ಬಾಗೇಪಲ್ಲಿ | ನಕಲಿ ಅಕ್ರಮ ಖಾತೆಗಳನ್ನು ಸೃಷ್ಟಿಸಿ, ಪಾರ್ಕ್ ಮತ್ತು ಸಿ.ಎ ಜಾಗಗಳನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿದ್ದ ಪಿಡಿಒ ಭಾಗ್ಯಲಕ್ಷ್ಮಿ. ಎ ಅಮಾನತು

Date:

ತಾಲ್ಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭಾಗ್ಯಲಕ್ಷ್ಮಿ. ಎ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ನವೀನ್ ಭಟ್. ವೈ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಪ್ರಕರಣದ ಹಿನ್ನೆಲೆ ಮತ್ತು ತನಿಖೆ:-

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಬಾಗೇಪಲ್ಲಿಯ ಪತ್ರಕರ್ತರು ಹಾಗೂ ವಕೀಲರಾದ ನಾಗಭೂಷಣ್. ಎನ್ ಅವರು ದಿನಾಂಕ 29.10.2026 ರಂದು ಸಲ್ಲಿಸಿದ್ದ ದೂರು ಅರ್ಜಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಹಣದ ಆಸೆಗಾಗಿ ಮಧ್ಯವರ್ತಿಗಳ ಮೂಲಕ ಭೂ ಪರಿವರ್ತನೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಲೇಔಟ್ ನಕ್ಷೆ ಇಲ್ಲದೆ, ನಕಲಿ ಅಕ್ರಮ ಖಾತೆಗಳನ್ನು ಸೃಷ್ಟಿಸಿ, ಪಾರ್ಕ್ ಮತ್ತು ಸಿ.ಎ ಜಾಗಗಳನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಈ ಸಂಬಂಧ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮೂಲ ದಾಖಲೆಗಳನ್ನು ಪರಿಶೀಲಿಸಿದ ತನಿಖಾ ತಂಡವು ದಿನಾಂಕ 09.11.2026 ರಂದು ವರದಿ ಸಲ್ಲಿಸಿತ್ತು. ತನಿಖಾ ವರದಿಯಲ್ಲಿ ಈ ಕೆಳಗಿನ ಅಂಶಗಳು ಕಂಡುಬಂದಿದ್ದವು

ಅಕ್ರಮ ನಿವೇಶನ ಸೃಷ್ಟಿ:-

ಘಂಟಂವಾರಿಪಲ್ಲಿ ಗ್ರಾಮದ ರಾಜಾರೆಡ್ಡಿ ಮತ್ತು ಶಿವಾರೆಡ್ಡಿ ಲೇಔಟ್‌ಗೆ ಸಂಬಂಧಿಸಿದಂತೆ ದಿನಾಂಕ 26.03.2010 ರಂದು ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ವಿನ್ಯಾಸದ ನಕ್ಷೆಯಲ್ಲಿ ಒಟ್ಟು 17 ನಿವೇಶನಗಳಿಗೆ ಅನುಮೋದನೆ ನೀಡಲಾಗಿತ್ತು. ಆದರೆ, ಗ್ರಾಮ ಪಂಚಾಯಿತಿಯವರು 17 ನಿವೇಶನಗಳ ನಕ್ಷೆಯನ್ನು ಪರಿಗಣಿಸದೆ 23 ನಿವೇಶನಗಳ ಖಾಸಗಿ ನಕ್ಷೆಯನ್ನು ತಯಾರಿಸಿ, ನಾಗರಿಕ ಸೌಲಭ್ಯ ಪಾರ್ಕ್‌ಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ 6 ನಿವೇಶನಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿ ಇ-ಸ್ವತ್ತುಗಳನ್ನು ವಿತರಿಸಿರುವುದು ಕಂಡುಬಂದಿದೆ.
ದಾಖಲೆ ಪರಿಶೀಲನೆ ಇಲ್ಲದೆ ಮ್ಯುಟೇಷನ್:

ದೂರುದಾರರು ಸಲ್ಲಿಸಿದ ಸುಮಾರು 14 ಇ-ಸ್ವತ್ತು ದಾಖಲೆಗಳಿಗೆ (ಅನುಬಂಧ-1 ರ ಕ್ರಮ ಸಂಖ್ಯೆ 2 ರಿಂದ 15 ರವರೆಗೆ) ಸಂಬಂಧಿಸಿದಂತೆ, ಈ ಹಿಂದೆ ಸೃಜನೆಯಾದ ಇ-ಸ್ವತ್ತುಗಳಿಗೆ ಯಾವುದೇ ದಾಖಲಾತಿಗಳನ್ನು ಪರಿಶೀಲಿಸದೆ ಮ್ಯುಟೇಷನ್ ನೀಡಿರುವುದು ಇ-ಸ್ವತ್ತು ತಂತ್ರಾಂಶದ ಪರಿಶೀಲನೆಯಲ್ಲಿ ಕಂಡುಬಂದಿದೆ. ಸಂಬಂಧಿಸಿದ ಕಡತಗಳನ್ನು ಪರಿಶೀಲನೆಗೆ ಸಲ್ಲಿಸಿಲ್ಲ.

ಅಗತ್ಯ ದಾಖಲೆಗಳಿಲ್ಲದೆ ಇ-ಸ್ವತ್ತು ವಿತರಣೆ: ಇ-ಸ್ವತ್ತು ಸಂಖ್ಯೆ 152800102400126195 ಕ್ಕೆ ಸಂಬಂಧಿಸಿದಂತೆ ಭೂ ಪರಿವರ್ತನೆ ಆದೇಶ, ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅನುಮೋದಿತ ನಕ್ಷೆ ಹಾಗೂ ಇತರೆ ದಾಖಲಾತಿಗಳನ್ನು ಇ-ಸ್ವತ್ತು ತಂತ್ರಾಂಶದಲ್ಲಿ ಇಂಧೀಕರಿಸದೆ ಇ-ಸ್ವತ್ತು ವಿತರಿಸಿರುವುದು ಪತ್ತೆಯಾಗಿದೆ.
ಶಿಸ್ತು ಕ್ರಮ ಮತ್ತು ಆದೇಶದ ಮುಖ್ಯಾಂಶಗಳು ತನಿಖಾ ವರದಿಯ ಆಧಾರದ ಮೇಲೆ ದಿನಾಂಕ 17.11.2026 ರಂದು ಕಾರಣ ಕೇಳಿ ನೋಟೀಸ್ ನೀಡಲಾಗಿದ್ದು, ದಿನಾಂಕ 19.11.2026 ರಂದು ನೌಕರರು ಸಲ್ಲಿಸಿದ ಸಮಜಾಯಿಷಿಯು ಸಮಂಜಸವಾಗಿಲ್ಲದ ಕಾರಣ ಶಿಸ್ತು ಕ್ರಮ ಜರುಗಿಸಲಾಗಿದೆ.

ಅಮಾನತ್ತು ಆದೇಶ: ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957 ರ ನಿಯಮ 10(1) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರದನ್ವಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭಾಗ್ಯಲಕ್ಷ್ಮಿ. ಎ ಅವರನ್ನು ಕರ್ತವ್ಯ ನಿರ್ವಹಣೆಯಲ್ಲಿನ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನಕ್ಕಾಗಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

  • ಲೀನ್ ಬದಲಾವಣೆ: ಅಮಾನತ್ತು ಅವಧಿಯಲ್ಲಿ ಅವರ ಲೀನ್‌ ಅನ್ನು ಬಾಗೇಪಲ್ಲಿ ತಾಲ್ಲೂಕಿನ ಬಿಳ್ಳೂರು ಗ್ರಾಮ ಪಂಚಾಯಿತಿಗೆ ಬದಲಾಯಿಸಲಾಗಿದೆ.
    ಷರತ್ತುಗಳು: ಅಮಾನತ್ತು ಅವಧಿಯಲ್ಲಿ ನೌಕರರು ಜೀವನಾಧಾರ ಭತ್ಯೆ ಪಡೆಯಲು ಅರ್ಹರಿದ್ದು, ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...

ವಿಜಯಪುರ |ಸಂವಿಧಾನ ಎಲ್ಲ ಭಾರತೀಯರ ಆಸ್ತಿ ;ಪ್ರೊ ಬಿ ಎಲ್ ಲಕ್ಕಣ್ಣನವರ

ಸಂವಿಧಾನ ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ...