ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

Date:

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು ಘೋಷಣೆ ಮಾಡುವ ಮೂಲಕ ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಕರ್ನಾಟಕವ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಿನ್ನರಾಯಪ್ಪ ಟೀಕಿಸಿದ್ದಾರೆ

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಒಂದು ಎಕರೆ ಜಮೀನಿಗೆ ಬಿತ್ತನೆ ಬೀಜಕ್ಕೆ ₹10 ಸಾವಿರ ಖರ್ಚು ಮಾಡುವ ರೈತರಿಗೆ ಬರ ಪರಿಹಾರದ ರೂಪದಲ್ಲಿ ಕೇವಲ ₹2500 ಆರ್ಥಿಕ ನೆರವು ನೀಡುವ ಘೋಷಣೆ ಮಾಡಿರುವುದು ರೈತರಿಗೆ ಬಿಡಿಗಾಸು ನೀಡಿದಂತೆ. ಇದು ರೈತರಿಗೆ ಸಿಗುವ ಪರಿಹಾರವಲ್ಲ. ಆತನ ಹೆಣದ ಮೇಲೆ ಹಾಕುತ್ತಿರುವ ಚಿಲ್ಲರೆ ಕಾಸು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆದಿದ್ದು ಸಂತೋಷಕರ. ಆದರೆ, ಬೆಟ್ಟ ಅಗೆದು ಇಲಿ ಹಿಡಿದಂತೆ ರೈತರಿಗೆ ಕೇವಲ 2500 ರೂ. ಬರ ಪರಿಹಾರ ಘೋಷಣೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಪ್ರತಿ ಎಕರೆಗೆ ₹10 ಸಾವಿರ ಬರ ಪರಿಹಾರ ನೀಡಬೇಕು. ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿ ದಿನ ನಿರಂತರ 10 ತಾಸು ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿ, ಬರ ಪರಿಹಾರ 1೦ ಸಾವಿರ ರೂ. ಘೋಷಣೆ ಮಾಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ನಿಜಕ್ಕೂ ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದರೆ ಕೂಡಲೇ ರೈತರ ಸಾಲಮನ್ನಾ ಮಾಡಲು ಮುಂದಾಗಬೇಕು. ಅದನ್ನು ಬಿಟ್ಟು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಬಾರದು. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರೈತರ ನೆರವಿಗೆ ಬಾರದೆ ಈ ರೀತಿ ಮೀನಮೇಷ ಎಣಿಸುತ್ತಿರುವುದು ಸೂಕ್ತವಲ್ಲ. ಸರ್ಕಾರ ಮೊದಲು ಇಂತಹ ಘೋಷಣೆ ಮಾಡುವುವದನ್ನು ಬಿಟ್ಟು ರೈತರ ಸಾಲಮನ್ನಾ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...