ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ. ಇದು ಸ್ವಸ್ಥ ಸಮಾಜದ ಉಸಿರು. ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಾಂಧವ್ಯವನ್ನು ಸರ್ವರಿಗೂ ಸಮಾನವಾಗಿ ಲಭ್ಯವಾಗುವಂತೆ ಮಾಡಿದ್ದ ಮಹತ್ವದ ಕಲ್ಪನೆ. ಪ್ರಜೆಗಳೇ ಪ್ರಭುಗಳು ಎಂಬುವುದೇ ಪ್ರಜಾಪ್ರಭುತ್ವದ ಮೂಲ ಧ್ಯೇಯ ಎಂದು ತಹಸೀಲ್ದಾರ್ ಮನೀಷಾ ಎನ್ ಪತ್ರಿ ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್,ಪುರಸಭೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ನಾವೆಲ್ಲರೂ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ದೇಶದಲ್ಲಿ ಅನೇಕ ಜಾತಿ ಧರ್ಮಗಳಿದ್ದು, ಅವರುಗಳು ಅಲ್ಲದೇ ಇಡೀ ಜಗತ್ತೇ ನಮ್ಮ ಸಂವಿಧಾನವನ್ನು ಒಪ್ಪಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಸಂವಿಧಾನದ ರೀತಿ ನಾವೆಲ್ಲ ನಡೆದುಕೊಳ್ಳುತ್ತಿದ್ದೇವೆಯೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. 149 ಕೋಟಿ ಜನರಿಗೆ ನಾವು ಸಾಮಾಜಿಕ ನ್ಯಾಯ ನೀಡಬೇಕಾಗಿದೆ. ದೇಶವನ್ನು ಆಳುವ ಸರ್ಕಾರ ಪ್ರತಿಯೊಬ್ಬ ನಾಗರಿಕನಿಗೂ ಸಮನಾದ ಹಕ್ಕನ್ನು ನೀಡುವ ಕೆಲಸ ಮಾಡಬೇಕು. ಈ ಕುರಿತು ಸಾರ್ವಜನಿಕರೂ ಜಾಗೃತರಾಗಬೇಕು. ಸಂವಿಧಾನದಲ್ಲಿ ಹೇಳಿದಂತೆ ಜಾತ್ಯತೀತ ದೇಶವನ್ನಾಗಿ ಮಾಡುವ ಪ್ರತಿಜ್ಞೆ ಮಾಡಬೇಕು” ಎಂದು ಕರೆ ನೀಡಿದರು.
ಭಾರತದಲ್ಲಿ ಪ್ರಜಾಪ್ರಭುತ್ವದ ಸ್ಥಾಪನೆ ಮತ್ತು ಅದರ ಬಲವರ್ಧನೆಗಾಗಿ ಹೋರಾಡಿ, ಸರ್ವಸ್ವವನ್ನು ಅರ್ಪಿಸಿದ ಹೋರಾಟಗಾರರು ಹಾಗೂ ವಿಶ್ವ ಮಟ್ಟದಲ್ಲಿ ಧ್ವನಿ ಎತ್ತಿದ ಎಲ್ಲಾ ಮಹಾತ್ಮರನ್ನು ಸ್ಮರಿಸುತ್ತ, ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯೋಣ. ಸರ್ವರಿಗೂ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳನ್ನು ತಿಳಿಸಿದರು.
ಬಳಿಕ ಸಭಿಕರೊಂದಿಗೆ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು. ಮಿಟ್ಟೇಮರಿ ಸಿ.ಆರ್.ಪಿ ಹಾಗೂ ಪ್ರಧಾನ ಭಾಷಣಕಾರಾದ ಶಿವಪ್ಪ ಮಾತನಾಡಿ ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಸಹಬಾಳ್ವೆ ಹಾಗೂ ಪ್ರತಿಯೊಬ್ಬ ನಾಗರಿಕನ ಗೌರವವನ್ನು ಕಾಪಾಡುವುದು ಪ್ರಜಾಪ್ರಭುತ್ವದ ನಿಜವಾದ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿರುವಂತೆಯೇ ಸಮಾಜ ಮತ್ತು ದೇಶದ ಮೇಲಿನ ಕರ್ತವ್ಯಗಳನ್ನೂ ನೆನಪಿಸುತ್ತದೆ. ಹಕ್ಕು ಮತ್ತು ಕರ್ತವ್ಯಗಳ ಸಮತೋಲನದಿಂದಲೇ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಂದಿನ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಅದರಲ್ಲೂ ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆ ಹೆಚ್ಚಾಗಬೇಕು ಎಂದು ಹೇಳಿದ್ದಾರೆ.
ಇಂದಿನ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಅದರಲ್ಲೂ ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆ ಹೆಚ್ಚಾಗಬೇಕು ಎಂದು ಹೇಳಿದ್ದಾರೆ
ವಿಶ್ವ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಜನರ ಧ್ವನಿಗೆ ಮತ್ತಷ್ಟು ಬಲ ನೀಡುವ ಸಂಕಲ್ಪ ಮಾಡಬೇಕು. ಪ್ರಜಾಪ್ರಭುತ್ವ ಉಳಿದರೆ ಜನರ ಧ್ವನಿ ಉಳಿಯುತ್ತದೆ; ಜನರ ಧ್ವನಿ ಬಲವಾದರೆ ದೇಶದ ಪ್ರಗತಿಯೂ ಬಲವಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆಶಯಗಳು ಮತ್ತು ಸಮಾನತೆಯ ತತ್ವಗಳನ್ನು ಗೌರವಿಸುವ ಅಗತ್ಯವಿದೆ ಎಂದು ಶಿವಪ್ಪ ಒತ್ತಿ ಹೇಳಿದರು.
ಇದನ್ನು ಓದಿದ್ದೀರಾ..?ಕೋಲಾರ | ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಸಕ ಕೊತ್ತೂರು ಮಂಜುನಾಥ್ ನೆರವು
ಈ ಸಂದರ್ಭದಲ್ಲಿ ಇಓ ನಾಗಮಣಿ, ಬಿಇಓ ವೆಂಕಟೇಶಪ್ಪ, ಸಮಾಜ ಕಲ್ಯಾಣಾಧಿಕಾರಿ ಮಂಜುಳಾ ಜಿ.ಸಿ. , ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಪಕರಾದ ನಾಗರಾಜು, ಕೃಷಿ ಇಲಾಖೆಯ ಶ್ರೀನಿವಾಸ್, ರೇಷ್ಮೆ ಇಲಾಖೆಯ ಕಾವ್ಯ, ತೋಟಗಾರಿಕೆ ಇಲಾಖೆಯ ಶಿವಶಂಕರ್, ಪಶುವೈದ್ಯಾಧಿಕಾರಿ ಕೃಷ್ಣಮೂರ್ತಿ, ಶಿಶು ಅಭಿವೃದ್ಧಿ ಇಲಾಖೆಯ ಅನುಸೂಭಾಯಿ, ಹಾಗು ವಕೀಲರಾದ ನಾಗಭೂಷಣ, ಮುಖಂಡರಾದ ವಾಲ್ಮೀಕಿ ಅಶ್ವತ್ಥಪ್ಪ, ಕಿರಣ್ ಕುಮಾರ್, ಎಂ.ವಿ. ವಿನಯ್ ಕುಮಾರ್ ಸೇರಿದಂತೆ ಹಲವಾರು ಅಧಿಕಾರಿಗಳು ಹಾಜರಿದ್ದರು.




