ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

Date:

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸುವ ಆಟೊ ಚಾಲಕರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಪ್ರಯಾಣಿಕರನ್ನು ಬೇಕಾಬಿಟ್ಟಿಯಾಗಿ ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ತಾಲ್ಲೂಕಿನ ಗೂಳುರು, ಮಾರ್ಗಾನುಕುಂಟೆ, ತಿಮ್ಮಂಪಲ್ಲಿ, ಲಘುಮದ್ದೇಪಲ್ಲಿ, ಆಚೇಪಲ್ಲಿ, ಯಲ್ಲಂಪಲ್ಲಿ, ಮಿಟ್ಟೇಮರಿ,ಹೊಸಹುಡ್ಯ, ಆದಿಗಾನಹಳ್ಳಿ, ಪರಗೋಡು ಸೇರಿ ವಿವಿಧ ಕಡೆಗಳಿಗೆ ಕೆಎಸ್‍ಆರ್‌ಟಿಸಿ ಬಸ್ ಸಂಚಾರ ವಿರಳ ಇದೆ.ಆದ್ದರಿಂದ ಬೆಳಗ್ಗೆ ಮತ್ತು ಸಂಜೆ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಪ್ರತಿದಿನ ಶಾಲಾ ಮಕ್ಕಳು,ಕಾಲೇಜು ವಿಧ್ಯಾರ್ಥಿಗಳು, ಮಹಿಳೆಯರು, ವೃದ್ಧರು, ಕೃಷಿ ಕೂಲಿ ಕಾರ್ಮಿಕರು ಬಂದು ಹೋಗುವವರು ಖಾಸಗಿ ಆಟೊಗಳನ್ನೇ ಅವಲಂಬಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಆಟೊಗಳಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು ಪ್ರಯಾಣಿಕರನ್ನು ಕೂರಿಸಿಕೊಳ್ಳುವುದು. ಹಿಂಬದಿ ಸೀಟು,ಚಾಲಕರ ಸೀಟು ಅಕ್ಕಪಕ್ಕ ಪ್ರಯಾಣಿಕರನ್ನು ಕೂರಿಸಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

ಎರಡು ತಿಂಗಳ ಹಿಂದೆ ತಾಲ್ಲೂಕಿನ ಪರಗೋಡು ಗ್ರಾಮದಿಂದ ಪಟ್ಟಣಕ್ಕೆ ಬರುತ್ತಿದ್ದ ಆಟೊಗೆ ವಾಹನ ಡಿಕ್ಕಿ ಹೊಡೆದು 7 ಮಹಿಳಾ ಕೂಲಿಕಾರ್ಮಿಕರು ಮೃತಪಟ್ಟಿದ್ದರು. ಆಟೊಗಳಲ್ಲಿನ ಹಿಂದೆ ಮತ್ತು ಚಾಲಕನ ಅಕ್ಕಪಕ್ಕ ಜನರನ್ನು ಕೂರಿಸಲಾಗುತ್ತಿದೆ. ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಹಾಗೂ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಆಟೊಗಳಲ್ಲಿ 10-12 ಮಂದಿಯನ್ನು ಕುರಿಗಳಂತೆ ತುಂಬಿಕೊಳ್ಳಲಾಗುತ್ತಿದೆ. ಕೆಲ ಆಟೊಗಳ ಚಾಲಕರು ಮನಬಂದಂತೆ, ಅತಿ ವೇಗವಾಗಿ, ಸಮವಸ್ತ್ರ ಧರಿಸದೆ, ಸಂಚಾರ ನಿಯಮಗಳು ಉಲ್ಲಂಘಿಸಿದರೂ, ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕೆಎಸ್‍ಆರ್‌ಟಿಸಿ ಬಸ್‍ಗಳ ಸಂಚಾರ ಕಡಿಮೆ ಇದೆ. ಇದರಿಂದ ಅನಿವಾರ್ಯವಾಗಿ ಜನರು ಆಟೊಗಳಲ್ಲಿ ಪ್ರಯಾಣಿಸುತ್ತಾರೆ. ಅಪಾಯದ ಅಂಚಿನ ಆಟೊಗಳಲ್ಲಿ ಪ್ರಯಾಣ ಮಾಡುವುದು ಭಯವೆನಿಸುತ್ತದೆ. ಆದರೆ, ಇದೇ ಅನಿವಾರ್ಯವಾಗಿದೆ’ ಎಂದು ಗೂಳೂರು ಗ್ರಾಮದ ರೈತ ನಂಜುಂಡ ರೆಡ್ಡಿ ತಿಳಿಸಿದ್ದಾರೆ.

ಸರ್ಕಲ್ ಇನ್‌ಸ್ಪೆಕ್ಟರ್ ಅಜಯ್ ಸಾರಥಿ ಮಾತನಾಡಿ ಒಂದು ತಿಂಗಳ ಹಿಂದೆ ಆಟೊಗಳ ಮತ್ತು ಚಾಲಕರ ದಾಖಲೆಗಳನ್ನು ಪರಿಶೀಲಿಸಿ, ದಾಖಲೆ ರಹಿತರಿಗೆ ದಂಡ ಹಾಕಲಾಗಿದೆ. ಆಟೊ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಹೆಚ್ಚು ಜನರನ್ನು ಆಟೊಗಳಲ್ಲಿ ಕೂರಿಸಿಕೊಂಡು ಪ್ರಯಾಣಿಸುವುದು, ಹಿಂಬದಿಯಲ್ಲಿ ಕೂರಿಸುವುದು ಕಾನೂನು ಉಲ್ಲಂಘನೆಯೇ ಆಗಲಿದೆ. ಅಪಘಾತಗಳು ಸಂಭವಿಸಿದರೆ, ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಆಟೊ ಚಾಲಕರು ಸೇರಿದಂತೆ ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್...