ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗೇಪಲ್ಲಿ ಪೊಲೀಸರಿಂದ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಸರ್ಕಲ್ ಇನ್‍ಸ್ಪೆಕ್ಟರ್ ಅಜಯ್ ಸಾರಥಿ ಮಾತನಾಡಿ ‘ಸೆ.14ರಂದು ಗಣೇಶ ಚತುರ್ಥಿ ಇದ್ದು, ಅಲ್ಲಿಂದ ಗಣೇಶ ವಿಸರ್ಜನೆವರೆಗೆ ಯಾವುದೇ ಧಾರ್ಮಿಕ ಕಲಹಗಳು, ಕೋಮು ಗಲಭೆಗಳು ಉಂಟಾಗದಂತೆ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು’ ಎಂದು ಮನವಿ ಮಾಡಿದರು.
ಮತ್ತೊಂದು ಧರ್ಮೀಯರ ಭಾವನೆಗಳಿಗೆ ನೋವುಂಟು ಮಾಡದಂತೆ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಲು ಸಾರ್ವಜನಿಕರು ಸಹಕರಿಸಬೇಕು’ ಎಂದು ಹೇಳಿದರು.
‘ಗಣೇಶ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಪೊಲೀಸ್, ಬೆಸ್ಕಾಂ, ಪುರಸಭೆ, ಸ್ಥಳೀಯ ಗ್ರಾಮ ಪಂಚಾಯಿತಿಗಳು, ಆಹಾರ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮೂರ್ತಿಯ ಪ್ರತಿಷ್ಠಾಪನೆಗೆ ಸ್ಥಳ, ವಿಸರ್ಜನೆ ಮಾಡುವ ದಿನಾಂಕ, ಮೆರವಣಿಗೆ ಹೋಗುವ ಮಾರ್ಗ, ವಿಸರ್ಜನೆ ಮಾಡುವ ಸ್ಥಳ ಸೇರಿದಂತೆ ಅಗತ್ಯವಾದ ಎಲ್ಲ ಮಾಹಿತಿಯನ್ನು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ನೀಡಬೇಕು’ ಎಂದು ಹೇಳಿದರು.
ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವಂತೆ ರಸ್ತೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಾರದು. ಮೆರವಣಿಗೆ ವೇಳೆ ಡಿ.ಜೆ ಬಳಸಬಾರದು, ಪಟಾಕಿ ಸಿಡಿಸಬಾರದು, ಸಾಮಾಜಿಕ ಜಾಲ ತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಭಂಗ ತರುವಂಥ ಪ್ರಚೋದನಕಾರಿ ಸಂದೇಶ, ವಿಡಿಯೊ ಹಂಚಿಕೊಳ್ಳಬಾರದು’ ಎಂದು ನಿರ್ದೇಶಿಸಿದರು.
ಇದನ್ನು ಓದಿದ್ದೀರಾ..?ಚಿಂತಾಮಣಿ | ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ತಹಸೀಲ್ದಾರ್‌ಗೆ ಮನವಿ
ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳಾದ ಸೈಯದ್ ಅನ್ಸರ್,ಗೋವಿಂದ, ನೇತಾಜಿ ಸರ್ಕಲ್ ಮಂಜುನಾಥ್, ಕರವೇ ಹರೀಶ್ ಹಾಗೂ ಸಾರ್ವಜನಿಕರು ಹಾಜರಿದ್ದರು.





