ಬಾಗೇಪಲ್ಲಿ : ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು:-ತಹಶಿಲ್ದಾರ್ ಮನೀಷಾ ಎನ್ ಪತ್ರಿ

Date:

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶೋಷಿತರು, ಹಿಂದುಳಿದ, ಬಡವರು ಹಾಗೂ ಅವಕಾಶ ವಂಚಿತರ ಧ್ವನಿಯಾಗಿ ಸಾಮಾಜಿಕ ಪರಿವರ್ತನೆಗೆ ಅವರು ನೀಡಿದ ಕೊಡುಗೆ ಅಪಾರ ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು.

- Advertisement -

ಪಟ್ಟಣದ ದೇವರಾಜ್ ಅರಸ್ ಭವನದಲ್ಲಿ 111ನೇ ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ಜಾತಿ, ವರ್ಗ, ಆರ್ಥಿಕ ಸ್ಥಿತಿ ಅಥವಾ ಸಾಮಾಜಿಕ ಹಿನ್ನೆಲೆಯ ಕಾರಣದಿಂದ ಯಾರೊಬ್ಬರೂ ಅವಕಾಶಗಳಿಂದ ವಂಚಿತರಾಗದ ವ್ಯವಸ್ಥೆ ರೂಪುಗೊಳ್ಳಬೇಕು. ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ದುಡಿಯುವ ಕೈಗಳಿಗೆ ಗೌರವ ಸಿಗಬೇಕು. ಬಡವರ ಬದುಕಿಗೆ ಭದ್ರತೆ ದೊರೆಯಬೇಕು. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಲಭ್ಯವಾಗಬೇಕು ಎಂಬುದು ಅರಸು ಅವರ ಬದುಕಿನ ನಿಜವಾದ ಸಂದೇಶವೂ ಆಗಿತ್ತು.

ಅರಸು ಅವರ ದೃಷ್ಟಿಯಲ್ಲಿ ಸಾಮಾಜಿಕ ನ್ಯಾಯವೆಂದರೆ ಕೇವಲ ಮೀಸಲಾತಿಯ ಪ್ರಶ್ನೆಮಾತ್ರ ಆಗಿರಲಿಲ್ಲ. ಭೂಮಿ, ಶಿಕ್ಷಣ, ಉದ್ಯೋಗ, ಆರ್ಥಿಕ ಭದ್ರತೆ, ಮಾನವ ಘನತೆ ಮತ್ತು ಸಾಮಾಜಿಕ ಹಾಗೂ ರಾಜಕೀಯ ಪ್ರಾತಿನಿಧ್ಯ- ಇವೆಲ್ಲವನ್ನೂ ಒಳಗೊಂಡ ಸಮಗ್ರ ಪರಿಕಲ್ಪನೆಯಾಗಿತ್ತು. ಆದ್ದರಿಂದಲೇ ಅವರ ಆಡಳಿತದಲ್ಲಿ ದುರ್ಬಲರು, ಹಿಂದುಳಿದ ವರ್ಗದವರು ಮತ್ತು ಅವಕಾಶವಂಚಿತರು ಕೇಂದ್ರ ಸ್ಥಾನ ಪಡೆದಿದ್ದರು. ವೃದ್ಧಾಪ್ಯ ಮತ್ತು ವಿಧವಾ ವೇತನ, ಅಂಗವಿಕಲರಿಗೆ ನೆರವು, ಜೀತಪದ್ಧತಿನಿರ್ಮೂಲನೆ, ಕೃಷಿ ಕಾರ್ಮಿಕರಿಗೆ ಕನಿಷ್ಠ ವೇತನ, ವಿದ್ಯಾರ್ಥಿನಿಲಯಗಳು, ಶಿಷ್ಯವೇತನ ಹಾಗೂ ನಿರುದ್ಯೋಗಿ ಪದವೀಧರರಿಗೆ ಸ್ಟೈಫಂಡ್ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳು ಅವರ ಆಡಳಿತದ ಸಾಮಾಜಿಕ ದೃಷ್ಟಿ ಕೋನವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.

ತಾಲ್ಲೂಕು ಕಲ್ಯಾಣಾಧಿಕಾರಿಗಳು ಆರ್.ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಡಿ. ದೇವರಾಜ ಅರಸು ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಕ್ಕಿಂತ, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಗುರುತಿಸುವುದು ಹೆಚ್ಚು ಸೂಕ್ತ. ಅಧಿಕಾರದಲ್ಲಿದ್ದ ಅವಧಿಯಲ್ಲಿ ಅವರು ಕೈಗೊಂಡ ಹಲವು ನಿರ್ಧಾರಗಳು ಸಮಾಜದಲ್ಲಿದ್ದ ಅಸಮಾನ ಶಕ್ತಿಸಂಬಂಧಗಳನ್ನು ಬದಲಿಸುವ ಉದ್ದೇಶ ಹೊಂದಿದ್ದವು. ಭೂಮಿಯ ಹಕ್ಕು, ಶಿಕ್ಷಣದ ಅವಕಾಶ, ಸಾಮಾಜಿಕ ಪ್ರಾತಿನಿಧ್ಯ, ಬಡವರ ಕಲ್ಯಾಣ ಹಾಗೂ ಹಿಂದುಳಿದ ಸಮುದಾಯಗಳ ಸಬಲೀಕರಣ. ಇವೆಲ್ಲವೂ ಅವರ ವಿಶಾಲವಾದ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ವಿವಿಧ ಮುಖಗಳಾಗಿದ್ದವು. ನನ್ನ ಬದುಕಿನ ಆದರ್ಶ ವ್ಯಕ್ತಿಗಳು ದೇವರಾಜ್ ಅರಸ್ ಹಾಗೂ ಡಾ.ಹೆಚ್.ನರಸಿಂಹಯ್ಯ ಎಂದು ಹೇಳಿದರು.

ಪ್ರಮುಖ ಭಾಷಣಕಾರ ಬಾಬಾಜಾನ್ ಮಾತನಾಡಿ ದೇವರಾಜ್ ಅರಸ್ ಕಲ್ಲಹಳ್ಳಿಯಲ್ಲಿ ಅರಳಿದ ಹೂವಾಗಿ ಕರುನಾಡಿಗೆ ಬೆಳಕಾಗಿ, ದಲಿತ ದಮನಿತ ವರ್ಗಗಳಿಗೆ ಆಶಾಕಿರಣವಾಗಿ, ಹಿಂದುಳಿದವರ ಬದುಕಿಗೆ ಹೊಸ ದಾರಿಯಾದವರು ಅರಸು. ರೈತರ ಪಾಲಿಗೆ ಹಕ್ಕಿನ ಧ್ವನಿಯಾಗಿ, ಅಭಿವೃದ್ಧಿಯ ಹೆಜ್ಜೆ ಗುರುತು ಮೂಡಿಸಿದವರು ಅರಸು ಎಂಬುದಕ್ಕೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ದಾಖಲಾಗಿರುವ ಅವರ ಕೊಡುಗೆಯೇ ಸಾಕ್ಷಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅರಸು ಅವರ ದೃಷ್ಟಿಯಲ್ಲಿ ಶಿಕ್ಷಣವು ಕೇವಲ ಜ್ಞಾನಾರ್ಜನೆಯ ಸಾಧನವಲ್ಲ. ಅದು ಸಾಮಾಜಿಕ ಅಸಮಾನತೆಯ ಗೋಡೆಗಳನ್ನು ಒಡೆಯುವ ಪ್ರಬಲ ಶಕ್ತಿಯಾಗಿತ್ತು. ಬಡವರು ಹಾಗೂ ಹಿಂದುಳಿದ ಸಮುದಾಯಗಳ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿನಿಲಯಗಳು, ವಿದ್ಯಾರ್ಥಿವೇತನಗಳು ಹಾಗೂ ವಿವಿಧ ಶೈಕ್ಷಣಿಕ ನೆರವುಗಳಿಗೆ ಆದ್ಯತೆ ನೀಡಲಾಯಿತು ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಆಗಸ್ಟ್ 22ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಿಂದ ಚಾಲನೆ

ಈ ಸಂದರ್ಭದಲ್ಲಿ ಬಿ.ಇ.ಓ. ಎನ್.ವೆಂಕಟೇಶಪ್ಪ ರಾಷ್ಟ್ರೀಯ ಸದ್ಭಾವನಾ ದಿನದ ಅಂಗವಾಗಿ, ಸದ್ಭಾವನಾ ಪ್ರತಿಜ್ಞೆಯನ್ನು ವಿಧ್ಯಾರ್ಥಿಗಳಿಗೆ ಬೋಧಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್,ಪ್ರಗತಿಪರ ರೈತ ರಾಮಕೃಷ್ಣಪ್ಪ,ಸಾಕ್ಷರತೆ ಶಿವಪ್ಪ, ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...