ಸರ್ಕಾರ ರೈತ ಇಚ್ಛೆಗೆ ವಿರುದ್ದವಾಗಿ ಫಲತ್ತಾದ ಭೂಮಿಯಲ್ಲಿ ಬಿಡದಿ ಟೌನ್ಶಿಪ್ ನಿರ್ಮಾಣ ಮಾಡಲು ಮುಂದಾಗಿರುವುದು ಖಂಡನೀಯ. ಯೋಜನೆ ವಿರೋಧಿಸಿ ರೈತರು ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಅವರಿಗೆ ಸ್ಪಂದಿಸಿಲ್ಲ. ಮೊಂಡುತನ ಬಿಟ್ಟು ಯೋಜನೆಯನ್ನು ಕೈ ಬಿಡಬೇಕು’ ಎಂದು ರೈತರಿಗೆ ಬೆಂಬಲ ವ್ಯಕ್ತಪಡಿಸಲು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲು ಬೆಂಗಳೂರಿಗೆ ಪ್ರಯಾಣ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾದ್ಯಕ್ಷ ಆರ್. ಪ್ರತಾಪ್ ತಿಳಿಸಿದರು.
ಪಟ್ಟಣದ ಗೂಳೂರು ವೃತ್ತದಲ್ಲಿ ಬಸ್ ಗೆ ಚಾಲನೆ ನೀಡಿ ಮಾತನಾಡಿದರು. ಮಾತನಾಡಿ, ರಾಜ್ಯಾದ್ಯಂತ ರೈತರು ಭೂಸ್ವಾಧೀನ ಯೋಜನೆ ಕೈಬಿಡಲು ಪ್ರತಿಭಟನೆ ಮಾಡುತ್ತಿದ್ದವೆ ಆದರೂ ಸರ್ಕಾರ ಈ ಸ್ಥಳದಲ್ಲಿ ಜಂಟಿ ಅಳತೆ ಪ್ರಮಾಣಿಕರಣ ಮತ್ತು ಭೂಸಮೀಕ್ಷೆ ಮಾಡಲು ತೆರಳಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಮೇಲೆ ಹೂಡಿರುವ ಸುಳ್ಳು ಪ್ರಕರಣ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದದ ಬಿರುಗಾಳಿಯನ್ನು ಸೃಷ್ಟಿಸಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಡದಿ ಟೌನ್ ಶಿಪ್ ಯೋಜನೆ ರದ್ದುಪಡಿಸುವುದು, ರೈತರ ಜಮೀನನ್ನು ಭೂ ಸ್ವಾಧೀನ ಮಾಡಿಕೊಳ್ಳದಿರುವುದು, ಹಾಗೂ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಮಾಡಲು ಹೊರಟಿದ್ದೇವೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್
ಈ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ರೈತರು ಬಿಜೆಪಿ ನಾಯಕರು ಕಾರ್ಯಕರ್ತರು ಹಾಜರಿದ್ದರು.




