ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ ಜಯಂತಿಗೆ ವಾಲ್ಮೀಕಿ ಮುಖಂಡರು ಕಪ್ಪು ಪಟ್ಟಿ ಧರಸಿ ಬಹಿಷ್ಕಾರ ಹಾಕಿ ತಾಲೂಕು ಪಂಚಾಯಿತಿ ಭವನದಲ್ಲಿ ಸೋಮವಾರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಮುಖಂಡರು ಗ್ರೇಟ್2 ತಹಸೀಲ್ದಾರ್ ಮೋಹನ್ ಕುಮಾರ್ ಗೆ ಮನವಿ ಪತ್ರ ಸಲ್ಲಿಸಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಕಪ್ಪು ಪಟ್ಟಿ ಧರಸಿ ಸಭೆಯಿಂದ ಹೊರ ನಡೆದರು.
ಈ ಸಂದರ್ಭದಲ್ಲಿ ಮಾಜಿ.ಜಿಲ್ಲಾ ಪಂಚಾಯಿತಿ ಸದಸ್ಯರಾದ ಬುರಗಮಡುಗು ಲಕ್ಷ್ಮಿ ನರಸಿಂಹಪ್ಪ ಮಾತನಾಡಿ
ಪರಿಶಿಷ್ಟ ಪಂಗಡಕ್ಕೆ ಶೇ 7ರಷ್ಟು ಹಾಗೂ ಪರಿಶಿಷ್ಟ ಜಾತಿಗೆ ಶೇ 17ರಷ್ಟು ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ ಮೀಸಲಾತಿ ಶೇ 50ರಷ್ಟನ್ನು ಮೀರಬಾರದು ಎಂದು ಹೈಕೊರ್ಟ್ ಇರುವುದನ್ನು ರದ್ದು ಮಾಡಲಾಗಿದೆ. ಇದರಿಂದ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿ ಸಿಗದೆ ಅನ್ಯಾಯವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಾವು ಸಭೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಹೇಳಿದರು.
ಹೈಕೋರ್ಟ್ ಹೆಚ್ಚಿಸಿದ ಮೀಸಲಾತಿ ರದ್ದು ಗೊಳಿಸಿರುವುದು ವಾಲ್ಮೀಕಿ ಸಮಾಜಕ್ಕೆ ಭಾರಿ ಅನ್ಯಾಯವಾಗಿದೆ. ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿಯನ್ನು ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕು, ಹೈಕೋರ್ಟ್‍ಗೆ ಮನವರಿಕೆ ಮಾಡಬೇಕು’ ಎಂದರು.
ಮೀಸಲಾತಿ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೇಜವಾಬ್ದಾರಿತನ ತೋರಿವೆ. ನಾವು ಯಾರ ವಿರುದ್ಧವಲ್ಲ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಬೇಕು ಅಷ್ಟೇ ನಮ್ಮ ಬೇಡಿಕೆ ಎಂದು ಕಿಡಿಕಾರಿದರು.
ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಮೀಸಲಾತಿ ನೀಡಲಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಜಾರಿಗೆ ಕ್ರಮ ಕೈಗೊಂಡಿದ್ದರೂ, ಅದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಬಂದಿಲ್ಲ ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್
ಈ ಸಂದರ್ಭದಲ್ಲಿ ವಾಲ್ಮೀಕಿ ಮುಖಂಡರಾದ ಮರಿಯಪ್ಪ, ಅಮರಪ್ಪ,ಗಡ್ಡಂ ರಮೇಶ್, ಗೂಳೂರು ಬಾಬು,ಅಂಜನಪ್ಪ,ಜಿವಿಕಾ ನಾರಾಯಣ ಸ್ವಾಮಿ,ಕೊಟಪ್ಪ,ವಾಲ್ಮೀಕಿ ಅಶ್ವತ್ಥಪ್ಪ, ಶಿವಪ್ಪ,ಹಾಗೂ ಇತರರು ಹಾಜರಿದ್ದರು.





