ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ ಚೇತನ ಸಭೆ’ಯು ಅಕ್ಟೋಬರ್ 16/10/2026 ರಂದು ಶುಕ್ರವಾರ ದ್ವಾರಕಾ ಪಾರ್ಟಿ ಹಾಲ್ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಂ.ಜಿ.ಕಿರಣ್ ಕುಮಾರ್ ತಿಳಿಸಿದರು.
ಸೋಮವಾರ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಚಳವಳಿಯನ್ನು ಕ್ರಿಯಾಶೀಲಗೊಳಿಸಲು ಸಮಿತಿಗಳನ್ನು ಪುನಾರಚಿಸಲಾಗುತ್ತಿದೆ. ಈ ನಾಡಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಸೇರಿದಂತೆ ಎಲ್ಲಾ ರೀತಿ ಯಲ್ಲೂ ಹಿಂದುಳಿದ ಬಡಜನರು ಎಂದು ಪರಿಗಣಿಸಲಾಗುತ್ತದೆ. ಈ ಜನರು ಸುಶಿಕ್ಷಿತರಾಗಿ ಸಂಘಟಿತ ರಾಗಿ ತಮ್ಮ ಹಕ್ಕುಗಳನ್ನು ಪಡೆಯುವಂತಾಗಬೇಕು ಈ ನಿಟ್ಟಿನಲ್ಲಿ ಹೋರಾಡಲು ಸಂಘಟಿತರಾಗ ಬೇಕು ಎಂದು ಹೇಳಿದರು.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.




