಿಳಾ ಮುಖಂಡರಾದ ಮಂಜುಳಮ್ಮ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...