ಬಾಗೇಪಲ್ಲಿ | ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Date:

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ ಚುನಾವಣೆ ಮೂಲಕ ಉತ್ತರ ನೀಡಿದ್ದಾರೆ. ಈ ಗೆಲುವು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಧಿಕಾರ ಬರಲಿದೆ ಎಂದು ಬಿಜೆಪಿ ಪಕ್ಷದ ಮಂಡಲಾದ್ಯಾಕ್ಷ ಆರ್.ಪ್ರತಾಪ್ ಹೇಳಿದರು.

- Advertisement -

ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗೂಳೂರು ವೃತ್ತ,ಹಳೆ ಎಸ್.ಬಿ.ಐ ವೃತ್ತ ಹಾಗೂ ಬಸ್ ನಿಲ್ದಾಣದಲ್ಲಿ
ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ತದನಂತರ ಆರ್.ಪ್ರತಾಪ್ ಮಾತನಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹಾಗೂ ಗೆಲುವು ಸಾಧಿಸಿದ ನಾಲ್ವರು ಎನ್‌ಡಿಎ ಅಭ್ಯರ್ಥಿಗಳಿಗೂ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಗ್ಯಾರಂಟಿಗಳ ಭ್ರಮೆಯಲ್ಲಿ, ಅಧಿಕಾರದ ಅಮಲಿನಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸಿದೆ. ರೈತರಿಗೆ ಪರಿಹಾರ ಕೊಡಲು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಲು ಸಾಧ್ಯವಾಗಿಲ್ಲ. ಮಹಿಳಾ, ರೈತ ಹಾಗೂ ಬಡವರ ವಿರೋಧಿಯಾಗಿದೆ. ಈ ಸರ್ಕಾರದ ಬಣ್ಣವನ್ನು ಬಯಲು‌ ಮಾಡಿದ್ದೇವೆ. ಕಾರ್ಯಕರ್ತರಲ್ಲಿ ಹುಮ್ಮಸ್ಸು ಬಂದಿದೆ. ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಕೇವಲ ₹ 2,500 ಪರಿಹಾರ ಘೋಷಣೆ ಮಾಡಿದ್ದಾರೆ. ಅದನ್ನೂ ಕೊಟ್ಟಿಲ್ಲ. ಮುಖ್ಯಮಂತ್ರಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ, ದುಡ್ಡಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌‍ ಸರ್ಕಾರ ರಾಜ್ಯದ ಅಭಿವೃದ್ಧಿ ಮರೆತು ಕೇವಲ ಭ್ರಷ್ಟಾಚಾರ ಮತ್ತು ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿದೆ. ಸ್ಟಿಂಗ್‌ ಆಪರೇಶನ್‌ನಂತಹ ನಾಚಿಕೆಗೇಡಿನ ಕೃತ್ಯಕ್ಕೆ ಕೈಹಾಕಿದೆ. ಪ್ರಜ್ಞಾವಂತ ಮತದಾರರಾಗಿರುವ ರಾಜ್ಯದ ಶಿಕ್ಷಕರು ಹಾಗೂ ಪದವೀಧರರು ಇದೆಲ್ಲದರ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಈ ಚುನಾವಣಾ ಫಲಿತಾಂಶವೇ ಇದಕ್ಕೆ ನಿದರ್ಶನ ಎಂದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ವೆಂಕಟೇಶ್,ಕೆ.ಟಿ.ವೀರಾಂಜನೇಯಲು,ಅ.ನ.ಮೂರ್ತಿ, ಶ್ರೀನಿವಾಸ ರೆಡ್ಡಿ, ರಮೇಶ್, ಚಿನ್ನಪೂಜಪ್ಪ,ನಿರ್ಮೂಲಮ್ಮ,ರೂಪಾ,ಮಂಜುಳಾ, ನಂದಿನಿ,ಕೃಷ್ಣವೇಣಿ,ದೀಪ್ತೀ,ಹಾಗೂ ಬಿಜೆಪಿ ಹಾಗೂ ಜೆ.ಡಿ.ಎಸ್. ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಚಿಂತಾಮಣಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಕ್ಕೆ ತಹಶೀಲ್ದಾರ್, ತಾ.ಪಂ ಇಒ ದಿಢೀರ್ ಭೇಟಿ – ಪರಿಶೀಲನೆ

ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ...