ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವತಿಯಿಂದ 2026-27ನೇ ಸಾಲಿನ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆ ಆಯ್ಕೆ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಗೇಪಲ್ಲಿ ಕಾಲೇಜಿನಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು ಈ ಕ್ರೀಡಾಕೂಟದಲ್ಲಿ ಒಟ್ಟು 21 ಕಾಲೇಜಿನಿಂದ 70 ಪುರುಷ ಕ್ರೀಡಾಪಟುಗಳು ಹಾಗೂ 55 ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದರು.
ಇದರಲ್ಲಿ ಪುರುಷ ತಂಡದ ವಿಜೇತರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ. ಹಾಗೂ ಎರಡನೇ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್ ಪುರಂ ಬೆಂಗಳೂರು ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡರು.
ಅದರಂತೆ ಮಹಿಳೆಯರ ವಿಭಾಗದಲ್ಲಿ ಸರ್ಕಾರಿ ಮಹಿಳಾ ಕಾಲೇಜು ಕೋಲಾರ ವಿಜೇತರಾಗಿದ್ದಾರೆ . ಎರಡನೇ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಗಾರಪೇಟೆ ಕ್ರೀಡಾಪಟುಗಳು ಪಡೆದುಕೊಂಡಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಸತ್ಯನಾರಾಯಣ ರೆಡ್ಡಿ , ನಿರ್ದೇಶಕರು ದೈಹಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಡಾ.ಶ್ರೀಕಾಂತ್ ಆರ್ಕಾ ಲೇಜಿನ ಪ್ರಾಂಶುಪಾಲರು ಡಾ.ನಾಗರಾಜ್ ಎಚ್.ಆರ್, ಹಿರಿಯ ಉಪನ್ಯಾಸಕರು ಪ್ರೊ.ಮುರಳಿ ಆನಂದ್ ಪ್ರೊ.ಮಂಜುನಾಥ್.ಬಿ
ತಾಜ್ ಉನ್ನಿಸಾ, ಪಂಚಾಂಗಂ ಹರಿ ಕುಮಾರ್, ಮುನಿಕೃಷ್ಣಪ್ಪ, ಪೂರ್ಣಂಕುವಾರ್, ಶೃತಿ, ದೈಹಿಕ ಶಿಕ್ಷಣ ನಿರ್ದೇಶಕರು ಆದ ಡಾ.ಪ್ರವೀಣ್ .ಎಂ ಹಾಗೂ ಕಾಲೇಜಿನ ಆಡಳಿತ ಸಿಬ್ಬಂದಿ ಹಾಗೂ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.






