2026-27ನೇ ಸಾಲಿನ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಯಂಗ್ ಇಂಡಿಯಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
2026ರ ಅಕ್ಟೋಬರ್ 11ರಂದು ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಮಾಡೆಲ್ ನವೋದಯ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಯಂಗ್ ಇಂಡಿಯಾ ಶಾಲೆಯ ಅಂಡರ್-17 ವಿಭಾಗದಲ್ಲಿ ನಟರಾಜ್ ಎನ್. ಅವರ ಪುತ್ರ ಕಾರ್ತಿಕೇಯ ಡಿ.ಎನ್. ಹಾಗೂ ಅಂಡರ್-14 ವಿಭಾಗದಲ್ಲಿ ಡಾ. ವೆಂಕಟರಾಮ ರೆಡ್ಡಿ ಸಿ.ಎಸ್. ಅವರ ಪುತ್ರ ಆರ್.ವಿ. ವೇದಾಂಕ್ ರೆಡ್ಡಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯು ಕರ್ನಾಟಕದ ಕೊಪ್ಪಳದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ ಡಿ.ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸಿ, ಇಬ್ಬರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಮುಂದಿನ ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಯ ಸಿಇಒ ಅರ್ಜುನ್, ಮುಖ್ಯ ಶಿಕ್ಷಕಿ ಶ್ರೀಮತಿ ರುಕ್ಮಿಣಿ, ದೈಹಿಕ ಶಿಕ್ಷಣ ಶಿಕ್ಷಕರಾದ ಅಮರನಾಥ್ ಕೆ. ಮತ್ತು ರಾಮಾಂಜಿನಪ್ಪ ಟಿ.ವೆಂಕಟರಾಮ ರೆಡ್ಡಿ ಗ್ರಂಥಪಾಲಕರು ಹಾಗೂ ತರಬೇತುದಾರರಾದ ಜಯರಾಮ ರೆಡ್ಡಿ ಮತ್ತು ಪಿ.ಎಂ.ಶ್ರೀ ಶಾಲೆ, ಬಾಗೇಪಲ್ಲಿಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಭಾರ್ಗವಿ ಕೆ.ಜೆ. ಉಪಸ್ಥಿತರಿದ್ದು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಇಬ್ಬರೂ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿಯೂ ಯಶಸ್ಸು ಸಾಧಿಸಿ ಶಾಲೆ ಹಾಗೂ ಜಿಲ್ಲೆಗೆ ಗೌರವ ತರಲಿ ಎಂದು ಶುಭ ಹಾರೈಸಿದ್ದಾರೆ.




