ಬಾಗೇಪಲ್ಲಿ | ಬಿಜೆಪಿ ಕೈಗೊಂಬೆಯಾಗಿರುವ ಜ್ಞಾನೇಶ್ ಕುಮಾರ್‌ರನ್ನ ಆಯುಕ್ತ ಸ್ಥಾನದಿಂದ ತಕ್ಷಣ ವಜಾಗೊಳಿಸಿ : ಪಿ.ಎಂ.ಮುನಿ ವೆಂಕಟಪ್ಪ

Date:

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಎಂ.ಮುನಿ ವೆಂಕಟಪ್ಪ ಆಗ್ರಹಿಸಿದರು.

ಪಟ್ಟಣದ ಸಿಪಿಐಎಂ ಪಕ್ಷದ ತಾಲ್ಲೂಕು ಸಮಿತಿ ವತಿಯಿಂದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿದರು.

- Advertisement -

ಮತದಾರರ ಪಟ್ಟಿ ಪರಿಷ್ಕರಣೆ (ಎಸ್. ಐ. ಆರ್) ನೆಪದಲ್ಲಿ ಬಿಜೆಪಿಗೆ ಅನುಕೂಲಕರವಾಗಿ ಮತದಾರರ ಪಟ್ಟಿಯನ್ನೇ ಬುಡಮೇಲಾಗಿಸಿ, ಅರ್ಹರನ್ನು ಅನರ್ಹ ಮತದಾರರನ್ನಾಗಿಸಿದ ಮುಖ್ಯ ಚುನಾವಾಧಿಕಾರಿ ಗ್ಯಾನೇಶ್ ಕುಮಾರ್ ರನ್ನು ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಯುತ್ತದೆ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ದೇಶದಲ್ಲಿ ವಾಮ ಮಾರ್ಗದ ಮೂಲಕ ಅಧಿಕಾರ ಕಸಿಯುತ್ತಿರುವ ಬಿಜೆಪಿ ಚುನಾವಣಾ ಆಯೋಗವನ್ನೇ ತಮ್ಮ ಪಕ್ಷದ ಸುಪರ್ದಿಯಲ್ಲಿರಿಸಿಕೊಂಡು ಅಲ್ಪ ಸಂಖ್ಯಾತರ ಸಹಿತ ಪ್ರಜಾಪ್ರಭುತ್ವ ವಿಶ್ವಾಸಿಗಳನ್ನು ಮತದಾರರ ಪಟ್ಟಿಯಿಂದಲೇ ಹೊರದಬ್ಬುತ್ತಿದೆ. ಈ ಅನ್ಯಾಯದ ವಿರುದ್ಧ ದೇಶ ವ್ಯಾಪಕ ಆಂದೋಲನಕ್ಕೆ ಸಿಪಿಐಎಂ ಪಕ್ಷ ಬೆಂಬಲಿಸುತ್ತಿದೆ ಎಂದರು.

ಡಿ.ಟಿ.ಮುನಿಸ್ವಾಮಿ ಮಾತನಾಡಿ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ಕಾಪಾಡುವ ನಿಟ್ಟಿನಲ್ಲಿ ದೇಶದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಿ, ಸಂಪೂರ್ಣವಾಗಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾಗಿದೆ ಎನ್ನಲಾದವರ ಹೆಸರುಗಳನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪಾರದರ್ಶಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ಎಂ.ಎನ್.ರಘುರಾಮ ರೆಡ್ಡಿ,ಚನ್ನರಾಯಪ್ಪ, ಜಿ.ಕೃಷ್ಣಪ್ಪ, ನಾಗರಾಜು,ಇಮ್ರಾನ್, ರಾಮಲಿಂಗಪ್ಪ, ಮುನಿಯಪ್ಪ,ಮುಸ್ತಫಾ, ವಾಲ್ಮೀಕಿ ಅಶ್ವತ್ಥಪ್ಪ ,ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...

ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ

ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ...

SIR: ಮತದಾನದ ಹಕ್ಕು ಕಸಿಯುವ ಯಾವುದೇ ವ್ಯವಸ್ಥೆ ಒಪ್ಪಲಾಗದು-ಪ್ರಕಾಶ್ ರಾಜ್

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ...

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...