ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂಭಾಗದಲ್ಲಿ ದಿನನಿತ್ಯ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಬ್ಯಾಂಕ್‌ಗೆ ಬರುವ ಗ್ರಾಹಕರು ತಮ್ಮ ದ್ವಿಚಕ್ರ ವಾಹನಗಳನ್ನು ನಿಗದಿತ ಸ್ಥಳದಲ್ಲಿ ಸರಿಯಾಗಿ ಪಾರ್ಕ್ ಮಾಡದೆ ರಸ್ತೆಗೆ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.
ಪ್ರತಿದಿನ ನೂರಾರು ಗ್ರಾಹಕರು ಹಣಕಾಸಿನ ವ್ಯವಹಾರ ಹಾಗೂ ವಿವಿಧ ಕೆಲಸಗಳಿಗಾಗಿ ಈ ಎರಡೂ ಪ್ರಮುಖ ಬ್ಯಾಂಕ್‌ಗಳಿಗೆ ಆಗಮಿಸುತ್ತಾರೆ. ಅದೇ ರೀತಿಯಲ್ಲಿ ಇನ್ನೊಂದು ಭಾಗದಲ್ಲಿ ಜೆ.ಎಂ.ಎಫ್.ಸಿ ಕೋರ್ಟ್ ಇದ್ದು ದಿನ ನಿತ್ಯ ನ್ಯಾಯಕ್ಕೆ ಆಗಮಿಸುವ ಸಾರ್ವಜನಿಕರು ಆಗಮಿಸುತ್ತಾರೆ, ಆದರೆ ಬ್ಯಾಂಕ್‌ಗಳ ಆವರಣದಲ್ಲಿ ಅಥವಾ ಸುತ್ತಮುತ್ತ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಹಕರು ರಸ್ತೆಯಲ್ಲೇ ವಾಹನಗಳನ್ನು ಸಾಲಾಗಿ ನಿಲ್ಲಿಸದೇ ಆಡ್ಡಾಡಿಡ್ಡಿಯಾಗಿ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ರಸ್ತೆ ಕಿರಿದಾಗಿ ಪಾದಚಾರಿಗಳು ನಡೆದಾಡಲು ಜಾಗವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಮಾರ್ಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು,ಮಹಿಳೆಯರು, ಮಕ್ಕಳು ಹಾಗೂ ವ್ಯಾಪಾರಿಗಳು ನಿರಂತರವಾಗಿ ಸಂಚರಿಸುತ್ತಾರೆ. ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಅನೇಕ ಬಾರಿ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿದ್ದು, ವಾಹನ ಸವಾರರ ನಡುವೆ ವಾಗ್ವಾದಗಳು ಸಹ ಸಂಭವಿಸುತ್ತಿವೆ. ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಹಾಗೂ ಇತರ ತುರ್ತು ವಾಹನಗಳು ಈ ರಸ್ತೆಯಲ್ಲಿ ಸುಗಮವಾಗಿ ಸಾಗಲು ಹರಸಾಹಸ ಪಡಬೇಕಾಗಿದೆ.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಬಸ್ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್ ಸಮಯಕ್ಕೆ ಪ್ರತ್ಯೇಕ ಬಸ್ ಸಂಚರಿಸಲಿ
ಸ್ಥಳೀಯ ಸಾರ್ವಜನಿಕರ ಈ ಸಮಸ್ಯೆಗೆ ಕೊನೆ ಹಾಡಲು ಸಂಬಂಧಪಟ್ಟ ಬ್ಯಾಂಕ್ ಆಡಳಿತ ಮಂಡಳಿ, ಪುರಸಭೆ ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ತಕ್ಷಣ ಜಂಟಿ ಪರಿಶೀಲನೆ ನಡೆಸಬೇಕು. ಬ್ಯಾಂಕ್ ಮುಂಭಾಗದಲ್ಲಿ ಸುಗಮ ಸಂಚಾರಕ್ಕಾಗಿ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಮತ್ತು ನಿಯಮ ಉಲ್ಲಂಘಿಸಿ ರಸ್ತೆಯಲ್ಲೇ ವಾಹನ ನಿಲ್ಲಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಾಗೇಪಲ್ಲಿ: ರಸ್ತೆಯಲ್ಲೇ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ – ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




