ಬಾಗೇಪಲ್ಲಿ | ಮೀಸಲಾತಿ ಕುರಿತು ದ್ವೇಷ-ನಿಂದನಾತ್ಮಕ ಹೇಳಿಕೆ; ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿಯಲ್ಲಿ ದೂರು ದಾಖಲು

Date:

ಮೀಸಲಾತಿ ವ್ಯವಸ್ಥೆ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಹಾಗೂ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಎಂ.ಜಿ.ಕಿರಣ್ ಕುಮಾರ್ ಒತ್ತಾಯಿಸಿದರು.

ದೂರುದಾರರ ಪ್ರಕಾರ, ಜುಲೈ 25ರಂದು ಪ್ರಸಾರವಾದ ಪಬ್ಲಿಕ್ ಟಿವಿಯ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ಅರುಣ್ ಬಡಿಗೇರ್ ಅವರು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಹಿಂದುಳಿದ ವರ್ಗಗಳಿಗೆ (OBC) ನೀಡಲಾಗಿರುವ ಮೀಸಲಾತಿ ವ್ಯವಸ್ಥೆಯನ್ನು ಟೀಕಿಸುವ ಸಂದರ್ಭದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.

- Advertisement -

ಪಬ್ಲಿಕ್ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿರುವ ಕಾರ್ಯಕ್ರಮದ ವಿಡಿಯೋದ 00:05:36 ರಿಂದ 00:06:23 ಅವಧಿಯಲ್ಲಿ ಅವರು ಮೀಸಲಾತಿ ಪಡೆದವರು ಕಡಿಮೆ ಅಂಕಗಳನ್ನು ಪಡೆದು ಶಿಕ್ಷಕರು, ವೈದ್ಯರು ಹಾಗೂ ಇಂಜಿನಿಯರ್‌ಗಳಾಗುವುದರಿಂದ ಗುಣಮಟ್ಟ ಕುಸಿಯುತ್ತದೆ ಎಂಬ ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗಳು ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮತ್ತು ದ್ವೇಷವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರುದಾರರು, ಮೀಸಲಾತಿ ವ್ಯವಸ್ಥೆಯು ಭಾರತದ ಸಂವಿಧಾನವು ಕಲ್ಪಿಸಿರುವ ಸಾಮಾಜಿಕ ನ್ಯಾಯದ ಒಂದು ಪ್ರಮುಖ ಸಾಧನವಾಗಿದ್ದು, ಅದರ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಅರುಣ್ ಬಡಿಗೇರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಒಂದುವೇಳೆ ಅರುಣ್ ಬಡಿಗೇರ್ ವಿರುದ್ಧ ಕಾನೂನು ಹಾಗೂ ಶಿಸ್ತಿನಕ್ರಮ ಕೈಗೊಳ್ಳದೇ ಇದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಇತರೆ ಸಂಘಟನೆಗಳು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಚಲಪತಿ,ಪರಗೋಡು ವೆಂಕಟೇಶ್, ಪೆದ್ದರೆಡ್ಡಿಪಲ್ಲಿ ಶ್ರೀರಾಮ, ನಂಜುಂಡಪ್ಪ, ನಾಗೇಶ್, ಮುರಳಿ, ಶ್ರೀನಿವಾಸ್, ನರಸಿಂಹಪ್ಪ,ಕೇಶವ, ರಾಮಾಂಜಿ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...