ಬಾಗೇಪಲ್ಲಿ | ಮತದಾರರ ಹಕ್ಕು ರಕ್ಷಣೆಗೆ ‘ನಾಗರಿಕ ಮತ ಕಾವಲು ಸಮಿತಿ’ ಅಸ್ತಿತ್ವಕ್ಕೆ: ಅಭಿಯಾನಕ್ಕೆ ಚಾಲನೆ

Date:

ತಾಲ್ಲೂಕು ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ತಾಲ್ಲೂಕು ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ.‌ ಮತದಾರರ ಹಕ್ಕು ರಕ್ಷಣೆಗಾಗಿ‌ ಬೃಹತ್ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ‘ಎಸ್‌ಐಆರ್ ವಿರೋಧಿ ಜ್ಯಾತ್ಯತೀತ ಪಕ್ಷಗಳ ಜನಪರ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ನಾಗರಿಕ ಮತಕಾವಲು ಸಮಿತಿ ಜಿಲ್ಲಾದ್ಯಕ್ಷ ಮಹಮ್ಮದ್ ನೂರುಲ್ಲಾ ತಿಳಿಸಿದರು.

- Advertisement -

ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಾಗರಿಕ ಮತ ಕಾವಲು ಸಮಿತಿ’ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಪ್ರಸ್ತುತ ಜಾರಿಯಲ್ಲಿರುವ ‘ಎಸ್‌ಐಆರ್’ ಪ್ರಕ್ರಿಯೆಯು ಅತ್ಯಂತ ಅವೈಜ್ಞಾನಿಕ, ದೋಷಪೂರಿತ ಹಾಗೂ ದುರುದ್ದೇಶಪೂರಿತವಾಗಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರು ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕಳೆದ ಮೂರ್ನಾಲ್ಕು ತಿಂಗಳುಗಳಿಂದ ‘SIR ವಿರೋಧಿ ಕರ್ನಾಟಕ’ ವೇದಿಕೆಯ ಮೂಲಕ ವ್ಯಾಪಕ ಪ್ರತಿಭಟನೆ ಹಾಗೂ ಒತ್ತಡ ಹೇರುವ ಕಾರ್ಯಕ್ರಮಗಳನ್ನು ನಡೆಸಲಾಗಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಯಾವುದೇ ಮನವಿಗಳಿಗೆ ಸ್ಪಂದಿಸಿಲ್ಲ. ಅದು ಸರ್ವಾಧಿಕಾರಿ ಧೋರಣೆಯಿಂದ ಎಸ್‌ಐಆರ್ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. ಪ್ರಸ್ತುತ ಇಡೀ ಪ್ರಕ್ರಿಯೆಯು ತೀವ್ರ ಗೊಂದಲ ಮತ್ತು ಅವ್ಯವಸ್ಥೆಯ ಗೂಡಾಗಿದೆ” ಎಂದು ದೂರಿದ್ದಾರೆ.

ಬಡವರು ಮತ್ತು ಸಾಮಾನ್ಯ ಜನಸಾಮಾನ್ಯರು ದಾಖಲೆಗಳನ್ನು ಒದಗಿಸಲು ಪರದಾಡುವ ಅರಾಜಕ ಪರಿಸ್ಥಿತಿ ನಿರ್ಮಾಣವಾಗಲಿದೆ. ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಅನಕ್ಷರಸ್ಥರು ದೊಡ್ಡ ಸಂಖ್ಯೆಯಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ನಿಚ್ಚಳ ಸಾಧ್ಯತೆಗಳು ಗೋಚರಿಸುತ್ತಿವೆ” ಎಂದು‌ ಹೇಳಿದ್ದಾರೆ.

“ಈ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಚನೆಯಾಗಿರುವ ‘ನಾಗರಿಕ ಮತ ಕಾವಲು ಸಮಿತಿ’ಯು ಐದು ಪ್ರಮುಖ ಕಾರ್ಯಸೂಚಿಗಳೊಂದಿಗೆ ಕಣಕ್ಕಿಳಿಯುತ್ತಿದೆ; ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ದಿನನಿತ್ಯದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳು ಹಾಗೂ ಮಾಧ್ಯಮಗಳ ಗಮನಕ್ಕೆ ತರುವುದು, ಜನರ ಗೊಂದಲಗಳನ್ನು ಪರಿಹರಿಸಿ ಸೂಕ್ತ ರೀತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನೆರವಾಗುವುದು ಸಮಿತಿಯ ಮೊದಲ ಆದ್ಯತೆಯಾಗಿದೆ” ಎಂದು ತಿಳಿಸಿದರು.

“ಜೊತೆಗೆ, ಸರ್ಕಾರ ಘೋಷಿಸಿರುವ ಸಹಾಯವಾಣಿ (ಹೆಲ್ಪ್‌ಡೆಸ್ಕ್) ಮತ್ತು ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ ವಿತರಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನಿಗಾವಹಿಸಲಾಗುತ್ತದೆ. ಪ್ರತಿ ಬೂತ್ ಮಟ್ಟದಲ್ಲೂ ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಿ, ನೋಟಿಸ್ ಪಡೆದವರನ್ನು ಗುರುತಿಸಿ ನೆರವಾಗುವುದರ ಜೊತೆಗೆ, ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಸಂಘಟಿಸಿ ಮರು-ಸೇರ್ಪಡೆಗಾಗಿ ಕಾನೂನಾತ್ಮಕ ಹೋರಾಟಗಳನ್ನು ರೂಪಿಸಲು ಸಮಿತಿ ನಿರ್ಧರಿಸಿದೆ. ಅಲ್ಲದೆ, ಅರ್ಹ ಮತದಾರರ ರಕ್ಷಣೆಗಾಗಿ ತಕ್ಷಣವೇ ‘ವಿಶೇಷ ಗ್ರಾಮ ಅಥವಾ ವಾರ್ಡ್ ಸಭೆ’ಗಳನ್ನು ಕರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ” ಎಂದರು.

“ಈ ಎಲ್ಲ ಅಂಶಗಳ ಯಶಸ್ವಿ ಅನುಷ್ಠಾನಕ್ಕಾಗಿ ಬೂತ್ ಮಟ್ಟದವರೆಗೂ ಸರಣಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಈ ಮಹತ್ವದ ‘ಮತ ಕಾವಲು ಅಭಿಯಾನ’ದಲ್ಲಿ ತಾಲ್ಲೂಕು ಎಲ್ಲ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕ-ಯುವತಿಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ತಾಲ್ಲೂಕು ನಾಗರಿಕ ಮತಕಾವಲು ಸಮಿತಿ ಅಧ್ಯಕ್ಷರಾಗಿ ಎ.ವಿ.ಪೂಜಪ್ಪ, ಉಪಾಧ್ಯಕ್ಷ ಬಿ.ವಿ.ವೆಂಕಟರವಣ, ಕಾರ್ಯದರ್ಶಿಯಾಗಿ ಬಿ.ನರಸಿಂಹಪ್ಪ, ಜಂಟಿ ಕಾರ್ಯದರ್ಶಿಯಾಗಿ ಹೊಸಹುಡ್ಯ ನಾರಾಯಣ ಸ್ವಾಮಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರಕಾಶ್,ಜಿ.ಎನ್.ಅಂಜನಪ್ಪ,ರಾಜಗೋಪಾಲ್, ಘಂಟಂವಾರಿಪಲ್ಲಿ ನಾರಾಯಣ ಸ್ವಾಮಿ,ಸೈಯದ್ ಬಾಷಾ, ಇಮಾಮ್ ಸಾಬ್,ತನ್ವಿರ್ ಅಹಮದ್, ಇವರನ್ನು ಜಿಲ್ಲಾ ನಾಗರಿಕ ಮತಕಾವಲು ಸಮಿತಿ ತಮ್ಮ ಕಾರ್ಯವ್ಯಾಪ್ತಿ ಯಲ್ಲಿ ಯಾವುದೇ ಅರ್ಹ ಮತದಾರರನ್ನು ತಮ್ಮ ಮೂಲಭೂತ ಸಂವಿಧಾನಿಕ ಮತದಾನ ಮೂಲಭೂತ ಹಕ್ಕಿನಿಂದ ವಂಚಿತರಾಗದೆ ಜವಾಬ್ದಾರಿಯನ್ನು ವಹಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಈ ಮೂಲಕ ಆದೇಶಿಸಲಾಗಿದೆ ಎಂದು ಹೇಳಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...