ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

Date:

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ ಅವರ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರ ಮಾನ್ಯ ಮುಖ್ಯಮಂತ್ರಿ ಗಳಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

- Advertisement -

ತದನಂತರ ನಿವೃತ್ತಿ ನೌಕರರ ಪದಾಧಿಕಾರಿಗಳಾದ ಡಿ.ಟಿ.ಮುನಿ ಸ್ವಾಮಿ ಮಾತನಾಡಿ ಪಿಂಚಣಿದಾರರ ಹಿತಾಸಕ್ತಿಗಾಗಿ ಒಟ್ಟು 13 ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ಮುಖ್ಯವಾಗಿ ಹಣಕಾಸು ಮಸೂದೆ (ಮಾನ್ಯತಾ ಕಾಯಿದೆ) 2025 ರದ್ದುಪಡಿಸುವುದು ಹಾಗೂ ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಇದರ ಜೊತೆಗೆ ಎಲ್ಲಾ ರಾಜ್ಯಗಳಲ್ಲಿ ತುಟ್ಟಿಭತ್ತೆ (ಡಿಎ) ಯನ್ನು ಕೇಂದ್ರ ಪಿಂಚಣಿದಾರರ ಮಟ್ಟಕ್ಕೆ ಏರಿಸುವುದು, 31 ಡಿಸೆಂಬರ್ 2025ರೊಳಗೆ ನಿವೃತ್ತರಾದವರಿಗೆ ಎಂಟನೇ ವೇತನ ಆಯೋಗದ ಸೌಲಭ್ಯ ವಿಸ್ತರಿಸುವುದು, ಪಿಂಚಣಿ ಕಮ್ಯುಟೇಶನ್ ಕಡಿತಾವಧಿಯನ್ನು 11 ವರ್ಷಗಳಿಗೆ ಸೀಮಿತಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಲಾಗಿದೆ.

ಕೋವಿಡ್-19 ಅವಧಿಯ 18 ತಿಂಗಳ ಡಿಎ ಬಾಕಿಯನ್ನು ಬಡ್ಡಿಯೊಂದಿಗೆ ಪಾವತಿಸುವುದು, ನ್ಯಾಯಾಲಯ ತೀರ್ಪುಗಳನ್ನು ಎಲ್ಲಾ ನೌಕರರಿಗೆ ಅನ್ವಯಿಸುವುದು, ರೈಲು, ವಿಮಾನ, ವೋಲ್ವೋ ಹಾಗೂ ಎಸಿ ಬಸ್‌ಗಳಲ್ಲಿ ಪ್ರಯಾಣ ರಿಯಾಯಿತಿಗಳನ್ನು ಮರುಸ್ಥಾಪಿಸುವುದು, ಪಿಂಚಣಿದಾರರಿಗೆ ಸಮಗ್ರ ಆರೋಗ್ಯ ವಿಮೆ ನೀಡುವಂತೆ ಕೂಡ ಮನವಿ ಮಾಡಲಾಗಿದೆ.

ವಯಸ್ಸಿನ ಆಧಾರದ ಮೇಲೆ ಪಿಂಚಣಿಯಲ್ಲಿ ಹಂತ ಹಂತವಾಗಿ ಹೆಚ್ಚಳ ನೀಡುವಂತೆ, 65 ವರ್ಷಗಳ ನಂತರ 10%ರಿಂದ 95 ವರ್ಷಗಳ ನಂತರ ಶೇ.100ರವರೆಗೆ ಹೆಚ್ಚಳ ನೀಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸುವುದು ಹಾಗೂ ಹೊಸ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವಂತೆ ಕೂಡ ಒತ್ತಾಯಿಸಲಾಗಿದೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ನಿವೃತ್ತಿ ನೌಕರರ ಪದಾಧಿಕಾರಿಗಳಾದ ವೀರಾಚಾರಿ,ಚಂದ್ರನ್,ಪಿ.ಎಲ್. ಅಂಜನಪ್ಪ,ಕಾರಕೂರಪ್ಪ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ವೋಟ್ ಬಚಾವೋ, ದೇಶ್ ಬಚಾವೋ’; ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆ‌ರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮತದಾನದ ಹಕ್ಕಿನಿಂದ...

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರೈತ ಸಂಘದಿಂದ ರಸ್ತೆ ತಡೆ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು...

ವಿಜಯಪುರ | ಕಬ್ಬು ಟನ್‌ಗೆ ರೂ.3,600 ಏಕರೂಪ ದರಕ್ಕೆ ಆಗ್ರಹ: ರೈತರ ಬೃಹತ್ ಹೋರಾಟಕ್ಕೆ ಸಿದ್ಧತೆ

ಕಬ್ಬಿನ ದರ ನಿಗದಿಯಲ್ಲಿ ರೈತರಿಗೆ ಅನ್ಯಾಯವಾಗದಂತೆ ರಾಜ್ಯದ ಎಲ್ಲ ಭಾಗಗಳಿಗೂ ಏಕರೂಪದ...

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...