ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೃಷ್ಣೇಗೌಡ ಅವರು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣ, ಸಹಕಾರ, ಸಾಹಿತ್ಯ, ಧಾರ್ಮಿಕ, ರಾಜಕೀಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ವಿಶಿಷ್ಟ ವ್ಯಕ್ತಿ ಕೃಷ್ಣೇಗೌಡ. ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಮಾತನಾಡಿ ಸರಳ, ಸಜ್ಜನ ಸಮಾಜ ಸೇವಕನಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಯೋಗ್ಯರಿಗೆ ಸಂದ ಗೌರವವಾಗಿದೆ. ಅವರ ಸಮಾಜ ಸೇವೆ ಹೀಗೆ ಮುಂದುವರೆಯಲಿ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ ಅಭಿನಂದನೆಗಳು. ತಮ್ಮ ಸಾಧನೆ, ಪರಿಶ್ರಮ ಹಾಗೂ ಸೇವಾ ಮನೋಭಾವದಿಂದ ನಾಡಿನ ಯುವಜನತೆಗೆ ನೀವೆಲ್ಲರೂ ಪ್ರೇರಣೆಯಾಗಿದ್ದೀರಿ. ಕನ್ನಡ ನಾಡು, ನುಡಿ, ಸಂಸ್ಕೃತಿಯ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಮ್ಮ ಸಾಧನೆಯ ಪಯಣ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದ್ದಾರೆ.
ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗೆ ಅವರು, 2026 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಣೆ ಮಾಡಿದರು.
ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್
ಸಾಹಿತ್ಯ, ಜನಪದ ,ಸಂಗೀತ, ನೃತ್ಯ ಚಲನಚಿತ್ರ, ಯಕ್ಷಗಾನ, ಬಯಲಾಟ, ರಂಗಭೂಮಿ, ಮಾಧ್ಯಮ ,ವಿಜ್ಞಾನ, ಸಮಾಜಸೇವೆ,, ವೈದ್ಯಕೀಯ, ಆಡಳಿತ, ನ್ಯಾಯಾಂಗ ,ಕ್ರೀಡೆ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸುಮಾರು 71 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿಯು 5 ಲಕ್ಷ ನಗದು, ಹಾಗೂ 25 ಗ್ರಾಂ ಚಿನ್ನ, ಒಳಗೊಂಡಿರುತ್ತದೆ.




