ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

Date:

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ ಪಕ್ಕದಲ್ಲಿ ಆಯೋಜಿಸಲಾಗಿದೆ ಹೆಚ್ಚಿನ ವಿಧ್ಯಾರ್ಥಿಗಳು ಯುವಜನರು ಮಹಿಳೆಯರು,ದಲಿತರು ಅಲ್ಪಸಂಖ್ಯಾತರು, ಬುದ್ಧಿಜೀವಿಗಳು, ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಡಿವೈಎಫ್‍ಐ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಜಶೇಖರ್ ತಿಳಿಸಿದರು.

ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

- Advertisement -

ಬಾಗೇಪಲ್ಲಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಬಯಲುಸೀಮೆಯ ಜನರು ಎದುರಿಸುತ್ತಿರುವ ಕೃಷಿ ವಿನಾಶ, ನಿರುದ್ಯೋಗ, ನೀರಿನ ಸಮಸ್ಯೆ, ಆರೋಗ್ಯ ಮತ್ತು ಶಿಕ್ಷಣದ ಸಮಸ್ಯೆ, ರೈತರ ಆತ್ಮಹತ್ಯೆ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು
ತಿಳಿಸಿದರು.

ವಿದ್ಯಾರ್ಥಿ-ಯುವಜನರು ಮಾದಕ ವ್ಯಸನಗಳಿಂದ ವಿಮುಕ್ತರಾಗಬೇಕು, ಉದ್ಯೋಗ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಆರಂಭಿಸಬೇಕು. ಸಾರ್ವಜನಿಕ ಆಸ್ಪತ್ರೆಗಳನ್ನು ಬಲಪಡಿಸಬೇಕು. ಜಿಲ್ಲೆಗೆ ಕೃಷ್ಣಾ ನದಿ ನೀರಾವರಿ ಯೋಜನೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಡಿವೈಎಫ್‍ಐ ಜಿಲ್ಲಾ ಘಟಕದ ಕಾರ್ಯದರ್ಶಿ ವೈ.ಎನ್.ಹರೀಶ್, ‘ಡಿವೈಎಫ್‍ಐ ರಾಜ್ಯ ಮಟ್ಟದ 13ನೇ ಯುವಜನ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಯುವಜನರನ್ನು ಸಂಘಟಿಸಲು ಗ್ರಾಮ ಶಾಖೆಗಳನ್ನು ಮಾಡಿ, ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ. ಸೆ.26 ರಂದು ತಾಲ್ಲೂಕು ಪಂಚಾಯಿತಿ ಪಕ್ಕದಲ್ಲಿ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ನಟ ಪ್ರಕಾಶ್‍ ರಾಜ್, ಕಿಶೋರ್, ರಾಜ್ಯ ಸಭಾ ಸದಸ್ಯ ರಹೀಮ್, ಡಿವೈಎಫ್‍ಐ ರಾಜ್ಯ ಸಮಿತಿ ಅಧ್ಯಕ್ಷೆ ಲಿಖಿತ್ ವಸ್ತ್ರದ್ ಸೇರಿ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಮಾಲೂರು | ನೈಸ್ ಟೋಲ್ ಅಕ್ರಮ – 7 ದಿನದಲ್ಲಿ ಸ್ಫೋಟಕ ಸತ್ಯ ಬಹಿರಂಗವಾಗುತ್ತೆ

ಈ ಸಂದರ್ಭದಲ್ಲಿ ಗಂಗಾಧರ ಉಪಾಧ್ಯಕ್ಷ, ಸುರೇಶ್ ಮದಕೇರಿ ಖಜಾಂಚಿ, ಕೆ.ಎಸ್.ವೇಣು,ನರಸಿಂಹ ಮೂರ್ತಿ, ಹಜಮತ್, ಡಿವೈಎಫ್‍ಐ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಮತ್ತಿತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹೂಡೆಯಲ್ಲಿ ನವಜಾತ ಶಿಶು ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ SDPI ಮನವಿ

ಉಡುಪಿ ನಗರದ ಹೂಡೆ ಪ್ರದೇಶದಲ್ಲಿ ಕಳೆದ ಸೆಪ್ಟೆಂಬರ್ 7ರಂದು ನಡೆದ ನವಜಾತ...

ವಿಜಯಪುರ | ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ಮತ್ತು ಅಕ್ಟೋಬರ್ 1ರಂದು...

ವಿಜಯಪುರ | ಬರ ಘೋಷಣೆ ಮಾಡದ್ದಕ್ಕೆ ಅಸಮಾಧಾನ: ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...